ಸಾಂದರ್ಭಿಕ ಚಿತ್ರ 
ದೇಶ

ಮುಟ್ಟಿನ ಆರೋಗ್ಯ ರಕ್ಷಣೆ ಮೂಲಭೂತ ಹಕ್ಕು: ಶಾಲಾ ಬಾಲಕಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್‌ ಒದಗಿಸಲು ಸುಪ್ರೀಂ ಕೋರ್ಟ್ ಆದೇಶ!

ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಹೇಳಲಾಗಿರುವ ಬದುಕುವ ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ನವದೆಹಲಿ: ಖಾಸಗಿ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಜೈವಿಕ ವಿಘಟನೀಯ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.

ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಹೇಳಲಾಗಿರುವ ಬದುಕುವ ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಆರ್ ಮಹದೇವನ್ ಅವರನ್ನೊಳಗೊಂಡ ನ್ಯಾಯ ಪೀಠ, ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಅಲ್ಲದೇ, ಸರ್ಕಾರಿ ಅಥವಾ ಖಾಸಗಿ ಶಾಲೆಗಳಲ್ಲಿ ವಿಶೇಷಚೇತನರ ಸ್ನೇಹಿ ಶೌಚಾಲಯ ಒದಗಿಸಬೇಕು ಎಂದು ಹೇಳಿದೆ.

"ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದ 21 ನೇ ವಿಧಿಯಡಿ ನೀಡಲಾಗಿರುವ ಬದುಕುವ ಹಕ್ಕಿನ ಭಾಗವಾಗಿದೆ. ಖಾಸಗಿ ಶಾಲೆಗಳು ಈ ಸೌಲಭ್ಯ ಒದಗಿಸಲು ವಿಫಲವಾದರೆ, ಮಾನ್ಯತೆ ರದ್ದುಗೊಳಿಸಲಾಗುವುದು. ಹೆಣ್ಣು ಮಕ್ಕಳಿಗೆ ಶೌಚಾಲಯ ಮತ್ತು ಉಚಿತ ಸ್ಯಾನಿಟರಿ ಪ್ಯಾಡ್‌ ಒದಗಿಸಲು ಸರ್ಕಾರಗಳು ವಿಫಲವಾದರೆ ಅದನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನ್ಯಾಯ ಪೀಠ ಹೇಳಿದೆ.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯ ಹದಿಹರೆಯದ ಬಾಲಕಿಯರಿಗೆ ಕೇಂದ್ರ ಸರ್ಕಾರ ಮುಟ್ಟಿನ ನೈರ್ಮಲ್ಯ ನೀತಿ ಜಾರಿಗೆ ತರಬೇಕು ಎಂದು ಕೋರಿ ಜಯಾ ಠಾಕೂರ್ ಅವರು ಡಿಸೆಂಬರ್ 10, 2024 ರಂದು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್