ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದ್ದಾಗಿ ಹೇಳಿಕೊಂಡಿದ್ದಾರೆ.
ಪೋಸ್ಟ್ ನಲ್ಲಿ, ಎಚ್.ಡಿ. ದೇವೇಗೌಡರೊಂದಿಗಿನ ಭೇಟಿ ಅತ್ಯುತ್ತಮವಾಗಿತ್ತು. ಪ್ರಮುಖ ವಿಷಯಗಳ ಕುರಿತು ಅವರ ಒಳನೋಟಗಳು ಗಮನಾರ್ಹವಾಗಿವೆ. ಭಾರತದ ಅಭಿವೃದ್ಧಿಯ ಬಗ್ಗೆ ಅವರ ಉತ್ಸಾಹವೂ ಅಷ್ಟೇ ಪ್ರಶಂಸನೀಯ ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.
ಅಂತೆಯೇ ಭಾರತದ ಅಭಿವೃದ್ಧಿಯ ಬಗ್ಗೆ ಅವರಿಗಿರುವ ಉತ್ಸಾಹವು ಅಷ್ಟೇ ಪ್ರಶಂಸನೀಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಮೂಲಗಳ ಪ್ರಕಾರ ಪ್ರಧಾನಿ ಮೋದಿ ಅವರೊಂದಿಗಿನ ಭೇಟಿ ವೇಳೆ ರಾಜ್ಯಕ್ಕೆ ಅನುದಾನ, ಅಭಿವೃದ್ದಿ ಯೋಜನೆಗಳ ಕುರಿತಾಗಿ ಎಚ್ ಡಿ ದೇವೇಗೌಡ ಅವರು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಬಜೆಟ್‌ಗೂ ಮುನ್ನ ಈ ಭೇಟಿ ರಾಜ್ಯಕ್ಕೆ ಹೆಚ್ಚಿನ ಅನುದಾನದ ನಿರೀಕ್ಷೆ ಮೂಡಿಸಿದೆ.