ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರ ಶುಕ್ರವಾರದ ಭೇಟಿಯ ಸಂದರ್ಭದಲ್ಲಿ ಅಕ್ರಮವಾಗಿ ಫ್ಲೆಕ್ಸ್ ಬೋರ್ಡ್‌ಗಳು, ಧ್ವಜಗಳು ಮತ್ತು ಬ್ಯಾನರ್‌ಗಳನ್ನು ಅಳವಡಿಸಿದ್ದಕ್ಕಾಗಿ ಬಿಜೆಪಿ ನೇತೃತ್ವದ ತಿರುವನಂತಪುರಂ ಮಹಾನಗರ ಪಾಲಿಕೆ, ಆಡಳಿತ ಪಕ್ಷದ ನಗರ ಜಿಲ್ಲಾ ಸಮಿತಿಗೆ 20 ಲಕ್ಷ ರೂ. ದಂಡ ವಿಧಿಸಿದೆ.
ಹೈಕೋರ್ಟ್ ಆದೇಶ ಉಲ್ಲಂಘಿಸಿ, ವಿಮಾನ ನಿಲ್ದಾಣದಿಂದ ಪುತ್ತರಿಕಂಡಂ ಮೈದಾನದವರೆಗಿನ ಪಾದಚಾರಿ ಮಾರ್ಗಗಳು, ರಸ್ತೆ ವಿಭಾಜಕಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್ ಬೋರ್ಡ್‌ಗಳು, ಧ್ವಜಗಳು ಮತ್ತು ಬ್ಯಾನರ್‌ಗಳನ್ನು ವ್ಯಾಪಕವಾಗಿ ಪ್ರದರ್ಶಿಸಿದ್ದಕ್ಕಾಗಿ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾದ ನಂತರ ಪಾಲಿಕೆ ಈ ನಿರ್ಧಾರ ತೆಗೆದುಕೊಂಡಿದೆ.
ಬಿಜೆಪಿ ನಗರ ಘಟಕಕ್ಕೆ 20 ಲಕ್ಷ ರೂ. ದಂಡ ವಿಧಿಸಲಾಗಿದೆ. ನಾವು ಹೈಕೋರ್ಟ್ ನಿರ್ದೇಶನದ ಮೇರೆಗೆ ಕ್ರಮ ಕೈಗೊಂಡಿದ್ದೇವೆ. ಇಲ್ಲದಿದ್ದರೆ ಅದು ನ್ಯಾಯಾಂಗ ನಿಂದನೆಯಾಗುತ್ತದೆ" ಎಂದು ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಕೇರಳದ ತಿರುವನಂತಪುರಂ ಭೇಟಿ ನೀಡಿ, ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಭರ್ಜರಿ ರೋಜ್ ಶೋ ನಡೆಸಿದ್ದರು.
ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಜಿಲ್ಲಾ ಸಮಿತಿಯು ಪಾದಚಾರಿ ಮಾರ್ಗಗಳನ್ನು ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲವಾಗಿತ್ತು.