ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಎಸ್ ಜಾನಕಿ ಅಂತಿಮ ದರ್ಶನ 
ದೇಶ

ಮೈಸೂರಿನಲ್ಲಿ ಎಸ್. ಜಾನಕಿ ಪಾರ್ಥಿವ ಶರೀರದ ಅಂತಿಮ ದರ್ಶನ; ಮಧ್ಯಾಹ್ನ ಅಂತ್ಯಕ್ರಿಯೆ

ಇದಕ್ಕೂ ಮೊದಲು ಮೈಸೂರಿನ ಬೋಗಾದಿ ಮನೆಯಲ್ಲಿ ಪಾರ್ಥಿವ ಶರೀರವಿದ್ಧು ಕೆಲವೇ ಕ್ಷಣಗಳಲ್ಲಿ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಯಿತು. ಪೂಜೆ ಬಳಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೈಸೂರು: ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ತರಲಾಗಿದೆ.

ನಿನ್ನೆ ನಿಧನರಾಗಿದ್ದ ಖ್ಯಾತ ಗಾಯಕಿ ಎಸ್ ಜಾನಕಿ (S Janaki) ಅವರ ಪಾರ್ಥೀವ ಶರೀರವನ್ನು ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಅಂತಿಮ ದರ್ಶನಕ್ಕೆ ತರಲಾಗಿದೆ.

ಇದಕ್ಕೂ ಮೊದಲು ಮೈಸೂರಿನ ಬೋಗಾದಿ ಮನೆಯಲ್ಲಿ ಪಾರ್ಥಿವ ಶರೀರವಿದ್ಧು ಕೆಲವೇ ಕ್ಷಣಗಳಲ್ಲಿ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಯಿತು. ಪೂಜೆ ಬಳಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮಹಾರಾಜ ಕಾಲೇಜು ಗ್ರೌಂಡ್‌ನಲ್ಲಿ ಅಂತಿಮ ದರ್ಶನ ಇದ್ದು ಇಂದು ಮೈಸೂರಿನಲ್ಲಿ S. ಜಾನಕಿ ಅಂತ್ಯಸಂಸ್ಕಾರ ನಡೆಯಲಿದ್ದು ಮೈಸೂರಿನ ಜಾನಕಿ ಅವರ ತೋಟದ ಮನೆಯಲ್ಲಿ ವಿಧಿ ವಿಧಾನ ನಡೆಯಲಿದೆ. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು, ಕಲಾವಿದರು ಹಾಗೂ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಲಿದ್ದಾರೆ.

ನಗರ ಪೊಲೀಸ್ ಆಯುಕ್ತೆ ಸೀಮಾ ಲಟ್ಕರ್ ಅವರು ಮಾತನಾಡಿ, ಸಾರ್ವಜನಿಕರು ಅಂತಿಮ ದರ್ಶನ ಪಡೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಜನರು ಶಾಂತಿಯುತವಾಗಿ ಅಂತಿಮ ದರ್ಶನ ಪಡೆಯುವಂತೆ ಮನವಿ ಮಾಡಿದರು.

ಎಸ್. ಜಾನಕಿ ಅವರ ಅಂತ್ಯಕ್ರಿಯೆ ಮಧ್ಯಾಹ್ನ 3 ಗಂಟೆಯ ಬಳಿಕ ನೆರವೇರಲಿದೆ ಎಂದು ಆಯುಕ್ತೆ ಸೀಮಾ ಲಟ್ಕರ್ ತಿಳಿಸಿದ್ದಾರೆ.

ಗಾಯಕಿಯ ಅಂತಿಮ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸುತ್ತಿದ್ದು, ಮೈಸೂರು ನಗರದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!