ತೇಜ್ ಪ್ರತಾಪ್ ಯಾದವ್ 
ದೇಶ

'BJP feast' ನಲ್ಲಿ ಲಾಲು ಹಿರಿಯ ಪುತ್ರ! NDA ಸೇರ್ತಾರಾ? Video

ಆರ್‌ಜೆಡಿಯಿಂದ ಉಚ್ಛಾಟನೆ ನಂತರ ತಮ್ಮದೇ ಆದ ಜನಶಕ್ತಿ ಜನತಾ ದಳ ಪಕ್ಷವನ್ನು ಸ್ಥಾಪಿಸಿರುವ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಅವರಿಗೆ ಸಿನ್ಹಾ ಆತ್ಮೀಯ ಸ್ವಾಗತ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಅವರಿಗೆ ಸಿನ್ಹಾ ಆಹ್ವಾನ ನೀಡಿದ್ದರು.

ಪಾಟ್ನಾ: ರಾಷ್ಟ್ರೀಯ ಜನತಾ ದಳ (RJD) ಅಧ್ಯಕ್ಷ ಲಾಲು ಪ್ರಸಾದ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ NDA ಸೇರುವ ವದಂತಿಗಳು ಹೆಚ್ಚಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಬಿಹಾರ ಉಪ ಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಮಂಗಳವಾರ ಆಯೋಜಿಸಿದ್ದ BJP feast (ಔತಣಕೂಟ) ನಲ್ಲಿ ಪಾಲ್ಗೊಳ್ಳುವ ಮೂಲಕ ಎಲ್ಲರ ಕುತೂಹಲ ಕೆರಳಿಸಿದ್ದಾರೆ.

ಆರ್‌ಜೆಡಿಯಿಂದ ಉಚ್ಛಾಟನೆ ನಂತರ ತಮ್ಮದೇ ಆದ ಜನಶಕ್ತಿ ಜನತಾ ದಳ ಪಕ್ಷವನ್ನು ಸ್ಥಾಪಿಸಿರುವ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಅವರಿಗೆ ಸಿನ್ಹಾ ಆತ್ಮೀಯ ಸ್ವಾಗತ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಅವರಿಗೆ ಸಿನ್ಹಾ ಆಹ್ವಾನ ನೀಡಿದ್ದರು.

ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಸಿನ್ಹಾ ಅವರ ನಿವಾಸದಲ್ಲಿ ಆಯೋಜಿಸಿದ್ದ feast ನಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಜೆಡಿಯು ಕಾರ್ಯಾಧ್ಯಕ್ಷ ಸಂಜಯ್ ಕುಮಾರ್ ಝಾ ಮತ್ತು ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಮುಖ್ಯಸ್ಥ ಸಂತೋಷ್ ಕುಮಾರ್ ಸುಮನ್ ಸೇರಿದಂತೆ ಹಿರಿಯ ಎನ್‌ಡಿಎ ನಾಯಕರು ಪಾಲ್ಗೊಂಡಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡಿರುವ ಯಾದವ್, NDA ಸೇರುವ ಯೋಜನೆ ಇದೆಯೇ ಎಂದು ಪತ್ರಕರ್ತರು ಕೇಳಿದಾಗ, ನಾವು ವಿಭಿನ್ನ ರಾಜಕೀಯ ಸಿದ್ಧಾಂತಗಳನ್ನು ಹೊಂದಿರಬಹುದು. ಆದರೆ ಒಂದೇ ರೀತಿಯ ಸಂಸ್ಕೃತಿಯನ್ನು ಹಂಚಿಕೊಳ್ಳುತ್ತೇವೆ ಎಂದರು.

ಇದೇ ಧಾಟಿಯಲ್ಲಿ ಉತ್ತರಿಸಿದ ಸಿನ್ಹಾ, ಎಲ್ಲಾ ಬಿಹಾರಿಗಳು ಒಗ್ಗಟ್ಟಾಗಿ ನಿಲ್ಲುತ್ತಾರೆ. ಸನಾತನ ಸಂಸ್ಕೃತಿಯಿಂದ ಸಕಾರಾತ್ಮಕ ಶಕ್ತಿಯನ್ನು ಸೆಳೆಯುತ್ತಾರೆ. ಇದು ಮಕರ ಸಂಕ್ರಾಂತಿಯ ಸಾರಾಂಶವಾಗಿದೆ. ತೇಜ್ ಪ್ರತಾಪ್ ಯಾದವ್ ಎನ್ ಡಿಎ ಸೇರ್ಪಡೆ ಕುರಿತು ಸಮಯ ಬಂದಾಗ ನಿಮಗೆ ತಿಳಿಯುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!

'ಅಸಹ್ಯ, ವಿಕೃತ, ನಾಚಿಕೆಗೇಡು.. ಕ್ಷಮಿಸೋ ಮಾತೇ ಇಲ್ಲ.. ಕಾನೂನು ಕ್ರಮ ಖಂಡಿತ': ನಟ Jr NTR ಕೆಂಡಾಮಂಡಲ, ಆಗಿದ್ದೇನು?