ಸೋನಂ, ರಘುವಂಶಿ 
ದೇಶ

ಮೇಘಾಲಯ ಹನಿಮೂನ್ ಕೊಲೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ಧತಿಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಮೇಘಾಲಯ ಸರ್ಕಾರ ಸಲ್ಲಿಸಿದ್ದ ಈ ಅರ್ಜಿ ಪರವಾಗಿ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ಹಾಜರಿದ್ದು, ಸೋನಮ್​ ವಿರುದ್ಧದ ಆರೋಪವು ಗಂಭೀರವಾಗಿದೆ.

ನವದೆಹಲಿ: ಹನಿಮೂನ್‌ಗೆ ಹೋಗಿದ್ದಾಗ ಪತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಹಂತಕಿ ಸೋನಮ್ ರಘುವಂಶಿಗೆ ನೀಡಿದ್ದ ಜಾಮೀನು ರದ್ದಿಗೆ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಮೇಘಾಲಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಶೀಲ್ ನಾಗು ಅವರಿದ್ದ ಪೀಠವು, ಸೋನಂಗೆ ನೀಡಿದ ಜಾಮೀನು ಆದೇಶಕ್ಕೆ ತಡೆ ನೀಡುವ ಬಗ್ಗೆ ಒಲವು ತೋರಿಸಿತ್ತು. ಸೋನಂ ಈಗಾಗಲೇ ಒಂದಿಷ್ಟು ಸಮಯ ಜೈಲು ಶಿಕ್ಷೆ ಅನುಭವಿಸಿರುವುದನ್ನು ಪರಿಗಣಿಸಿದ ಕೋರ್ಟ್, ಅಪರಾಧ ಎಷ್ಟೇ ಘೋರವಾಗಿದ್ದರೂ, ಜಾಮೀನು ನೀಡುವುದು ನಿಯಮ, ಜೈಲಿಗೆ ಕಳುಹಿಸುವುದು ಕೊನೆಯ ಆಯ್ಕೆ ಎಂಬ ತತ್ವವನ್ನು ಪಾಲಿಸಬೇಕಾಗುತ್ತದೆ. ಇದೇ ವೇಳೆ ಹೈಕೋರ್ಟ್ ಈ ಪ್ರಕರಣವನ್ನು ನಿರ್ವಹಿಸಿದ ರೀತಿಯ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮುಂದಿನ ವಿಚಾರಣೆ ಜು.9ಕ್ಕೆ ನಿಗದಿಪಡಿಸಿದೆ.

ಮೇಘಾಲಯ ಸರ್ಕಾರ ಸಲ್ಲಿಸಿದ್ದ ಈ ಅರ್ಜಿ ಪರವಾಗಿ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ಹಾಜರಿದ್ದು, ಸೋನಮ್​ ವಿರುದ್ಧದ ಆರೋಪವು ಗಂಭೀರವಾಗಿದೆ. ಆರೋಪಿಯನ್ನು ತಾಂತ್ರಿಕ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ.

ಈ ಹಿನ್ನೆಲೆ ಹೈಕೋರ್ಟ್​ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು. ಆದರೆ, ಪೀಠ ಇದನ್ನು ನಿರಾಕರಿಸಿತು. ಅಲ್ಲದೇ, ಈ ಪ್ರಕರಣವನ್ನು ಸುಪ್ರೀಂ ಕೋರ್ಟ್​ ಪುನಾರಂಭಗೊಂಡ ನಂತರ ಮುಂದಿನ ವಿಚಾರಣೆ ನಿಗದಿಪಡಿಸಿತು.

ಸೋನಮ್​ ರಂಘವಂಶಿಗೆ ಮೇಘಾಲಯ ಹೈಕೋರ್ಟ್​ ಜಾಮೀನು ನೀಡಿದ ಆದೇಶವನ್ನು ಪ್ರಶ್ನಿಸಿ ಮೇಘಾಲಯ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್​ ಮೊರೆ ಹೋಗಿತ್ತು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸೋನಮ್​ಗೆ ಜಾಮೀನು ನೀಡಿರುವುದರಿಂದಾಗಿ ಆರೋಪಿ ಪರಾರಿಯಾಗುವ ಸಾಧ್ಯತೆಯಿದೆ ಎಂದು ವಾದಿಸಿದೆ.

ಮಧ್ಯಪ್ರದೇಶದ ಇಂದೋರ್​ ನಿವಾಸಿಯಾಗಿರುವ ಸೋನಮ್​ ರಘುವಂಶಿ ಕಳೆದ ವರ್ಷ 2025ರಂದು ಉದ್ಯಮಿ ರಾಜಾ ರಘುವಂಶಿ ವಿವಾಹವಾದ ಬಳಿಕ ಮೇಘಾಲಯಕ್ಕೆ ಹನಿಮೂನ್​ಗೆ ಆಗಮಿಸಿದ್ದರು. ಮೇ 23ರಂದು ಮೇಘಾಲಯದ ಸೊಹ್ರಾ ಪ್ರದೇಶದಲ್ಲಿ ಈ ದಂಪತಿಗಳು ಕಣ್ಮರೆಯಾಗಿದ್ದರು.

ಇದಾದ ಕೆಲವು ದಿನಗಳ ಬಳಿಕ ಜೂನ್​ 2ರಂದು ರಾಜಾ ರಘುವಂಶಿ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣ ಪತ್ತೆ ಮಾಡಿದ ಪೊಲೀಸರಿಗೆ ಸೋನಮ್​ ರಘುವಂಶಿ ಪಿತೂರಿ ನಡೆಸಿ, ಈ ಹತ್ಯೆಯಲ್ಲಿ ಭಾಗಿಯಾಗಿರುವುದು ಕಂಡು ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್