ನಿತಿನ್ ನಬಿನ್ - ಮಲ್ಲಿಕಾರ್ಜುನ ಖರ್ಗೆ 
ದೇಶ

ಖಮೇನಿ ಅಂತ್ಯಕ್ರಿಯೆಗೆ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್, ಕಾಂಗ್ರೆಸ್ ಅಧ್ಯಕ್ಷ ಖರ್ಗೆ, ಪವನ್ ಖೇರಾಗೆ ಇರಾನ್ ಆಹ್ವಾನ

ಮುಂದಿನ ವಾರ ನಡೆಯಲಿರುವ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕರಾದ ಸಲ್ಮಾನ್ ಖುರ್ಷಿದ್, ಪವನ್ ಖೇರಾ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಆಹ್ವಾನಿಸಿದೆ.

ನವದೆಹಲಿ: ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಬರೋಬ್ಬರಿ 100 ದಿನದ ಬಳಿಕ ನಡೆಯುತ್ತಿದ್ದು, ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಅಧ್ಯಕ್ಷರಿಗೆ ಇರಾನ್ ಆಹ್ವಾನ ನೀಡಿದೆ.

ಮುಂದಿನ ವಾರ ನಡೆಯಲಿರುವ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕರಾದ ಸಲ್ಮಾನ್ ಖುರ್ಷಿದ್, ಪವನ್ ಖೇರಾ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಆಹ್ವಾನಿಸಿದೆ.

ಜುಲೈ 5 ರಿಂದ 9 ರವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿವೆ.

"ಕಾಂಗ್ರೆಸ್ ಅಧ್ಯಕ್ಷರು, ಇರಾನ್‌ಗೆ ಪಕ್ಷದ ನಿಯೋಗವನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದ್ದಾರೆ" ಎಂದು ಕಾಂಗ್ರೆಸ್‌ನ ವಿದೇಶಾಂಗ ವ್ಯವಹಾರಗಳ ವಿಭಾಗದ ಮುಖ್ಯಸ್ಥರಾಗಿರುವ ಖುರ್ಷಿದ್ ಅವರು ಹೇಳಿದ್ದಾರೆ.

ಕಳೆದ ಮೂರು ದಶಕಗಳಿಂದ ಇರಾನ್ ಅನ್ನು ಆಳಿದ ಖಮೇನಿ, ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯ ಮೊದಲ ದಿನ ಹತ್ಯೆಯಾಗಿದ್ದರು.

ಕಳೆದ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಖಮೇನಿ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಇದೀಗ ಜುಲೈ 5ರಿಂದ ಜುಲೈ 9ರ ವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ. ಈ ವೇಳೆ 1 ಕೋಟಿಗೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!