SUV ಕಾರು 
ದೇಶ

ಅಟಲ್‌ ಸುರಂಗದ ಬಳಿ ಭಯಾನಕ ಅಪಘಾತ; ಕಂಬಿಗಳ ನಡುವೆ ಸಿಲುಕಿದ SUV ಕಾರು! Video ನೋಡಿ

ಅತೀ ವೇಗವಾಗಿ ಬಂದ ಮಹೀಂದ್ರಾ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದ ಸೇತುವೆಗೆ ಡಿಕ್ಕಿ ಹೊಡೆದು ರಸ್ತೆಯಿಂದಾಚೆಗೆ ನೆಗೆದಿದೆ.

ಶಿಮ್ಲಾ: ಹಿಮಾಚಲ ಪ್ರದೇಶದ ಅಟಲ್ ಸುರಂಗದ ಉತ್ತರ ದ್ವಾರದ ಬಳಿ ಭಯಾನಕ ಅಪಘಾತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಬ್ಬ ಪ್ರವಾಸಿ ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.

ಅತೀ ವೇಗವಾಗಿ ಬಂದ ಮಹೀಂದ್ರಾ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದ ಸೇತುವೆಗೆ ಡಿಕ್ಕಿ ಹೊಡೆದು ರಸ್ತೆಯಿಂದಾಚೆಗೆ ನೆಗೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ಪಕ್ಕದ ನಿರ್ಮಾಣದ ಹಂತದ ಕಟ್ಟಡದ ಕಬ್ಬಿಣದ ಸರಳುಗಳ ನಡುವೆ ಸಿಲುಕಿದ್ದು, ಕಂಬಿಗಳು ಚುಚ್ಚಿ ನಜ್ಜುಗುಜ್ಜಾಗಿದೆ.

ಪೊಲೀಸರ ಪ್ರಕಾರ, ರಾತ್ರಿ 10 ಗಂಟೆ ಸುಮಾರಿಗೆ ಪ್ರವಾಸಿಗರ ಈ ಕಾರು, ಮನಾಲಿಯಿಂದ ಲಹೌಲ್‌ಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಅಪಘಾತದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಅಟಲ್‌ ಸುರಂಗದಿಂದ ಕಾರು ಹೊರಬರುತ್ತಿದ್ದಂತೆ, ಚಾಲಕ ಎಸ್‌ಯುವಿ ನಿಯಂತ್ರಣ ಕಳೆದುಕೊಂಡಿದ್ದಾನೆ. ಬಳಿಕ ರಸ್ತೆ ಬದಿಯ ಬ್ಯಾರಿಕೇಡ್‌ಗಳಿಗೆ ಗುದ್ದಿಸಿಕೊಂಡು, ನಿರ್ಮಾಣ ಹಂತದ ಸೇತುವೆಯ ಮೇಲೆ ಬಿದ್ದಿದೆ.

ಅಟಲ್ ಸುರಂಗದ ದಕ್ಷಿಣದ ಹೆಬ್ಬಾಗಿಲು ಮನಾಲಿಯಿಂದ 25 ಕಿ.ಮೀ ದೂರದಲ್ಲಿ 3,060 ಮೀಟರ್ ಎತ್ತರದಲ್ಲಿದೆ. ಸುರಂಗದ ಉತ್ತರದ ಹೆಬ್ಬಾಗಿಲು ಲಾಹೌಲ್ ಕಣಿವೆಯ ಸಿಸ್ಸು ಎಂಬ ಹಳ್ಳಿಯ ಟೆಲ್ಲಿಂಗ್ ಬಳಿ ಇದ್ದು, ಇದು 3,071 ಮೀಟರ್ ಎತ್ತರದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'Digital arrest' ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!