ಪುರುಲಿಯಾ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಭಯದಿಂದ 82 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಪುರುಲಿಯಾ ಜಿಲ್ಲೆಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಮೃತ ವ್ಯಕ್ತಿಯ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
"ಈ ಪ್ರಕರಣದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಮತ್ತು ಕ್ರಿಮಿನಲ್ ಪಿತೂರಿ ಆರೋಪಗಳಿವೆ. ಎಫ್‌ಐಆರ್‌ನಲ್ಲಿ ಯಾವುದೇ ಅಧಿಕಾರಿಯನ್ನು ಹೆಸರಿಸಲಾಗಿಲ್ಲ" ಎಂದು ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಪ್ಯಾರಾ ಬ್ಲಾಕ್‌ನ ಚೌತಾಲಾ ಗ್ರಾಮದ ಬುಡಕಟ್ಟು ಜನಾಂಗದ ದುರ್ಜನ್ ಮಾಝಿ ಎಂಬ ವ್ಯಕ್ತಿಗೆ ಡಿಸೆಂಬರ್ 29 ರಂದು SIR ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ ವಿಚಾರಣೆಗೆ ಕೆಲವು ಗಂಟೆಗಳ ಮೊದಲು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
SIR ಭಯದಿಂದಾಗಿ ಅವರು ಸಾವಿಗೆ ಶರಣಾಗಿದ್ದಾರೆ ಎಂದು ಮಾಝಿ ಅವರ ಕುಟುಂಬ ಆರೋಪಿಸಿದೆ.