ಅಯೋಧ್ಯೆ: ರಾಮ ಮಂದಿರದ ದೇಣಿಗೆ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದು, ಖಜಾಂಚಿ ಗೋವಿಂದ ದೇವ್ ಗಿರಿ ಮಹಾರಾಜ್ ಅವರೂ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ.
ಅಯೋಧ್ಯೆಯ ದೇಣಿಗೆ ಮೇಲ್ವಿಚಾರಣೆಯಲ್ಲಿ ಲೋಪಗಳಾಗಿವೆ ಎಂದು ಒಪ್ಪಿಕೊಂಡರೂ, ದೇಣಿಗೆ ಲೂಟಿ ಆರೋಪದ ಮೇಲೆ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಗೋವಿಂದ ದೇವ್ ಗಿರಿ ಮಹಾರಾಜ್ ಅವರು ಮಂಗಳವಾರ ಹೇಳಿದ್ದಾರೆ.
ಪ್ರಕರಣದಲ್ಲಿ ಬಂಧಿಸಲ್ಪಟ್ಟವರೆಲ್ಲರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿಗಳಾಗಿದ್ದು, ಬ್ಯಾಂಕ್ ಅಧಿಕಾರಿಗಳು ಅವರ ಅರ್ಹತೆಗಳನ್ನು ಪರಿಶೀಲಿಸಬೇಕಾಗಿತ್ತು ಮತ್ತು ಹೆಚ್ಚು ಜಾಗರೂಕರಾಗಿರಬೇಕು ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಲೂಟಿ ಪ್ರಮಾಣದ ಬಗ್ಗೆ ಕೇಳಿದಾಗ, ಅದು ಸುಮಾರು 3 ಕೋಟಿ ರೂಪಾಯಿಗಳಾಗಿರಬಹುದು ಎಂಬುದು ನನ್ನ ವೈಯಕ್ತಿಕ ಅಂದಾಜು. ಆದರೆ ಅದನ್ನು ಅಧಿಕೃತ ಅಥವಾ ಅಧಿಕೃತ ಅಂಕಿ ಅಂಶವೆಂದು ಪರಿಗಣಿಸಬಾರದು ಎಂದು ಹೇಳಿದರು.
ಪ್ರಸ್ತುತ ವಿಶೇಷ ತನಿಖಾ ತಂಡ(ಎಸ್‌ಐಟಿ) ನಡೆಸುತ್ತಿರುವ ತನಿಖೆ ಹಾಗೂ ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆ ನನಗೆ ತೃಪ್ತ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಟ್ರಸ್ಟ್ ಖಜಾಂಚಿ ಸ್ಥಾನಕ್ಕೆ ರಾಜೀನಾಮೆ ನೀಡಲು ಗೋವಿಂದ್ ಗಿರಿ ಅವರು ರ್ಧರಿಸಿದ್ದಾರೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅವರು, ಇದು "ದುರುದ್ದೇಶಪೂರಿತ" ಎಂದು ಹೇಳಿದ್ದಾರೆ.
"ನಾನು ರಾಜೀನಾಮೆ ನೀಡುತ್ತೇನೆ ಎಂದು ಯಾವತ್ತೂ ಹೇಳಿಲ್ಲ. ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿ. ಎಂದಿಗೂ ಓಡಿಹೋಗುವುದಿಲ್ಲ" ಎಂದು ಅವರು ಹೇಳಿದರು.