ಪ್ರಕಾಶ್ ರಾಜ್ 
ದೇಶ

'ಊಸರವಳ್ಳಿಯಂತೆ ಬದಲಾಗ್ತಾರೆ': ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಯಲ್ಲೇ ಭಾಷಣ; ನೆಟ್ಟಿಗರು ಗರಂ, Video

ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಅಕ್ರಮವಾಗಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್‌ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ದೆಹಲಿಗೆ ತೆರಳಿರುವ ನಟ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ CJP ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನವದೆಹಲಿ: ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಅಕ್ರಮವಾಗಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್‌ಗೆ (Prakash Raj) ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ದೆಹಲಿಗೆ ತೆರಳಿರುವ ನಟ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ Cockroach Janata Party (CJP) ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು ಅವರು ಅಂದು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಇಂದು ಅದೇ ಅಸ್ತ್ರ ನಮ್ಮ ಬಳಿ ಇದೆ. ಅದೇ ಅಸ್ತ್ರ ಬಳಸಿಕೊಂಡು ನಾವು ಅವರ ವಿರುದ್ಧ ಹೋರಾಡುತ್ತೇವೆ ಎಂದು ಹೇಳಿದ್ದರು.

ಇನ್ನು ಪ್ರತಿಭಟನೆಯಲ್ಲಿ ಹಿಂದಿಯಲ್ಲೇ ಪ್ರಕಾಶ್ ರಾಜ್ ಭಾಷಣ ಮಾಡಿದ್ದು ಇದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 2020ರಲ್ಲಿ ಕನ್ನಡ ಹಲವು ಸೆಲೆಬ್ರಿಟಿಗಳು ಹಿಂದಿ ಹೇರಿಕೆಯನ್ನು ವಿರೋಧಿಸಿದ್ದರು. ಈ ವೇಳೆ ಪ್ರಕಾಶ್ ರಾಜ್ ನಂಗೆ ಹಿಂದಿ ಬರಲ್ಲ ಹೋಗ್ರಪ್ಪ ಅಂತ ಬರೆದಿದ್ದ ಟೀ ಶರ್ಟ್ ಧರಿಸಿ ಪ್ರತಿಭಟನೆಗೆ ಸಾಥ್ ನೀಡಿದ್ದರು. ಇದೀಗ ನೆಟ್ಟಿಗರು ಇದನ್ನು ಅಸ್ತ್ರವಾಗಿ ಬಳಸಿದ್ದಾರೆ. ನಿಮಗೆ ಬೇಕಾದಾಗ ಬೇಕಂತೆ ಬದಲಾಗುವ ಈಸರವಳ್ಳಿಗಳು ಎಂದು ಕಮೆಂಟ್ ಮಾಡುತ್ತಿದ್ದಾರೆ.

ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಕಾಶ್ ರಾಜ್, ಇದು ಯಾವುದೇ ಒಂದು ಸಂಸ್ಥೆ ಅಥವಾ ನಾಯಕನ ಹೋರಾಟವಲ್ಲ. ಬದಲಾಗಿ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹೋರಾಟ ಎಂದು ಹೇಳಿದರು. 61 ವರ್ಷದ ಪ್ರಕಾಶ್ ರಾಜ್ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ, ಅದನ್ನು ಎಂದಿಗೂ ಯಾವುದಕ್ಕೂ ಹೊಣೆಗಾರರನ್ನಾಗಿ ಮಾಡುವುದಿಲ್ಲ. ಏಕೆಂದರೆ ಇದು ಶತಮಾನಗಳಿಂದ ನಡೆದುಕೊಂಡು ಬಂದಿದೆ. ಪ್ರಕಾಶ್ ರಾಜ್ ವಿದ್ಯಾರ್ಥಿಗಳೊಂದಿಗೆ ದೃಢವಾಗಿ ನಿಲ್ಲುತ್ತೇನೆ ಮತ್ತು ಅದನ್ನು ಮುಂದುವರಿಸುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!