ಹೈದರಾಬಾದ್: ದೇವಾಲಯದ ಮುಂದೆ ಮಲವಿಸರ್ಜನೆ ಮಾಡಿ ಅಪವಿತ್ರಗೊಳಿಸಿದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಥಳಿಸಿದ ಸ್ಥಳೀಯರು ಆತನಿಕೆ ತಕ್ಕ ಪಾಠ ಕಲಿಸಿದ್ದಾರೆ.
ಹೈದರಾಬಾದ್‌ನ ಮಲ್ಕಜ್‌ಗಿರಿಯಲ್ಲಿರುವ ದೇವಸ್ಥಾನದ ಬಳಿ ವ್ಯಕ್ತಿ ಮಲವಿಸರ್ಜನೆ ಮಾಡಿದ್ದು, ಈ ವೇಳೆ ವ್ಯಕ್ತಿಯನ್ನು ಹಿಡಿದ ಸ್ಥಳೀಯರು ಥಳಿಸಿದ್ದಾರೆ.
ಬಳಿಕ ಆತನ ಕೈಯಿಂದಲೇ ಸ್ಥಳವನ್ನು ಸ್ವಚ್ಛಗೊಳಿಸಿ, ಕ್ಷಮೆ ಕೇಳುವಂತೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆಕ್ರೋಶಗಳು ವ್ಯಕ್ತವಾಗುತ್ತಿವೆ.
ಜನವರಿ 10ರಂದು ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಯಾವುದೇ ಹೇಳಿಕೆಗಳನ್ನೂ ನೀಡಿಲ್ಲ. ಈ ನಡುವೆ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯುಂಟು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.