ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಅನುಮತಿಯಿಲ್ಲದೆ ಖಾಲಿ ಮನೆಯಲ್ಲಿ ನಮಾಜ್ ಮಾಡಿದ 12 ಜನರ ಬಂಧನ

ಕಳೆದ ಹಲವಾರು ವಾರಗಳಿಂದ ಖಾಲಿ ಮನೆಯನ್ನು ತಾತ್ಕಾಲಿಕ ಮದರಸಾವಾಗಿ ಬಳಸಲಾಗುತ್ತಿದೆ ಎಂಬ ಮಾಹಿತಿ ಬಂದ ನಂತರ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ಎಸ್‌ಪಿ(ದಕ್ಷಿಣ) ಅಂಶಿಕಾ ವರ್ಮಾ ತಿಳಿಸಿದ್ದಾರೆ.

ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ 'ಅನುಮತಿ ಇಲ್ಲದೆ' ಖಾಲಿ ಮನೆಯಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಖಾಲಿ ಮನೆಯೊಳಗೆ ನಮಾಜ್ ಮಾಡುತ್ತಿರುವುದನ್ನು ತೋರಿಸುವ ವಿಡಿಯೋವೊಂದು ಕಾಣಿಸಿಕೊಂಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು ಎಂದು ಅವರು ಹೇಳಿದ್ದಾರೆ.

ಮೊಹಮ್ಮದ್‌ಗಂಜ್ ಗ್ರಾಮದ ಜನರಿಂದ ಕಳೆದ ಹಲವಾರು ವಾರಗಳಿಂದ ಖಾಲಿ ಮನೆಯನ್ನು ತಾತ್ಕಾಲಿಕ ಮದರಸಾವಾಗಿ ಬಳಸಲಾಗುತ್ತಿದೆ ಎಂಬ ಮಾಹಿತಿ ಬಂದ ನಂತರ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ಎಸ್‌ಪಿ(ದಕ್ಷಿಣ) ಅಂಶಿಕಾ ವರ್ಮಾ ತಿಳಿಸಿದ್ದಾರೆ.

"ಅನುಮತಿ ಇಲ್ಲದೆ ಯಾವುದೇ ಹೊಸ ಧಾರ್ಮಿಕ ಚಟುವಟಿಕೆ ಅಥವಾ ಸಭೆ ನಡೆಸುವುದು ಕಾನೂನಿನ ಬಾಹಿರವಾಗಿದೆ. ಅಂತಹ ಚಟುವಟಿಕೆಗಳು ಪುನರಾವರ್ತನೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕ" ಎಂದು ಮನವಿ ಮಾಡಿದರು.

ಬಂಧಿತ 12 ಜನರ ವಿರುದ್ಧ ಶಾಂತಿ ಉಲ್ಲಂಘನೆಗೆ ಸಂಬಂಧಿಸಿದ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಅವರಿಗೆ ಕೋರ್ಟ್ ಜಾಮೀನು ನೀಡಿದೆ.

ತಲೆಮರೆಸಿಕೊಂಡಿರುವ ಇತರ ಮೂವರು ವ್ಯಕ್ತಿಗಳನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ಖಾಲಿ ಇರುವ ಮನೆ ಹನೀಫ್ ಎಂಬುವವರಿಗೆ ಸೇರಿದ್ದು, ಶುಕ್ರವಾರದ ನಮಾಜ್ ಗಾಗಿ ತಾತ್ಕಾಲಿಕವಾಗಿ ಬಳಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!