ನಟ ದಳಪತಿ ವಿಜಯ್ 
ದೇಶ

ಕರೂರು ಕಾಲ್ತುಳಿತ ಪ್ರಕರಣ: CBI ಎರಡನೇ ಸುತ್ತಿನ ವಿಚಾರಣೆಗೆ ವಿಜಯ್ ಹಾಜರು

ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್‌ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಸಿಬಿಐ ಪ್ರಧಾನ ಕಚೇರಿಗೆ ಹಾಜರಾಗಿದ್ದಾರೆ.

ಇಂದು ಬೆಳಿಗ್ಗೆ ಲೋಧಿ ರಸ್ತೆಯಲ್ಲಿರುವ ಸಿಬಿಐ ಪ್ರಧಾನ ಕಚೇರಿಗೆ ವಿಜಯ್ ಅವರು ಕಾರಿನಲ್ಲಿ ಆಗಮಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ. ತನಿಖಾ ಸಂಸ್ಥೆಯ ಭ್ರಷ್ಟಾಚಾರ ನಿಗ್ರಹ ಘಟಕದ ಉಪ ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ವಿಚಾರಣೆ ನಡೆಸಲಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್‌ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಮಂಗಳವಾರ ಮತ್ತೆ ಹಾಜರಾಗುವಂತೆ ಅವರಿಗೆ ಸೂಚಿಸಿದ್ದು, ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ ಪ್ರಕರಣವನ್ನು ಎಸ್‌ಐಟಿಯಿಂದ ಸಿಬಿಐಗೆ ವರ್ಗಾಯಿಸಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಸಂಬಂಧ ಸಿಬಿಐ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

'ಗಿಲ್ಲಿ 'ಬಡವ' ಅಂತ ಅನ್ನೋದಾದ್ರೆ, BiggBoss ವ್ಯಕ್ತಿತ್ವದ ಆಟ ಹೇಗಾಯ್ತು? ಅಶ್ವಿನಿ ಗೌಡ ಬೇಸರ

25 ಲಕ್ಷ ರೂ. ಲಂಚ ಪ್ರಕರಣ: ಅಬಕಾರಿ ಸಚಿವ ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

GBA ಚುನಾವಣೆ: EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಚುನಾವಣಾ ಆಯೋಗದ ನಿರ್ಧಾರ

SCROLL FOR NEXT