ಪಲಾಶ್ ಮುಚ್ಚಲ್ ಮತ್ತು ಸ್ಮೃತಿ ಮಂದಾನ 
ದೇಶ

'ಮದುವೆ ಮನೆಯಲ್ಲಿ ಬೇರೊಬ್ಬ ಮಹಿಳೆ ಜೊತೆ ಹಾಸಿಗೆಯಲ್ಲಿ ರೆಡ್​​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಲಾಶ್; ಭಾರತೀಯ ಮಹಿಳಾ ಕ್ರಿಕೆಟಿಗರು ಆತನನ್ನು ಥಳಿಸಿದ್ದರು'

ಅಂದು ಪಲಾಶ್ ಒಬ್ಬ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ. ಅದು ಭಯಾನಕ ದೃಶ್ಯವಾಗಿತ್ತು. ಇದಾದ ಬಳಿಕ ಪರಿಸ್ಥಿತಿ ತುಂಬಾ ಉದ್ವಿಗ್ನವಾಯಿತು, ಭಾರತೀಯ ಮಹಿಳಾ ಕ್ರಿಕೆಟಿಗರು ಪಲಾಶ್ ಅವರನ್ನು ಥಳಿಸಿದರು.

ಮುಂಬೈ: ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ಪಲಾಶ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ. ಇದೇ ಕಾರಣಕ್ಕೆ ಸ್ಮೃತಿ ಮಂಧಾನ ಹಾಗೂ ಪಲಾಶ್ ಮುಚ್ಚಲ್ ಮದುವೆ ಮುರಿದು ಹೋಯಿತು ಎಂದು ನಟ, ನಿರ್ಮಾಪಕ ವಿಧ್ಯಾನ್ ಮಾನೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮದುವೆ ಮನೆಯಲ್ಲಿ ಅಂದು ನಡೆದಿದ್ದೇನು ಎಂಬುದನ್ನು ವಿವರಿಸಿರುವ ವಿಧ್ಯಾನ್ ಮಾನೆ, ‘ಮದುವೆ ಸಮಾರಂಭದಲ್ಲಿ ನಾನು ಕೂಡ ಹಾಜರಿದ್ದೆ. ಅಂದು ಪಲಾಶ್ ಒಬ್ಬ ಮಹಿಳೆಯೊಂದಿಗೆ ಹಾಸಿಗೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ. ಅದು ಭಯಾನಕ ದೃಶ್ಯವಾಗಿತ್ತು. ಇದಾದ ಬಳಿಕ ಪರಿಸ್ಥಿತಿ ತುಂಬಾ ಉದ್ವಿಗ್ನವಾಯಿತು, ಭಾರತೀಯ ಮಹಿಳಾ ಕ್ರಿಕೆಟಿಗರು ಪಲಾಶ್ ಅವರನ್ನು ಥಳಿಸಿದರು. ಇದಾದ ಬಳಿಕ ಮದುವೆ ಮುರಿದುಬಿದ್ದಿತು ಎಂದಿದ್ದಾರೆ.

ಇನ್ನು ಪಲಾಶ್ ವಿರುದ್ಧ ವಂಚನೆ ಮತ್ತು ಆರ್ಥಿಕ ದುರುಪಯೋಗದ ಗಂಭೀರ ಆರೋಪಗಳನ್ನು ಹೊರಿಸಿರುವ ವಿಧ್ಯಾನ್ ಮಾನೆ, ‘ಪಲಾಶ್ ಸಿನಿಮಾದ ಹೆಸರಿನಲ್ಲಿ ತನ್ನಿಂದ ಲಕ್ಷಾಂತರ ರೂಪಾಯಿಗಳನ್ನು ಪಡೆದಿದ್ದಾರೆ, ಆದರೆ ಆ ಚಿತ್ರವನ್ನು ನಿರ್ಮಿಸಲಾಗಿಲ್ಲ ಅಥವಾ ಹಣವನ್ನು ಹಿಂತಿರುಗಿಸಲಾಗಿಲ್ಲ. ನಾನು ಸ್ಮೃತಿಯ ಕುಟುಂಬದ ಮೂಲಕ ಪಲಾಶ್ ಅವರನ್ನು ಭೇಟಿಯಾದೆ.

ಈ ಸಮಯದಲ್ಲಿ ಪಲಾಶ್ ನನ್ನ ಬಳಿ ಸಿನಿಮಾ ನಿರ್ದೇಶನದ ಬಗ್ಗೆ ಮಾತನಾಡಿದರು. ಅಲ್ಲದೆ ಆರು ತಿಂಗಳೊಳಗೆ ಸಿನಿಮಾವನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಹೀಗಾಗಿ ನಾನು ಪಾಲಾಶ್ ಸಿನಿಮಾದ ಮೇಲೆ ಸುಮಾರು 40 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದೆ. ಆದಾಗ್ಯೂ, ಮದುವೆ ರದ್ದಾದ ನಂತರ ಪಲಾಶ್ ನನ್ನ ಫೋನ್​ ರಿಸೀವ್ ಮಾಡುತ್ತಿಲ್ಲ ಎಂದಿದ್ದಾರೆ.

ಸ್ಮೃತಿ ಮಂಧಾನ ಅವರ ವಿವಾಹವು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನವೆಂಬರ್ 23, 2025 ರಂದು ನಿಗದಿಯಾಗಿತ್ತು. ಆದಾಗ್ಯೂ, ಸ್ಮೃತಿ ಅವರ ತಂದೆ ಶ್ರೀನಿವಾಸ್ ಮಂಧಾನ ಅವರ ಹಠಾತ್ ಅನಾರೋಗ್ಯದಿಂದಾಗಿ ಸಮಾರಂಭವನ್ನು ಮುಂದೂಡಲಾಯಿತು. ಇದೇ ವೇಳೆ ಪಲಾಶ್ ಕೂಡ ಅನಾರೋಗ್ಯಕ್ಕೆ ಒಳಗಾದರು. ಹೀಗಾಗಿ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಕೆಲವು ದಿನಗಳ ನಂತರ, ಮಂಧಾನ ಅವರು ವಿವಾಹವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka MLC Election Results: ಅಡ್ಡ ಮತದಾನದ ನಡುವೆಯೇ ಕಾಂಗ್ರೆಸ್ 5, ಬಿಜೆಪಿ ತೆಕ್ಕೆಗೆ 2 ಸ್ಥಾನ; JDS ಆಘಾತಕಾರಿ ಸೋಲು

BJP-JDS ಅಡ್ಡ ಮತದಾನದಿಂದ Congress 5ನೇ ಅಭ್ಯರ್ಥಿ ಜಯ; ಇದು ಪ್ರಜಾಪ್ರಭುತ್ವದ ಗೆಲುವು: ಸುರ್ಜೇವಾಲಾ

SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ!

ತಂತ್ರಜ್ಞಾನ ಸುಲಭವಾಗಿ ಎಲ್ಲರಿಗೂ ದೊರೆತಾಗ ಮಾತ್ರ ಪ್ರಗತಿ ಸಾಧ್ಯ: VivaTech ನಲ್ಲಿ ಪ್ರಧಾನಿ ಮೋದಿ!

ಫಲಿಸಿದ ಡಿ.ಕೆ ಶಿವಕುಮಾರ್ ತಂತ್ರ: JDS-BJP ಅಡ್ಡ ಮತದಾನ; ಕಾಂಗ್ರೆಸ್‌ 5ನೇ ಅಭ್ಯರ್ಥಿಗೆ ಗೆಲುವು!

SCROLL FOR NEXT