ಸೋನಮ್ ವಾಂಗ್‌ಚುಕ್  
ದೇಶ

ಜುಲೈ 20 ರಂದು ಸಂಸತ್ ಚಲೋ ಘೋಷಿಸಿದ Cockroach Janta Party

ನೀಟ್ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಯುವಕರ ಸಂಘಟನೆ, ಮಳೆಗಾಲದ ಅಧಿವೇಶನದ ಮೊದಲ ದಿನವಾದ ಜುಲೈ 20 ರಂದು ಸಂಸತ್ ಚಲೋ ನಡೆಸುವುದಾಗಿ ಗುರುವಾರ ಘೋಷಿಸಿದೆ.

ನವದೆಹಲಿ: ಆರಂಭವಾದ ಕೆಲವೇ ದಿನಗಳಲ್ಲಿ ಸಾಮಾಜಿಕ ಮಾಧ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಕಾಕ್ರೋಚ್ ಜನತಾ ಪಕ್ಷ(CJP), ನೀಟ್ ಅಕ್ರಮ ಖಂಡಿಸಿ ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಗುರುವಾರ 20ನೇ ದಿನಕ್ಕೆ ಕಾಲಿಟ್ಟಿದೆ.

ಈ ಮಧ್ಯೆ, ಮಳೆಗಾಲದ ಅಧಿವೇಶನದ ಮೊದಲ ದಿನವಾದ ಜುಲೈ 20 ರಂದು ಸಂಸತ್ ಚಲೋ ನಡೆಸುವುದಾಗಿ ಗುರುವಾರ ಘೋಷಿಸಿದೆ.

ನೀಟ್ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಯುವಕರ ಸಂಘಟನೆ, ಭಾರೀ ಮಳೆಯ ಹೊರತಾಗಿಯೂ ಪ್ರತಿಭಟನಾಕಾರರು, ಪ್ರತಿಭಟನಾ ಸ್ಥಳಕ್ಕೆ ಟಾರ್ಪಲ್‌ಗಳನ್ನು ತರದಂತೆ ದೆಹಲಿ ಪೊಲೀಸರು ತಡೆದಿದ್ದಾರೆ ಎಂದು ಆರೋಪಿಸಿದೆ.

ಇಂದು ಬೆಳಗ್ಗೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ಜೂನ್ 28 ರಿಂದ ಅನಿರ್ದಿಷ್ಟಾವಧಿ ಉಪವಾಸ ಮುಷ್ಕರ ನಡೆಸುತ್ತಿರುವ ಶಿಕ್ಷಣತಜ್ಞ ಮತ್ತು ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರೊಂದಿಗೆ ಜುಲೈ 20 ರಂದು ಜಂತರ್ ಮಂತರ್‌ನಿಂದ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಸಿಜೆಪಿ ತಿಳಿಸಿದೆ.

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಪರೀಕ್ಷೆಯನ್ನು ರದ್ದುಪಡಿಸ ನಂತರ ತಮ್ಮ ಪ್ರಾಣವನ್ನೇ ಕಳೆದುಕೊಂಡ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಲು ದೇಶಾದ್ಯಂತದ ವಿದ್ಯಾರ್ಥಿಗಳು, ಪೋಷಕರು ಮತ್ತು ನಾಗರಿಕರು ಈ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಬೇಕು ಎಂದು ಸಿಜೆಪಿ ಕರೆ ನೀಡಿದೆ.

ದೇಶದ ಜನ, ಈ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಬೇಕು ಎಂದು ಬುಧವಾರ ರಾತ್ರಿ ಸೋನಮ್ ವಾಂಗ್‌ಚುಕ್ ಅವರು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿ ಮನವಿ ಮಾಡಿದ್ದಾರೆ.

"ನನ್ನ ಉಪವಾಸ ಸತ್ಯಾಗ್ರಹ ಕೈ ಬಿಡುವಂತೆ ನೀವು ಕಳುಹಿಸಿದ ಸಂದೇಶಗಳಿಗೆ ಧನ್ಯವಾದಗಳು. ಆದರೆ ಅದು ಆತ್ಮಹತ್ಯೆ ಮಾಡಿಕೊಂಡ 20 ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದಿಲ್ಲ ಅಥವಾ ಲಡಾಖ್ ಪರ್ವತಗಳು ಅಥವಾ ಭಾರತದ ನದಿಗಳನ್ನು ರಕ್ಷಿಸಲು ಸಹಾಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.

"ನೀವು ನಿಜವಾಗಿಯೂ ಸಹಾಯ ಮಾಡಲು ಬಯಸಿದರೆ, ಆರಾಮದಾಯಕವಾದ ಸೋಫಾಗಳಿಂದ ಸಂದೇಶಗಳನ್ನು ಕಳುಹಿಸುವುದಕ್ಕಿಂತ ಸ್ವಲ್ಪ ಹೆಚ್ಚಿನದನ್ನು ಮಾಡಿ; ಭಾರತೀಯ ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗುವ ಜುಲೈ 20 ರಂದು ದೆಹಲಿಗೆ ಮತ್ತು ಜಂತರ್ ಮಂತರ್‌ಗೆ ಬನ್ನಿ. ಒಟ್ಟಾಗಿ, ನಾವು ಸಂಸತ್ ಚಲೋ ನಡೆಸೋಣ. ನಮ್ಮ ಗೌರವಾನ್ವಿತ ಸಂಸದರು ಈ ಸಮಸ್ಯೆಯನ್ನು ಎತ್ತಿಕೊಂಡು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡೋಣ" ಎಂದು ವಾಂಗ್‌ಚುಕ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel