ರಾಂಚಿ: ಜಾರ್ಖಂಡ್‌ನ ಹಜಾರಿಬಾಗ್‌ನ ಬಾರಾ ಬಜಾರ್ TOP ಪ್ರದೇಶದ ಹಬೀಬ್ ನಗರದಲ್ಲಿ ಬುಧವಾರ ಪ್ರಬಲ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕೆಲವು ಜನ ಖಾಲಿ ಜಾಗದಲ್ಲಿ ಪೊದೆಗಳನ್ನು ತೆರವುಗೊಳಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಜೋರಾದ ಸ್ಫೋಟ ಸಂಭವಿಸಿದ್ದು, ಆ ಪ್ರದೇಶ ಜನರಲ್ಲಿ ಭೀತಿ ಮತ್ತು ಅವ್ಯವಸ್ಥೆ ಉಂಟು ಮಾಡಿದೆ.
ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ, ಎಲ್ಲಾ ಗಾಯಾಳುಗಳನ್ನು ಸದರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಸ್ಫೋಟದ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಪೊಲೀಸರು ಘಟನೆ ಬಗ್ಗೆ ತನಿಖೆ ಮಾಡುತ್ತಿದ್ದಾರೆ.
ಸದ್ಯ ಇಡೀ ಪ್ರದೇಶವನ್ನು ಸೀಲ್ ಮಾಡಲಾಗಿದೆ ಮತ್ತು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ(FSL) ತಂಡವನ್ನು ತನಿಖೆಗಾಗಿ ಕರೆಸಲಾಗಿದೆ.
"ಹಜಾರಿಬಾಗ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಪತಿ, ಪತ್ನಿ ಮತ್ತು ಇನ್ನೊಬ್ಬ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಸ್ಫೋಟದ ಸ್ವರೂಪ ಮತ್ತು ಕಾರಣವನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ" ಎಂದು ಜಾರ್ಖಂಡ್ ಪೊಲೀಸ್ ವಕ್ತಾರ ಮೈಕೆಲ್‌ರಾಜ್ ಎಸ್ ಹೇಳಿದ್ದಾರೆ.