ದೇಶ

ಜಮ್ಮು ಮತ್ತು ಕಾಶ್ಮೀರ: 200 ಅಡಿ ಆಳದ ಕಮರಿಗೆ ಉರುಳಿಬಿದ್ದ ಸೇನಾ ವಾಹನ; 10 ಸಿಬ್ಬಂದಿ ಸಾವು! Video

ಒಟ್ಟು 17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್‌ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಭದೇರ್ವಾ-ಚಂಬಾ ರಸ್ತೆಯ ಖನ್ನಿ ಟಾಪ್‌ನಲ್ಲಿರುವ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಶಸ್ತ್ರಸಜ್ಜಿತ ಸೇನಾ ವಾಹನವು ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಹತ್ತು ಮಂದಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು 7 ಮಂದಿ ಗಾಯಗೊಂಡಿದ್ದಾರೆ.

ಒಟ್ಟು 17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್‌ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಭದೇರ್ವಾ-ಚಂಬಾ ರಸ್ತೆಯ ಖನ್ನಿ ಟಾಪ್‌ನಲ್ಲಿರುವ 200 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ.

ಅಪಘಾತ ಸಂಭವಿಸಿದ ತಕ್ಷಣ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ ಸೇನೆ, ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಆರಂಭದಲ್ಲಿ ನಾಲ್ವರು ಯೋಧರ ಶವಗಳನ್ನು ಸ್ಥಳದಿಂದ ಹೊರತೆಗೆಯಲಾಗಿದ್ದು, 13 ಮಂದಿಯನ್ನು ಸಮೀಪದ ಸೇನಾ ಆಸ್ಪತ್ರೆಗೆ ರವಾನಿಸಲಾಗಿತ್ತು. ತೀವ್ರವಾಗಿ ಗಾಯಗೊಂಡ ಕೆಲವು ಸೈನಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಧಮ್‌ಪುರ ಮಿಲಿಟರಿ ಆಸ್ಪತ್ರೆಗೆ ವಿಮಾನದಲ್ಲಿ ರವಾನಿಸಲಾಗಿದೆ. ಬಳಿಕ ಇನ್ನೂ ಏಳು ಸಿಬ್ಬಂದಿ ಸಾವಿಗೀಡಾಗಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಸೇನಾ ಅಧಿಕಾರಿಗಳು ಅಪಘಾತ ಸಂಭವಿಸಿದ ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಷ್ಯಾ ಮೇಲೆ ಉಕ್ರೇನ್ ಭೀಕರ ದಾಳಿ: 13 ಮಂದಿ ಬಲಿ, 75 ಜನರಿಗೆ ಗಾಯ; ಇದು 4 ವರ್ಷಗಳಲ್ಲೇ ಅತ್ಯಂತ ಡೆಡ್ಲಿ ಅಟ್ಯಾಕ್!