ದೇಶ

ಪಾಂಡವಾನಿ ದಂತಕಥೆ, ಪದ್ಮವಿಭೂಷಣ ಪುರಸ್ಕೃತೆ ತೀಜನ ಬಾಯಿ ನಿಧನ; ಪ್ರಧಾನಿ ಮೋದಿ ಸಂತಾಪ

ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರಾದ ತೀಜನ ಬಾಯಿ ಅವರು ಮೇ 27ರಿಂದ ಎಐಐಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಭಾನುವಾರ ನಸುಕಿನ ಜಾವ 3.15ಕ್ಕೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ರಾಯ್ಪುರ: ಛತ್ತೀಸ್‌ಗಢದ ಸಾಂಪ್ರದಾಯಿಕ ಪಾಂಡವಾನಿ ಜಾನಪದ ಕಥನಕಲೆಯನ್ನು ಜಾಗತಿಕ ಮಟ್ಟಕ್ಕೆ ಪರಿಚಯಿಸಿದ್ದ ಖ್ಯಾತ ಜಾನಪದ ಗಾಯಕಿ ತೀಜನ ಬಾಯಿ ಅವರು ದೀರ್ಘಕಾಲದ ಅನಾರೋಗ್ಯದ ಬಳಿಕ ಇಂದು ಭಾನುವಾರ ಬೆಳಗ್ಗೆ ರಾಯ್ಪುರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರಾದ ತೀಜನ ಬಾಯಿ ಅವರು ಮೇ 27ರಿಂದ ಎಐಐಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಭಾನುವಾರ ನಸುಕಿನ ಜಾವ 3.15ಕ್ಕೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತೀಜನ ಬಾಯಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ತಮ್ಮ ಅದ್ಭುತ ಪ್ರದರ್ಶನಗಳ ಮೂಲಕ ಛತ್ತೀಸ್‌ಗಢದ ಜಾನಪದ ಕಲೆಗೆ ವಿಶಿಷ್ಟ ಜಾಗತಿಕ ಗುರುತನ್ನು ತಂದುಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.

ದುರ್ಗ್ ಜಿಲ್ಲೆಯವರಾದ ತೀಜನ ಬಾಯಿ ಅವರನ್ನು, ಮಹಾಭಾರತದ ಪ್ರಸಂಗಗಳ ನಾಟಕೀಯ ನಿರೂಪಣೆ, ಗಾಯನ ಮತ್ತು ಸಂಗೀತದ ಮೂಲಕ ಪ್ರಸ್ತುತಪಡಿಸುವ ಛತ್ತೀಸ್‌ಗಢದ ಸಾಂಪ್ರದಾಯಿಕ ಜಾನಪದ ಕಲೆಯಾದ ಪಂಡವಾನಿಯ ಶ್ರೇಷ್ಠ ಪ್ರತಿನಿಧಿಯಾಗಿ ವ್ಯಾಪಕವಾಗಿ ಗುರುತಿಸಲಾಗುತ್ತಿತ್ತು. ಪಾಂಡವಾನಿ ಎಂದರೆ ಮಹಾಭಾರತದ ಕಥೆಗಳನ್ನು ಹಾಡು ಹಾಗೂ ಕಥೆಯ ರೂಪದಲ್ಲಿ ಹೇಳುವುದು.

ತಮ್ಮ ಪ್ರಬಲ ಧ್ವನಿ, ವೇದಿಕೆಯ ಮೇಲೆ ಪ್ರದರ್ಶನ ನೀಡುತ್ತಿದ್ದ ಕಲೆಯಿಂದ ಅವರು ಪಾಂಡವಾನಿಯನ್ನು ಪ್ರಾದೇಶಿಕ ಜಾನಪದ ಕಲೆಯಿಂದ ಅಂತಾರಾಷ್ಟ್ರೀಯ ಖ್ಯಾತಿಯ ಕಲೆಯಾಗಿ ರೂಪಿಸಿದರು.

ಭಾರತ ಮತ್ತು ವಿದೇಶಗಳಲ್ಲಿ ಅವರ ಪ್ರದರ್ಶನಗಳು ಅಪಾರ ಮೆಚ್ಚುಗೆ ಗಳಿಸಿದ್ದವು. ಇದರಿಂದ ಅವರು ದೇಶದ ಅತ್ಯಂತ ಹೆಸರಾಂತ ಜಾನಪದ ಕಲಾವಿದೆಯರಲ್ಲಿ ಒಬ್ಬರಾಗಿದ್ದರು.

ಭಾರತೀಯ ಜಾನಪದ ಕಲೆಗೆ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಅವರಿಗೆ ಪದ್ಮಶ್ರೀ, ಪದ್ಮಭೂಷಣ ಮತ್ತು ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ವಿಭೂಷಣ ಗೌರವಗಳನ್ನು ಪ್ರದಾನ ಮಾಡಲಾಗಿತ್ತು.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಖ್ಯಾತ ಪಂಡವಾನಿ ಗಾಯಕಿ ತೀಜನ ಬಾಯಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ತಮ್ಮ ಅದ್ಭುತ ಪ್ರದರ್ಶನಗಳ ಮೂಲಕ ಅವರು ಛತ್ತೀಸ್‌ಗಢದ ಜಾನಪದ ಕಲೆಗೆ ವಿಶಿಷ್ಟ ಜಾಗತಿಕ ಗುರುತನ್ನು ತಂದುಕೊಟ್ಟರು. ಅವರ ನಿಧನವು ಕಲೆ ಮತ್ತು ಸಂಸ್ಕೃತಿಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!