ಸಂಗ್ರಹ ಚಿತ್ರ 
ದೇಶ

ಶೋಪಿಯಾನ್‌ ಎನ್‌ಕೌಂಟರ್‌: ಅಡಗಿಕುಳಿತಿದ್ದ LET ಉಗ್ರನ ಹೊಡೆದುರುಳಿಸಿದ ಸೇನಾಪಡೆ..!

ಈ ಮೊದಲು ಕಾರ್ಯಾಚರಣೆಯಲ್ಲಿ ಸಿಲುಕಿದ್ದ ಉಗ್ರರನ್ನು ಲತೀಫ್ ಮತ್ತು ಜಾಕಿರ್ ಎಂದು ಅಧಿಕಾರಿಗಳು ಗುರುತಿಸಿದ್ದರು. ಆದರೆ, ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ಉಗ್ರನ ಗುರುತನ್ನು ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಲಾಗಿಲ್ಲ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೊಯ್ಬಾ (LeT) ಉಗ್ರ ಸಂಘಟನೆಯ ಭಯೋತ್ಪಾದಕನನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ.

ಜುಲೈ 3ರಂದು ದಕ್ಷಿಣ ಕಾಶ್ಮೀರದ ಮಿಮಂದರ್ ಪ್ರದೇಶದ ದಟ್ಟ ತೋಟಗಳಲ್ಲಿ ಉಗ್ರರು ಅಡಗಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು.

ಏಳು ಗ್ರಾಮಗಳನ್ನು ಒಳಗೊಂಡಿರುವ ಈ ಪ್ರದೇಶವನ್ನು ಭದ್ರತಾ ಪಡೆಗಳು ಸಂಪೂರ್ಣವಾಗಿ ಸುತ್ತುವರಿದು ಕಾರ್ಯಾಚರಣೆ ನಡೆಸಿದ್ದವು.

ಜಮ್ಮು-ಕಾಶ್ಮೀರ ಪೊಲೀಸ್, ಭಾರತೀಯ ಸೇನೆಯ 55 ಮತ್ತು 44 ರಾಷ್ಟ್ರಿಯ ರೈಫಲ್ಸ್ ಘಟಕಗಳು ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು. ಕಳೆದ ಐದು ದಿನಗಳಿಂದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿತ್ತು. ಇದೀಗ ಅಡಗಿ ಕುಳಿತಿದ್ದ ಉಗ್ರನ ಹೊಡೆದುರುಳಿಸುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ.

ಕಾರ್ಯಾಚರಣೆಯ ಯಶಸ್ಸನ್ನು ದೃಢಪಡಿಸಿರುವ ಜಮ್ಮು-ಕಾಶ್ಮೀರ ಪೊಲೀಸರು, ತಮ್ಮ ಅಧಿಕೃತ ಎಕ್ಸ್ (X) ಖಾತೆಯಲ್ಲಿ, "ಓಡಬಹುದು... ಆದರೆ ಅಡಗಿಕೊಳ್ಳಲು ಸಾಧ್ಯವಿಲ್ಲ. ಶೋಪಿಯಾನ್‌ನಲ್ಲಿ ಎಸ್‌ಒಜಿ, ರಾಷ್ಟ್ರಿಯ ರೈಫಲ್ಸ್ ಮತ್ತು ಸಿಆರ್‌ಪಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರನನ್ನು ಹೊಡೆದುರುಳಿಸಲಾಗಿದೆ" ಎಂದು ಹೇಳಿದ್ದಾರೆ.

ಈ ಮೊದಲು ಕಾರ್ಯಾಚರಣೆಯಲ್ಲಿ ಸಿಲುಕಿದ್ದ ಉಗ್ರರನ್ನು ಲತೀಫ್ ಮತ್ತು ಜಾಕಿರ್ ಎಂದು ಅಧಿಕಾರಿಗಳು ಗುರುತಿಸಿದ್ದರು. ಆದರೆ, ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ಉಗ್ರನ ಗುರುತನ್ನು ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಲಾಗಿಲ್ಲ.

ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಮತ್ತಷ್ಟು ಉಗ್ರರು ಅಡಗಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಜ್ಜರ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ವಿರುದ್ಧ ಅಮೆರಿಕಾ ಚಾರ್ಜ್‌ಶೀಟ್, 24 ಮಂದಿ ಬಂಧನ..!

ಬಾರೂಯೀಪುರ್ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಬಲಿ..!

ತೈಲ ಹಡಗುಗಳ ಮೇಲಿನ ದಾಳಿಗೆ ಅಮೆರಿಕಾ ಸೇಡು: ಇರಾನ್ ಮೇಲೆ ಭೀಕರ ವೈಮಾನಿಕ ದಾಳಿ, ಪ್ರತೀಕಾರದ ಎಚ್ಚರಿಕೆ ಕೊಟ್ಟ ಟೆಹ್ರಾನ್..!

Greenland ಮೇಲೆ ಮತ್ತೆ ಟ್ರಂಪ್ ಕಣ್ಣು: NATOದಲ್ಲಿ ಶತಕೋಟಿ ಡಾಲರ್ ಶಸ್ತ್ರಾಸ್ತ್ರ ಒಪ್ಪಂದ, ಟರ್ಕಿಗೆ F-35 ಮಾರಾಟಕ್ಕೂ ಒಪ್ಪಿಗೆ..!

ಶಾಸಕರ ಭವನದ ವಾಹನ ದುರ್ಬಳಕೆಗೆ ಬ್ರೇಕ್: ವಿಧಾನಸಭಾ ಕಾರ್ಯಾಲಯದಿಂದ ಕಠಿಣ ರೂಲ್ಸ್; ಬಳಸಿದ ವಾಹನದ ಬಾಡಿಗೆ ನೇರವಾಗಿ ಶಾಸಕರ ವೇತನದಿಂದಲೇ ವಸೂಲಿ..!