ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಗೆಳತಿಗೆ ಗುಂಡಿಕ್ಕಿ ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ಫ್ಲಾಟ್‌ವೊಂದರಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಪಿಸಿಆರ್ ಕರೆ ಬಂದಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನವದೆಹಲಿ: ದೆಹಲಿಯ ಬುರಾರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬ, ತನ್ನೊಂದಿಗೆ ಸಂಬಂಧದಲ್ಲಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಬಳಿಕ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫ್ಲಾಟ್‌ವೊಂದರಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಪಿಸಿಆರ್ ಕರೆ ಬಂದಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಬ್ಬರೂ ಸೇರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ಮಹಿಳೆಯ ತಂಗಿ ಇಂದು ಮಧ್ಯಾಹ್ನ 3:30 ರ ಸುಮಾರಿಗೆ ಕೆಲಸದಿಂದ ಮನೆಗೆ ಮರಳಿದಾಗ ಇಬ್ಬರ ಶವಗಳನ್ನು ನೋಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮೂಲದ ಮಹಿಳೆ ತನ್ನ ಸಹೋದರಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಹರಿಯಾಣ ನಿವಾಸಿಯಾಗಿರುವ ವ್ಯಕ್ತಿ ಉತ್ತರ ದೆಹಲಿಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

"ಪ್ರಾಥಮಿಕ ತನಿಖೆಯಲ್ಲಿ, ಕಳೆದ ಕೆಲವು ತಿಂಗಳುಗಳಿಂದ ಈ ಇಬ್ಬರೂ ಸಂಬಂಧದಲ್ಲಿದ್ದರು. ಪ್ರಾಥಮಿಕವಾಗಿ, ಇದು ಇಬ್ಬರೂ ಪರಸ್ಪರ ಒಪ್ಪಿ ಆತ್ಮಹತ್ಯೆ ಮಾಡಿಕೊಂಡಿರುವಂತೆ ತೋರುತ್ತಿದೆ. ಹೆಚ್ಚಿನ ವಿವರಗಳಿಗಾಗಿ ನಾವು ಅಪರಾಧ ಮತ್ತು ವಿಧಿವಿಜ್ಞಾನ ತಂಡಗಳಿಗಾಗಿ ಕಾಯುತ್ತಿದ್ದೇವೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಪುಟ ವಿಸ್ತರಣೆ ಸರ್ಕಸ್: ಸಚಿವರ ಪಟ್ಟಿ ಬಹುತೇಕ ಫೈನಲ್; 'ಲಕ್ಷ್ಮಿ'ಗೂ ಜಾಕ್‌ಪಾಟ್ ಸಾಧ್ಯತೆ!

Puri Rath Yatra: ಭಾರಿ ಜನಸಾಗರ; ಕಾಲ್ತುಳಿತ ಓರ್ವ ಸಾವು, ನೂರಾರು ಮಂದಿಗೆ ಗಾಯ!

ಶ್ರೀಕೃಷ್ಣ ದಿನಕ್ಕೆ ಐದು ಬಾರಿ ನಮಾಜ್ ಮಾಡುತ್ತಿದ್ದ: Video ವೈರಲ್, ಮುಸ್ಲಿಂ ಮೌಲ್ವಿಯ ನಾಲಿಗೆ ಕತ್ತರಿಸುವವರಿಗೆ 10 ಲಕ್ಷ ರೂ ಬಹುಮಾನ ಘೋಷಿಸಿದ ಅಯೋಧ್ಯೆ ಸ್ವಾಮೀಜಿ!

ಮಂಗಳೂರು: ಹಾಡಹಗಲೇ ಭಯಾನಕ ಘಟನೆ; ಜನರ ಎದುರೇ ಮಚ್ಚಿನಿಂದ ಕೊಚ್ಚಿ ಯುವತಿಯ ಕಗ್ಗೊಲೆ!

India Vs England: ರಿಕಿ ಪಾಂಟಿಂಗ್ ದಾಖಲೆ ಮುರಿದ ವಿರಾಟ್ ಕೊಹ್ಲಿ; ಸಾರ್ವಕಾಲಿಕ ಟಾಪ್-ಫೈವ್ ಪಟ್ಟಿಗೆ ಸೇರ್ಪಡೆ!