ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಕಥುವಾದಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ, ಎರಡು ಗ್ರೆನೇಡ್ ವಶ!

ಭಯೋತ್ಪಾದಕರಿಗೆ ನೆರವು ನೀಡುತ್ತಿದ್ದ ಸ್ಥಳೀಯ ನಿವಾಸಿ ಪ್ರಹಾಜಿ ಲತೀಫ್ ನೀಡಿದ ಮಾಹಿತಿ ಆಧಾರದ ಮೇಲೆ ಬಿಲ್ಲಾವರ್‌ನ ಮೇಲ್ಭಾಗದಲ್ಲಿ ಅಡಗುತಾಣವನ್ನು ಪತ್ತೆಹಚ್ಚಲಾಗಿದೆ

ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಬುಧವಾರ ಭಯೋತ್ಪಾದಕರ ಅಡಗುತಾಣವನ್ನು ಪತ್ತೆ ಹಚ್ಚಿದ್ದು, ಎರಡು ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದಕರಿಗೆ ನೆರವು ನೀಡುತ್ತಿದ್ದ ಸ್ಥಳೀಯ ನಿವಾಸಿ ಪ್ರಹಾಜಿ ಲತೀಫ್ ನೀಡಿದ ಮಾಹಿತಿ ಆಧಾರದ ಮೇಲೆ ಬಿಲ್ಲಾವರ್‌ನ ಮೇಲ್ಭಾಗದಲ್ಲಿ ಅಡಗುತಾಣವನ್ನು ಪತ್ತೆಹಚ್ಚಲಾಗಿದೆ ಎಂದು ಅವರು ಹೇಳಿದರು.

ಜುಲೈ 2 ರಂದು ಬಂಧಿಸಲ್ಪಟ್ಟ ರಬಾಗ್ ನಿವಾಸಿ ಲತೀಫ್, ಇತ್ತೀಚಿನ ವರ್ಷಗಳಲ್ಲಿ ಗಡಿಯಾಚೆಯಿಂದ ಒಂದು ಡಜನ್‌ಗೂ ಹೆಚ್ಚು ಭಯೋತ್ಪಾದಕರ ಒಳನುಸುಳುವಿಕೆಗೆ ಅನುಕೂಲ ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದಾರೆ. ಪೊಲೀಸರು ಮತ್ತಿತರ ಭದ್ರತಾ ಸಂಸ್ಥೆಗಳು ಜಂಟಿಯಾಗಿ ಅವರ ವಿಚಾರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲತೀಫ್ ವಿಚಾರಣೆಯ ಸಮಯದಲ್ಲಿ ಗಡಿಯಾಚೆಯ ಭಯೋತ್ಪಾದಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ ಗಡಿ ಭದ್ರತಾ ಪಡೆಗಳು ಬುಧವಾರ ಹಿರಾನಗರ ವಲಯದ ಬೋಬಿಯಾ ಗಡಿ ಗ್ರಾಮದಿಂದ ಅನುಮಾನಾಸ್ಪದ ವ್ಯಕ್ತಿಯನ್ನು ಬಂಧಿಸಿವೆ. ಪ್ರೇಮ್ (45) ಎಂದು ಗುರುತಿಸಲಾದ ವ್ಯಕ್ತಿಯನ್ನು ವಿಚಾರಣೆಗಾಗಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!