ಟಿಪ್ಪರ್ 
ದೇಶ

ಭಯಾನಕ ಅಪಘಾತ: ಫುಟ್​ಪಾತ್​ನಲ್ಲಿ ಕುಳಿತಿದ್ದ ಕುಟುಂಬದ ಮೇಲೆ ಹರಿದ ಟಿಪ್ಪರ್; ತಂದೆ, ಮೂವರು ಮಕ್ಕಳು ಸ್ಥಳದಲ್ಲೇ ಸಾವು; Video

ಮೃತರನ್ನು ಚಂದ್ರಪ್ರಕಾಶ್ ಮತ್ತು ಅವರ ಪುತ್ರರಾದ ರಮೇಶ್ (11), ದೀಪಕ್ (8) ಹಾಗೂ ರತನ್ (10) ಎಂದು ಗುರುತಿಸಲಾಗಿದೆ.

ಜೈಪುರ: ರಾಜಸ್ಥಾನದ ಜೈಪುರದಲ್ಲಿ ಮಂಗಳವಾರ ಬೆಳಗ್ಗೆ ಅತೀ ವೇಗವಾಗಿ ಬಂದ ಟಿಪ್ಪರೊಂದು ಫುಟ್‌ಪಾತ್‌ನಲ್ಲಿ ಕುಳಿತಿದ್ದ ಕುಟುಂಬದ ಮೇಲೆ ಹರಿದಿದ್ದು, ಭೀಕರ ಅಪಘಾತದಲ್ಲಿ ತಂದೆ ಹಾಗೂ ಮೂವರು ಮಕ್ಕಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮತ್ತು ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಮಕ್ಕಳ ದೇಹಗಳು ಛಿದ್ರ ಛಿದ್ರವಾಗಿವೆ.

ಇಂದು ಬೆಳಗ್ಗೆ ಶ್ಯಾಮ್ ನಗರ ಪೊಲೀಸ್ ಠಾಣೆ ಪ್ರದೇಶದ 200 ಅಡಿ ಬೈಪಾಸ್‌ನಲ್ಲಿರುವ ಕಮಲಾ ನೆಹರು ನಗರದಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಚಂದ್ರಪ್ರಕಾಶ್ ಮತ್ತು ಅವರ ಪುತ್ರರಾದ ರಮೇಶ್ (11), ದೀಪಕ್ (8) ಹಾಗೂ ರತನ್ (10) ಎಂದು ಗುರುತಿಸಲಾಗಿದೆ.

ಚಂದ್ರಪ್ರಕಾಶ್ ಅವರ ಪತ್ನಿ ಕೈಲಾಶಿ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಎಸ್‌ಎಂಎಸ್ ಆಸ್ಪತ್ರೆಯ ಆಘಾತ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜೈತ್ಪುರಕ್ಕೆ ಹೋಗುವ ವಾಹನಕ್ಕಾಗಿ ಈ ಕುಟುಂಬ ಕಾಯುತ್ತಿದ್ದಾಗ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರೇಲರ್(ಟಿಪ್ಪರ್) ಚಾಲಕನ ನಿಯಂತ್ರಣ ತಪ್ಪಿ ಐವರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ನಂತರ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಶ್ಯಾಮ್ ನಗರ ಪೊಲೀಸ್ ಠಾಣೆಯ ಪೊಲೀಸರು, ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್