ನಟ ವಿಜಯ್ 
ದೇಶ

ಕರೂರ್ ಕಾಲ್ತುಳಿತ ಪ್ರಕರಣ: ಸೋಮವಾರ ಸಿಬಿಐ ಮುಂದೆ ವಿಚಾರಣೆಗೆ ವಿಜಯ್ ಹಾಜರು! ಭದ್ರತೆಗೆ ಮನವಿ

ಅವರಿಗೆ ಭದ್ರತೆಯನ್ನು ಒದಗಿಸಲು ರಾಷ್ಟ್ರ ರಾಜಧಾನಿಯ ಪೊಲೀಸರಿಗೆ ಪಕ್ಷವು ಮನವಿ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನವದೆಹಲಿ: ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಮುಖ್ಯಸ್ಥ ವಿಜಯ್ ಅವರು ಜನವರಿ 12 ರಂದು ದೆಹಲಿಯಲ್ಲಿ ಸಿಬಿಐ ಮುಂದೆ ಹಾಜರಾಗಲಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರಿಗೆ ಭದ್ರತೆ ಒದಗಿಸಲು ರಾಷ್ಟ್ರ ರಾಜಧಾನಿಯ ಪೊಲೀಸರಿಗೆ ಪಕ್ಷವು ಮನವಿ ಮಾಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತನಗೆ ನೀಡಿರುವ ಸಮನ್ಸ್‌ಗೆ ಅನುಗುಣವಾಗಿ ವಿಜಯ್ ಅವರು ಸಿಬಿಐ ಕೇಂದ್ರ ಕಚೇರಿಯಲ್ಲಿ ವಿಚಾರಣೆಗಾಗಿ ಅಧಿಕಾರಿಗಳ ಮುಂದೆ ಹಾಜರಾಗಲಿದ್ದಾರೆ. ಅವರು ಸೋಮವಾರ ಬೆಳಿಗ್ಗೆ 7 ಗಂಟೆಗೆ ಚೆನ್ನೈನಿಂದ ಚಾರ್ಟರ್ಡ್ ಫ್ಲೈಟ್ ಮೂಲಕ ನವದೆಹಲಿಗೆ ತೆರಳಲಿದ್ದು, ಸಿಬಿಐ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಟಿವಿಕೆ ಮೂಲಗಳು ತಿಳಿಸಿವೆ.

ನಟ ಹಾಗೂ ರಾಜಕಾರಣಿಗೆ ಸಂಪೂರ್ಣ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ರಾಷ್ಟ್ರ ರಾಜಧಾನಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಟಿವಿಕೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ