ಲಿಫ್ಟ್ ನಲ್ಲಿ ದರೋಡೆ ಮಾಡುತ್ತಿರುವ ದೃಶ್ಯ  
ದೇಶ

AIIMS ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ: ನರ್ಸಿಂಗ್ ವಿದ್ಯಾರ್ಥಿಯಿಂದಲೇ ದರೋಡೆ; 45 CCTV ಕ್ಯಾಮೆರಾ ಪರಿಶೀಲನೆ ಬಳಿಕ ಆರೋಪಿ ಬಂಧನ..!

ಇತ್ತೀಚೆಗೆ ಭೋಪಾಲ್‌ನ ಏಮ್ಸ್ ಆಸ್ಪತ್ರೆಯ ಲಿಫ್ಟ್‌ನಲ್ಲೇ ಯುವಕನೋರ್ವ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯೊಬ್ಬರ ಚಿನ್ನದ ಕರಿಮಣಿ ಸರವನ್ನು ಕದ್ದು ಪರಾರಿಯಾಗಿದ್ದ. ಆಸ್ಪತ್ರೆಯ ಲಿಫ್ಟ್‌ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿತ್ತು.

ಭೋಪಾಲ್: ಭೋಪಾಲ್‌ನ ಏಮ್ಸ್ ಆಸ್ಪತ್ರೆಯ ಲಿಫ್ಟ್‌ನಲ್ಲಿ ವೈದ್ಯಕೀಯ ಸಿಬ್ಬಂದಿಯ ಚಿನ್ನದ ಸರ ಕದ್ದಿದ್ದ ಆರೋಪಿಯನ್ನು ಬಂಧನಕ್ಕೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ಭೋಪಾಲ್‌ನ ಏಮ್ಸ್ ಆಸ್ಪತ್ರೆಯ ಲಿಫ್ಟ್‌ನಲ್ಲೇ ಯುವಕನೋರ್ವ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯೊಬ್ಬರ ಚಿನ್ನದ ಕರಿಮಣಿ ಸರವನ್ನು ಕದ್ದು ಪರಾರಿಯಾಗಿದ್ದ. ಆಸ್ಪತ್ರೆಯ ಲಿಫ್ಟ್‌ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿತ್ತು.

ಕೇವಲ 54 ಸೆಕೆಂಡ್‌ಗಳಲ್ಲಿ ಅರೋಪಿ ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾಗಿದ್ದ. ಏಮ್ಸ್ ಆಸ್ಪತ್ರೆಯ ಸ್ತ್ರೀ ರೋಗ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ವರ್ಷಾ ಸೋನಿ ಎಂಬುವವರು ಈ ಘಟನೆಯಲ್ಲಿ ಚಿನ್ನದ ಸರವನ್ನು ಕಳೆದುಕೊಂಡಿದ್ದರು. ಲಿಫ್ಟ್‌ನಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆ ಆಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ನಡುವೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿ ಪತ್ತೆಗೆ 45 ಸಿಸಿ ಕ್ಯಾಮರಾಗಳನ್ನು ತಪಾಸಣೆ ನಡೆಸಿ, ಆರೋಪಿಯನ್ನು ಪತ್ತೆ ಮಾಡಿದ್ದಾರೆ.

ಆರೋಪಿಯನ್ನು 25 ವರ್ಷದ ಸುನೀಲ್ ಮೀನಾ ಎಂದು ಗುರುತಿಸಲಾಗಿದೆ. ಈತ 3ನೇ ವರ್ಷದ ನರ್ಸಿಂಗ್‌ ವಿದ್ಯಾರ್ಥಿಯಾಗಿದ್ದು, ಹಣಕಾಸಿನ ಸಮಸ್ಯೆ ಹಾಗೂ ಐಷಾರಾಮಿ ಜೀವನದ ಆಸೆಗಾಗಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆನ್‌ಲೈನ್ ಹಣ ವರ್ಗಾವಣೆ ವೇಳೆ ಸಾಕಷ್ಟು ಹಣ ಕಳೆದುಕೊಂಡಿದ್ದೇನೆ. ಸ್ನೇಹಿತರ ಬಳಿಯೂ ಸಾಲ ಮಾಡಿದ್ದೇನೆ. ಎಲ್ಲರೂ ಸಾಲದ ಹಣ ವಾಪಸ್ ಕೇಳುತ್ತಿದ್ದರು. ಹೀಗಾಗಿ ಹಣಕ್ಕಾಗಿ ಕಳ್ಳತನ ಮಾಡಿದ್ದಾಗಿ ಹೇಳಿದ್ದಾನೆ. ಈತ ಬಹಳ ಲಕ್ಸುರಿ ಜೀವನ ಶೈಲಿ ರೂಪಿಸಿಕೊಂಡಿದ್ದ, ದುಬಾರಿ ಮೊಬೈಲ್, ಕಾರು ಖರೀದಿಸಬೇಕೆಂದು ಬಯಸಿದ್ದ, ಹೀಗೆ ದುಡ್ಡಿಲ್ಲದೆಯೂ ಶೋಕಿ ಮಾಡುತ್ತಿದ್ದು, ಈತನಿಗೆ ಒಬ್ಬಳು ಗರ್ಲ್‌ಫ್ರೆಂಡ್ ಕೂಡ ಇದ್ದಳು ಎಂಬುದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ.

ಆರೋಪಿ ಕದ್ದ ಸರವನ್ನು ಜ್ಯುವೆಲ್ಲರಿ ಶಾಪೊಂದಕ್ಕೆ ಮಾರಾಟ ಮಾಡಿದ್ದು, ಪುಷ್ಪರಾಜ್ ಎಂಬುವವರಿಂದ ಈ ಮಂಗಳಸೂತ್ರವನ್ನು ವಶಕ್ಕೆ ಪಡೆಯಲಾಗಿದೆ. ಇದೀಗ ಪ್ರಕರಣದಲ್ಲಿ ಆತನನ್ನು ಆರೋಪಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!