ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಸುಕ್ಮಾದಲ್ಲಿ 29 ನಕ್ಸಲೀಯರು ಶರಣಾಗತಿ

ಈ ಮಾವೋವಾದಿಗಳು, "ಪೂನಾ ಮಾರ್ಗೆಮ್" ಉಪಕ್ರಮದಡಿಯಲ್ಲಿ ಹಿರಿಯ ಪೊಲೀಸ್ ಮತ್ತು ಸಿಆರ್‌ಪಿಎಫ್ ಅಧಿಕಾರಿಗಳ ಮುಂದೆ ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಶರಣಾಗಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಹೇಳಿದ್ದಾರೆ.

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಬುಧವಾರ 29 ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿಷೇಧಿತ ಸಿಪಿಐ(ಮಾವೋವಾದಿ)ನ ಪ್ರಮುಖ ಸದಸ್ಯರಾಗಿ ಸಕ್ರಿಯರಾಗಿರುವ ಈ ಮಾವೋವಾದಿಗಳು, "ಪೂನಾ ಮಾರ್ಗೆಮ್" ಉಪಕ್ರಮದಡಿಯಲ್ಲಿ ಹಿರಿಯ ಪೊಲೀಸ್ ಮತ್ತು ಸಿಆರ್‌ಪಿಎಫ್ ಅಧಿಕಾರಿಗಳ ಮುಂದೆ ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಶರಣಾಗಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಹೇಳಿದ್ದಾರೆ.

ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ಅವರು ಪ್ರಭಾವಿತರಾಗಿದ್ದಾರೆ ಎಂದು ಕಿರಣ್ ತಿಳಿಸಿದ್ದಾರೆ.

ಶರಣಾದವರಲ್ಲಿ, ಗೋಗುಂಡಾ ಪ್ರದೇಶದ ದಂಡಕಾರಣ್ಯ ಆದಿವಾಸಿ ಕಿಸಾನ್ ಮಜ್ದೂರ್ ಸಂಘಾನ್ (DAKMS - ಮಾವೋವಾದಿಗಳ ಪ್ರಮುಖ ಘಟಕ) ಮುಖ್ಯಸ್ಥ ಪೋಡಿಯಮ್ ಬುಧ್ರಾ ಅವರ ತಲೆಗೆ 2 ಲಕ್ಷ ರೂ. ಬಹುಮಾನವಿತ್ತು. ಇತರ ನಕ್ಸಲರು ಡಿಎಕೆಎಂಎಸ್, ಮಿಲಿಟಿಯಾ ಮತ್ತು ಮಾವೋವಾದಿಗಳ ಜನತಾನ ಸರ್ಕಾರ್ ಘಟಕಗಳ ಸದಸ್ಯರಾಗಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ಗೋಗುಂಡಾ ಪ್ರದೇಶದಲ್ಲಿ ಇತ್ತೀಚೆಗೆ ಭದ್ರತಾ ಶಿಬಿರದ ಸ್ಥಾಪನೆಯು ಶರಣಾಗತಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. ಶಿಬಿರ ಸ್ಥಾಪನೆಯ ನಂತರ, ನಕ್ಸಲ್ ವಿರೋಧಿ ಕಾರ್ಯಾಚರಣೆಗಳು ತೀವ್ರಗೊಂಡವು ಮತ್ತು ನಿರಂತರ ಒತ್ತಡ ಹಾಗೂ ನಿರಂತರ ಶೋಧ ಕಾರ್ಯಾಚರಣೆ ಈ ಪ್ರದೇಶದಲ್ಲಿ ಮಾವೋವಾದಿ ಚಟುವಟಿಕೆಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪ್ರಬಲ ಸ್ಫೋಟ: ಮೂವರು ಸಾವು, ಇಬ್ಬರು ಗಂಭೀರ ಗಾಯ

ಕೂಡಲೇ ಇರಾನ್ ತೊರೆಯಿರಿ: ಭಾರತೀಯ ನಾಗರಿಕರಿಗೆ 2ನೇ ಬಾರಿಗೆ ಸಲಹೆ!

ಚೀನಾದ ಆಡಳಿತರೂಢ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ ಆರ್‌ಎಸ್‌ಎಸ್‌ಗೆ ಏನು ಕೆಲಸ?: ಪ್ರಿಯಾಂಕ್ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಬಂಧನ ಭೀತಿಯಲ್ಲಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ! ಷರತ್ತು ಬದ್ಧ ಜಾಮೀನು ಮಂಜೂರು

BBK 12 : ದೊಡ್ಮನೆಯಿಂದ 'ಧ್ರುವಂತ್' ಮಿಡ್‌ ವೀಕ್‌ ಎಲಿಮಿನೇಟ್?

SCROLL FOR NEXT