ಗಾಯಾಳುಗಳ ಚಿತ್ರ 
ದೇಶ

ಜಾರ್ಖಂಡ್: ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ 'ಬಸ್' ಪಲ್ಟಿ; ಏಳು ಮಂದಿ ದುರ್ಮರಣ, 80 ಮಂದಿಗೆ ಗಾಯ

ಈ ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಲತೇಹರ್ ಜಿಲ್ಲಾಧಿಕಾರಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ರಾಂಚಿ: ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ರಾಜ್ಯದಲ್ಲಿ ಭಾನುವಾರ ಲತೇಹರ್ ಜಿಲ್ಲೆಯಲ್ಲಿ ನಡೆದಿದೆ

ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯಿಂದ ಲತೇಹಾರ್‌ನ ಮಹುವದಂರ್ ನಲ್ಲಿ ಆಯೋಜಿಸಿದ್ದ ಮದುವೆಗೆ ಜನರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಪಲ್ಟಿಯಾಗಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಗೌರವ್ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಈ ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಲತೇಹರ್ ಜಿಲ್ಲಾಧಿಕಾರಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಗಾಯಗೊಂಡ 60 ಮಂದಿಯನ್ನು ಮಹುವದನರ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮತ್ತು 20 ಕ್ಕೂ ಹೆಚ್ಚು ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವಿಪಿನ್ ಕುಮಾರ್ ದುಬೆ ಹೇಳಿದ್ದಾರೆ. ಗಂಭೀರವಾಗಿರುವ ಮೂವತ್ತೆರಡು ಜನರನ್ನು ಉತ್ತಮ ಚಿಕಿತ್ಸೆಗಾಗಿ ರಾಂಚಿಯ RIMS ಗೆ ಕಳುಹಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು