ನವದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರೊಂದಿಗೆ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಂವಹನ ನಡೆಸಿದರು.  PTI Photo
ದೇಶ

ಧರ್ಮೇಂದ್ರ ಪ್ರಧಾನ್ ಕಿತ್ತು ಹಾಕಿ ಸೋನಂ ವಾಂಗ್ಚೂಕ್‌ ರನ್ನು ದೇಶದ ಶಿಕ್ಷಣ ಸಚಿವರನ್ನಾಗಿ ನೇಮಿಸಿ: ಕೇಜ್ರಿವಾಲ್ ಆಗ್ರಹ

ಇಂದು ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್‌ಚುಕ್ ಅವರನ್ನು ಭೇಟಿಯಾದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್‌ ಅವರನ್ನು ದೇಶದ ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡಬೇಕು ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಆಗ್ರಹಿಸಿದ್ದಾರೆ.

ಇಂದು ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್‌ಚುಕ್ ಅವರನ್ನು ಭೇಟಿಯಾದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಬಳಿಕ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಕೇಂದ್ರ ಸರ್ಕಾರ ಯುವಕರು, ವಿದ್ಯಾರ್ಥಿಗಳು ಮತ್ತು ವಾಂಗ್‌ಚುಕ್ ಅವರ ಮಾತನ್ನು ಆಲಿಸಬೇಕು. ಪದೇ ಪದೇ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವುದರಿಂದ ಅವರ ಕಳವಳಗಳನ್ನು ನಿರ್ಲಕ್ಷಿಸಬಾರದು ಎಂದು ಪ್ರತಿಪಾದಿಸಿದರು.

"ಪ್ರತಿ ವರ್ಷ ಪರೀಕ್ಷಾ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತವೆ ಮತ್ತು ಯುವಕರು ಅದಕ್ಕೆ ಬೆಲೆ ತೆರುತ್ತಿದ್ದಾರೆ. ಸರ್ಕಾರ, ವಿದ್ಯಾರ್ಥಿಗಳು ಮತ್ತು ವಾಂಗ್‌ಚುಕ್ ಅವರ ಮಾತನ್ನು ಆಲಿಸಬೇಕೆಂದು ನಾನು ಮನವಿ ಮಾಡುತ್ತೇನೆ" ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಹೇಳಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ ಮಾಜಿ ಸಿಎಂ, ವಾಂಗ್‌ಚುಕ್ ಅವರನ್ನು ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.

"ಇಂದು ಇಲ್ಲಿಗೆ ಬರುವಾಗ, ಏಪ್ರಿಲ್ 4, 2011 ರಂದು ಭ್ರಷ್ಟಾಚಾರ ವಿರೋಧಿ ಚಳವಳಿಯ ಸಮಯದಲ್ಲಿ ನಾನು ಅಣ್ಣಾ ಹಜಾರೆ ಅವರೊಂದಿಗೆ ಈ ಸ್ಥಳದಲ್ಲಿ ಕುಳಿತಿದ್ದನ್ನು ನೆನಪಿಸಿಕೊಂಡೆ. ಮೂರು ವರ್ಷಗಳ ನಂತರ, ನಮ್ಮ ಸಮಸ್ಯೆಗಳನ್ನು ಆಲಿಸದ ಹಿಂದಿನ ಸರ್ಕಾರ ಅಧಿಕಾರವನ್ನು ಕಳೆದುಕೊಂಡಿತು" ಎಂದರು.

ದೇಶಾದ್ಯಂತದ ಯುವಜನರು ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು ಎಂದು ಒತ್ತಾಯಿಸಲು ಒಗ್ಗೂಡಿದ್ದಾರೆ ಮತ್ತು ನ್ಯಾಯಯುತ ಹಾಗೂ ಪಾರದರ್ಶಕ ಶಿಕ್ಷಣ ವ್ಯವಸ್ಥೆಗಾಗಿ ಧ್ವನಿ ಎತ್ತಿದ್ದಾರೆ ಎಂದು ಶ್ಲಾಘಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video

ನಿತೀಶ್ ಕುಮಾರ್ ರಾಜೀನಾಮೆ ನಂತರ ಪಕ್ಷದ ಹೆಸರು ಬದಲಾವಣೆಗೆ ಮುಂದಾದ JDU; ಇಲ್ಲಿದೆ ಕಾರಣ...

BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Video