ಪ್ರಧಾನಿ ಮೋದಿ 
ದೇಶ

ರಾಜತಾಂತ್ರಿಕತೆಗಿಂತ ದೊಡ್ಡ ಆಯುಧವಿಲ್ಲ, ಮಧ್ಯಪ್ರಾಚ್ಯ ಸಂಘರ್ಷ ಅಂತ್ಯಕ್ಕೆ ಶಾಂತಿಯುತ ಮಾತುಕತೆಯೇ ಏಕೈಕ ಮಾರ್ಗ: ಪ್ರಧಾನಿ ಮೋದಿ

ವಿಶ್ವದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಎಲ್ಲ ಸಂಘರ್ಷಗಳಿಗೆ ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕವೇ ಪರಿಹಾರ ಕಂಡುಕೊಳ್ಳಬಹುದು. ಭಾರತ ಶಾಂತಿ, ಸ್ಥಿರತೆ ಹಾಗೂ ನಿಯಮಾಧಾರಿತ ಜಾಗತಿಕ ವ್ಯವಸ್ಥೆಯನ್ನು ಬಲಪಡಿಸಲು ಸದಾ ಬದ್ಧವಾಗಿದೆ.

ಮೆಲ್ಬೋರ್ನ್: ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರ ನಡುವಲ್ಲೇ ಜಾಗತಿಕ ಸಂಘರ್ಷಗಳಿಗೆ ಸಂವಾದ ಮತ್ತು ರಾಜತಾಂತ್ರಿಕ ಮಾತುಕತೆಯೇ ಶಾಶ್ವತ ಪರಿಹಾರ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದ್ದಾರೆ.

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಪ್ರಧಾನಿ ಆಂಥನಿ ಅಲ್ಬನೀಸ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿಶ್ವದಲ್ಲಿ ನಡೆಯುತ್ತಿರುವ ಎಲ್ಲ ಸಂಘರ್ಷಗಳನ್ನು ಶಾಂತಿಯುತ ಮಾತುಕತೆಗಳ ಮೂಲಕವೇ ಬಗೆಹರಿಸಬೇಕು ಎಂಬುದು ಭಾರತದ ನಿಲುವು ಎಂದು ಪುನರುಚ್ಚರಿಸಿದ್ದಾರೆ.

ವಿಶ್ವದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಎಲ್ಲ ಸಂಘರ್ಷಗಳಿಗೆ ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕವೇ ಪರಿಹಾರ ಕಂಡುಕೊಳ್ಳಬಹುದು. ಭಾರತ ಶಾಂತಿ, ಸ್ಥಿರತೆ ಹಾಗೂ ನಿಯಮಾಧಾರಿತ ಜಾಗತಿಕ ವ್ಯವಸ್ಥೆಯನ್ನು ಬಲಪಡಿಸಲು ಸದಾ ಬದ್ಧವಾಗಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮೋದಿ ಅವರು ಈ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗೆ ಅಮೆರಿಕವು ಇರಾನ್‌ನ ಹಲವು ಸೇನಾ ನೆಲೆಗಳು ಹಾಗೂ ಬಂದರು ಮೂಲಸೌಕರ್ಯಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಇದಕ್ಕೂ ಮುನ್ನ ಹಾರ್ಮುಜ್ ಜಲಸಂಧಿ ಸಮೀಪ ವಾಣಿಜ್ಯ ಹಡಗುಗಳ ಮೇಲೆ ನಡೆದ ದಾಳಿಗೆ ಇರಾನ್ ಹೊಣೆ ಎಂದು ಅಮೆರಿಕ ಆರೋಪಿಸಿತ್ತು.

ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ಬಹ್ರೇನ್, ಕುವೈತ್ ಮತ್ತು ಕತಾರ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಿದೆ ಎಂದು ವರದಿಯಾಗಿದೆ.

ಈ ಬೆಳವಣಿಗೆಗಳು ಪರ್ಷಿಯನ್ ಕೊಲ್ಲಿಯಲ್ಲಿನ ಕದನ ವಿರಾಮ ಪ್ರಯತ್ನಗಳಿಗೆ ಹಿನ್ನಡೆಯುಂಟುಮಾಡುವ ಜೊತೆಗೆ, ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿವೆ.

ಇದೇ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸಿದ ಇತ್ತೀಚಿನ ದಾಳಿಗಳಿಂದ ತಾತ್ಕಾಲಿಕ ಕದನ ವಿರಾಮ "ಅಂತ್ಯಗೊಂಡಿದೆ" ಎಂದು ಹೇಳಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಗಂಭೀರಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!