ಕೋಝಿಕೋಡ್: ಕೋಝಿಕೋಡ್‌ನ ಗೋವಿಂದಪುರದ ದೀಪಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಬುಧವಾರ ವ್ಲೋಗರ್ ಶಿಂಜಿತಾ ಮುಸ್ತಫಾ ಅವರನ್ನು ಬಂಧಿಸಿದ್ದಾರೆ. ಶಿಂಜಿತಾ ಬಸ್ಸಿನೊಳಗೆ ಅವಮಾನಿಸಿದ ನಂತರ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಕೋಝಿಕೋಡ್ ವೈದ್ಯಕೀಯ ಕಾಲೇಜು ಪೊಲೀಸರ ಪ್ರಕಾರ, ಆರೋಪಿ ಮಹಿಳೆಯನ್ನು ವಡಕಾರದಲ್ಲಿ ಬಂಧಿಸಲಾಗಿದೆ. ಕೊಯಿಲಾಂಡಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಯ ನಂತರ, ಶಿಂಜಿತಾ ಮುಸ್ತಫಾಳನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಆಕೆಯ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ಹಲವಾರು ಅಪರಾಧಗಳ ಆರೋಪ ಹೊರಿಸಲಾಗಿದೆ. ದೀಪಕ್‌ಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಸಾರ್ವಜನಿಕ ಪ್ರತಿಭಟನೆ ನಡೆದ ನಂತರ ಬಂಧನವಾಗಿದೆ.
ಶಿಂಜಿತಾಳ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಅವರ ಸಾವಿಗೆ ನೇರ ಕಾರಣ ಎಂದು ದೀಪಕ್ ಅವರ ಕುಟುಂಬ ದೂರು ದಾಖಲಿಸಿದೆ. ಘಟನೆಯ ನಂತರ, ಶಿಂಜಿತಾ ತಲೆಮರೆಸಿಕೊಂಡಿದ್ದು, ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಲು ಕಾರಣವಾಯಿತು. ಅಂತಿಮವಾಗಿ, ಸೈಬರ್ ಸೆಲ್ ಸಹಾಯದಿಂದ ಆಕೆಯನ್ನು ಪತ್ತೆಯಾಗಿದ್ದಳು.
ಖಾಸಗಿ ಬಸ್ಸಿನಲ್ಲಿ ದೀಪಕ್ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಶಿಂಜಿತಾ ಮುಸ್ತಫಾ ಆರೋಪಿಸಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ದೀಪಕ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ದೀಪಕ್ ಆತ್ಮಹತ್ಯೆ ಮಾಡಿದ ನಂತರ ಈ ಪ್ರಕರಣ ತಿರುವು ಪಡೆದುಕೊಂಡಿತ್ತು. ದೀಪಕ್ ಅವರದ್ದು ಯಾವುದೇ ತಪ್ಪಿಲ್ಲದೇ ಇದ್ದರೂ ಅವರ ಬಳಿಯೇ ಹೋಗಿ ಆಕೆ ವಿಡಿಯೋ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಪ್ರಚಾರಕ್ಕಾಗಿ ವಿಡಿಯೋ ಮಾಡಿ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದಕ್ಕೆ ಶಿಂಜಿತಾಳನ್ನು ಬಂಧಿಸಬೇಕೆಂಬ ಆಗ್ರಹ ಕೇಳಿಬಂದಿತ್ತು.