ಕೊಲ್ಲಂ (ಕೇರಳ): ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಹಾಸ್ಟೆಲ್‌ನ ಕೋಣೆಯಲ್ಲಿ ಗುರುವಾರ ಇಬ್ಬರು ಕ್ರೀಡಾ ಪ್ರಶಿಕ್ಷಣಾರ್ಥಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
17 ಮತ್ತು 15 ವರ್ಷ ವಯಸ್ಸಿನ ಇಬ್ಬರು ಹುಡುಗಿಯರು ಕೋಯಿಕ್ಕೋಡ್ ಮತ್ತು ತಿರುವನಂತಪುರಂ ನಿವಾಸಿಗಳಾಗಿದ್ದು, ಬೆಳಿಗ್ಗೆ 5 ಗಂಟೆ ಸುಮಾರಿಗೆ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬೆಳಗಿನ ತರಬೇತಿ ಅವಧಿಗೆ ಅವರಿಬ್ಬರು ಬಂದಿಲ್ಲದಿರುವುದು ಇತರ ಹಾಸ್ಟೆಲ್‌ಗಳ ವಿದ್ಯಾರ್ಥಿನಿಯರ ಗಮನಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಪದೇ ಪದೆ ಬಾಗಿಲು ತಟ್ಟಿದರೂ ಉತ್ತರಿಸದಿದ್ದಾಗ, ಹಾಸ್ಟೆಲ್ ಅಧಿಕಾರಿಗಳು ಬಾಗಿಲು ಒಡೆದು ನೋಡಿದಾಗ ಇಬ್ಬರೂ ಹುಡುಗಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
15 ವರ್ಷದ ಬಾಲಕಿ ಬೇರೆ ಕೋಣೆಯಲ್ಲಿ ವಾಸಿಸುತ್ತಿದ್ದಳು. ಆದರೆ, ಬುಧವಾರ ರಾತ್ರಿ ಇನ್ನೊಂದು ಹುಡುಗಿಯ ಕೋಣೆಯಲ್ಲಿ ಕಳೆದಿದ್ದಳು. ಅವರಿಬ್ಬರನ್ನು ಮುಂಜಾನೆ ಇತರ ಹಾಸ್ಟೆಲ್ ವಿದ್ಯಾರ್ಥಿನಿಯರು ನೋಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
12ನೇ ತರಗತಿ ಓದುತ್ತಿದ್ದ 17 ವರ್ಷದ ಬಾಲಕಿ ಅಥ್ಲೆಟಿಕ್ಸ್ ತರಬೇತಿ ಪಡೆಯುತ್ತಿದ್ದಳು. ಮತ್ತೊಬ್ಬಳು ಕಬಡ್ಡಿ ಆಟಗಾರ್ತಿ ಮತ್ತು 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು.
ಕೊಠಡಿಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.