ಶಶಿ ತರೂರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ 
ದೇಶ

ನನ್ನ ನಿಲುವು ಭಾರತದ ಪರವೇ ಹೊರತು BJP ಪರವಲ್ಲ: ಶಶಿ ತರೂರ್

ಕೆಲವು ಅಂತರರಾಷ್ಟ್ರೀಯ ವಿಷಯಗಳಲ್ಲಿ ರಾಜಕೀಯ ಮಾಡುವುದು ನನಗಿಷ್ಟವಿಲ್ಲ. ರಾಷ್ಟ್ರದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮಾತನಾಡಲು ಇಷ್ಟಪಡುತ್ತೇನೆ. ಇದನ್ನು ನಾನು ಯಾವಾಗಲೂ ಹೇಳುತ್ತಿರುತ್ತೇನೆ.

ನವದೆಹಲಿ: ಕೆಲ ವಿಚಾರಗಳಲ್ಲಿ ನನ್ನ ಅಭಿಪ್ರಾಯಗಳನ್ನು ಬಿಜೆಪಿ ಪರವೆಂದು ತಪ್ಪಾಗಿ ಅರ್ಥೈಸಲಾಗುತ್ತಿದೆ. ಆದರೆ, ನನ್ನ ನಿಲುವು ಸರ್ಕಾರ ಅಥವಾ ಬಿಜೆಪಿ ಪಕ್ಷದ ಪರವಲ್ಲ, ದೇಶದ ಹಿತದೃಷ್ಟಿಯ ಪರವಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಶುಕ್ರವಾರ ಹೇಳಿದ್ದಾರೆ,

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ವಿಚಾರಗಳಲ್ಲಿ ನನ್ನ ಅಭಿಪ್ರಾಯಗಳನ್ನು ಬಿಜೆಪಿ ಪರವೆಂದು ತಪ್ಪಾಗಿ ಅರ್ಥೈಸಲಾಗುತ್ತಿದೆ. ನಾನು ದೇಶದ ಪರ ಅಥವಾ ಸರ್ಕಾರದ ಪರ ಮಾತನಾಡಿದರೆ ಅದನ್ನು ಬಿಜೆಪಿ ಪರ ಎಂದು ಬಿಂಬಿಸುತ್ತಾರೆ. ಆದರೆ,ವಾಸ್ತವಾಗಿ ನಾನು ದೇಶದ ಪರ ಧ್ವನಿಗೂಡಿಸುತ್ತೇನೆಂದು ಸ್ಪಷ್ಟನೆ ನೀಡಿದ್ದಾರೆ.

ಕೆಲವು ಅಂತರರಾಷ್ಟ್ರೀಯ ವಿಷಯಗಳಲ್ಲಿ ರಾಜಕೀಯ ಮಾಡುವುದು ನನಗಿಷ್ಟವಿಲ್ಲ. ರಾಷ್ಟ್ರದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮಾತನಾಡಲು ಇಷ್ಟಪಡುತ್ತೇನೆ. ಇದನ್ನು ನಾನು ಯಾವಾಗಲೂ ಹೇಳುತ್ತಿರುತ್ತೇನೆಂದು ತಿಳಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತೀರಾ ಎಂದು ಪ್ರಶ್ನೆಗೆ ಉತ್ತರಿಸಿದ ಅವರು, 'ನಾನು ಕಾಂಗ್ರೆಸ್‌ನಲ್ಲಿಯೇ ಇರುತ್ತೇನೆ. ನಾನು ಎಲ್ಲಿಗೂ ಹೋಗುವುದಿಲ್ಲ. ಕೇರಳದ ಚುನಾವಣಾ ಪ್ರಚಾರದ ಭಾಗವಾಗಿರುತ್ತೇನೆ. ಯುಡಿಎಫ್‌ನ ಗೆಲುವಿಗಾಗಿ ಕೆಲಸ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.

ನಾನು ಯಾವಾಗಲೂ ಸಂಸತ್ತಿನಲ್ಲಿ ಪಕ್ಷದ ಪರವಾಗಿ ನಿಂತಿದ್ದೇನೆ. ಹೀಗಾಗಿ ಚಿಂತಿಸುವ ಅಗತ್ಯವಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಪಹಲ್ಗಾಮ್ ದಾಳಿಯ ನಂತರದ ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಮತ್ತು ರಾಜತಾಂತ್ರಿಕ ವಿಚಾರ ಕುರಿತು ಕಳೆದ ವರ್ಷ ನೀಡಿದ್ದ ಹೇಳಿಕೆ ಹಾಗೂ ವಿವಾದ ಕುರಿತು ಶಶಿ ತರೂರ್ ಅವರು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್