ಜೈಲಲ್ಲಿ ಯುವತಿಯ ವಿಡಿಯೋ 
ದೇಶ

ಜೈಲಲ್ಲಿ ಬಾಯ್‌ಫ್ರೆಂಡ್‌ ಜೊತೆ ರೀಲ್ಸ್‌ ಮಾಡಿದ ಯುವತಿ: ಕಾರಾಗೃಹ ಭದ್ರತೆ ಬಗ್ಗೆ ಚರ್ಚೆ!

ಹೊರಗಡೆಯಿಂದ ಯಾರು ಕೂಡ ಜೈಲಿನೊಳಗೆ ಮೊಬೈಲ್‌ ತೆಗೆದುಕೊಂಡು ಹೋಗುವಂತಿಲ್ಲ. ಆದರೆ, ಯುವತಿ ಜೈಲಿನ ಸಂದರ್ಶಕ ಕೋಣೆಯೊಳಗೆ ಮುಕ್ತವಾಗಿ ವೀಡಿಯೋ ರೆಕಾರ್ಡ್‌ ಮಾಡಿ ಹರಿಬಿಟ್ಟಿದ್ದಾಳೆ.

ಭೂಪಾಲ್: ಅತ್ಯಂತ ಸುರಕ್ಷಿತ ಸಂಸ್ಥೆಗಳಲ್ಲಿ ಒಂದಾಗಿರುವ ರಾಯ್‌ಪುರ ಕೇಂದ್ರ ಕಾರಾಗೃಹದಲ್ಲಿ ತನ್ನ ಗೆಳೆಯನನ್ನು ಭೇಟಿಯಾಗಲು ಬಂದ ಯುವತಿಯೊಬ್ಬಳು ಜೈಲಿನ ಸಂದರ್ಶಕ ಕೋಣೆಯೊಳಗೆ ಮುಕ್ತವಾಗಿ ವೀಡಿಯೊ ರೆಕಾರ್ಡ್ ಮಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಜೈಲಿನಲ್ಲಿರುವ ತನ್ನ ಪ್ರಿಯಕರನ ಭೇಟಿಯಾಗಲು ಬಂದ ಯುವತಿ ರೀಲ್ಸ್‌ ಮಾಡಿ ಹರಿಬಿಟ್ಟಿರುವುದು ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆ ಜೈಲಿನ ಭದ್ರತೆ ಮತ್ತು ಮೇಲ್ವಿಚಾರಣೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹೊರಗಡೆಯಿಂದ ಯಾರು ಕೂಡ ಜೈಲಿನೊಳಗೆ ಮೊಬೈಲ್‌ ತೆಗೆದುಕೊಂಡು ಹೋಗುವಂತಿಲ್ಲ. ಆದರೆ, ಯುವತಿ ಜೈಲಿನ ಸಂದರ್ಶಕ ಕೋಣೆಯೊಳಗೆ ಮುಕ್ತವಾಗಿ ವೀಡಿಯೋ ರೆಕಾರ್ಡ್‌ ಮಾಡಿ ಹರಿಬಿಟ್ಟಿದ್ದಾಳೆ. ನೆಟ್ಟಿಗರು ಜೈಲಿನ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಯುವತಿ ಭಾವನಾತ್ಮಕವಾಗಿ ಕ್ಯಾಮೆರಾದ ಮುಂದೆ ಮಾತನಾಡುತ್ತಾ, ‘ಇಂದು ನನ್ನ ಲವ್ವರ್‌ ಹುಟ್ಟುಹಬ್ಬ. ನಾನು ಅವನನ್ನು ಭೇಟಿಯಾಗಲು ಜೈಲಿಗೆ ಬಂದಿದ್ದೇನೆ. ಅವನು ನನ್ನೊಂದಿಗೆ ಇಲ್ಲದಿರುವುದು ತುಂಬಾ ನೋವುಂಟುಮಾಡುತ್ತದೆ. ಅವನ ಹುಟ್ಟುಹಬ್ಬದಂದು ನಾನು ಅವನೊಂದಿಗೆ ಇಲ್ಲ. ಆದರೆ, ನಾನು ಅವನನ್ನು ಭೇಟಿಯಾಗಲು ಬಂದಿದ್ದೇನೆ. ಅವನ ಪ್ರತಿಕ್ರಿಯೆ ಏನೆಂದು ನೋಡೋಣ’ ಎಂದು ಹೇಳಿದ್ದಾಳೆಂದು ವರದಿಯಾಗಿದೆ.

ವಿಸಿಟಿಂಗ್ ರೂಂ ನಲ್ಲಿ ತನ್ನ ಗೆಳೆಯನೊಂದಿಗೆ ಸಂಭಾಷಣೆ ನಡೆಸುತ್ತಿರುವಾಗ ವೀಡಿಯೊವನ್ನು ಚಿತ್ರೀಕರಿಸಿ ನಂತರ ಆಕೆಯ ಸಾಮಾಜಿಕ ಮಾಧ್ಯಮ ಖಾತೆಗೆ ಅಪ್‌ಲೋಡ್ ಮಾಡಲಾಗಿದೆ. ಕೈದಿಯನ್ನು ತಾರಕೇಶ್ವರ ಎಂದು ಗುರುತಿಸಲಾಗಿದ್ದು, ಪ್ರಸ್ತುತ ರಾಯ್‌ಪುರ ಕೇಂದ್ರ ಕಾರಾಗೃಹದಲ್ಲಿ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ (ಎನ್‌ಡಿಪಿಎಸ್) ಕಾಯ್ದೆ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel