ಶಾಲಾ ವಾಹನಕ್ಕೆ ಪ್ಯಾಸೆಂಜರ್ ರೈಲು ಡಿಕ್ಕಿ 
ದೇಶ

ಪಶ್ಚಿಮ ಬಂಗಾಳ: ಶಾಲಾ ವಾಹನಕ್ಕೆ ಪ್ಯಾಸೆಂಜರ್ ರೈಲು ಡಿಕ್ಕಿ, ಮೂವರು ವಿದ್ಯಾರ್ಥಿಗಳು ಸೇರಿ 4 ಮಂದಿ ಸಾವು

ಬೆಳಿಗ್ಗೆ 7 ಗಂಟೆ ಸುಮಾರಿಗೆ ಲೆವೆಲ್-ಕ್ರಾಸಿಂಗ್ ಗೇಟ್‌ನಲ್ಲಿ ರೈಲು ಹಳಿಗಳನ್ನು ದಾಟುತ್ತಿದ್ದಾಗ ವಾಹನವು ಸ್ಥಳೀಯ ರೈಲಿಗೆ ಡಿಕ್ಕಿ ಹೊಡೆದಾಗ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುರ್ಷಿದಾಬಾದ್: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಿಗ್ಗೆ 7 ಗಂಟೆ ಸುಮಾರಿಗೆ ಲೆವೆಲ್-ಕ್ರಾಸಿಂಗ್ ಗೇಟ್‌ನಲ್ಲಿ ರೈಲು ಹಳಿಗಳನ್ನು ದಾಟುತ್ತಿದ್ದಾಗ ವಾಹನವು ಸ್ಥಳೀಯ ರೈಲಿಗೆ ಡಿಕ್ಕಿ ಹೊಡೆದಾಗ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲೆವೆಲ್ ಕ್ರಾಸಿಂಗ್‌ನಲ್ಲಿ ಚಲಿಸುತ್ತಿದ್ದ ಪ್ಯಾಸೆಂಜರ್ ರೈಲೊಂದು ಶಾಲಾ ಮಕ್ಕಳಿದ್ದ ವ್ಯಾನ್​ ಹಾಗೂ ಸೈಕ್ಲಿಸ್ಟ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಬರ್ಹಾಂಪೋರ್ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಣಸುಬರ್ಣ ಮತ್ತು ಗೋಬಿಂದಾಪುರ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್‌ನಲ್ಲಿ ಶುಕ್ರವಾರ ಬೆಳಗ್ಗೆ ಈ ಅಪಘಾತ ನಡೆದಿದೆ.

ನಿಮ್ಟಿತಾ-ಕಟ್ವಾ ಮಾರ್ಗದಲ್ಲಿ ಚಲಿಸುತ್ತಿದ್ದ ಪ್ಯಾಸೆಂಜರ್ ರೈಲು ಬರುತ್ತಿದ್ದಾಗ, ಕ್ರಾಸಿಂಗ್ ಗೇಟ್ ತೆರೆದೇ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗೇಟ್ ಇಲ್ಲದ ಕಾರಣ ಶಾಲಾ ವ್ಯಾನ್ ಹಾಗೂ ಸೈಕಲ್ ಸವಾರ ಹಳಿ ದಾಟಲು ಮುಂದಾದಾಗ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಶಾಲಾ ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಹಾಗೂ ಮತ್ತೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕನಿಷ್ಠ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ಕಾರಣವನ್ನು ತನಿಖೆ ಮಾಡಲು 10 ಸದಸ್ಯರ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈಲು ಸಮೀಪಿಸುತ್ತಿದ್ದಾಗ ಲೆವೆಲ್ ಕ್ರಾಸಿಂಗ್ ಗೇಟ್ ಏಕೆ ತೆರೆದಿತ್ತು ಎಂಬ ಬಗ್ಗೆ ತಂಡವು ತನಿಖೆ ಮಾಡುತ್ತದೆ ಎಂದು ಅವರು ಹೇಳಿದರು. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯ ನಡೆಸಿ ಗಾಯಾಳುಗಳನ್ನು ಕರ್ಣಸುಬರ್ಣ ಬ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಚುನಾವಣೆಗೆ ಹೊಸ ಡೆಡ್​ಲೈನ್; ಡಿಸೆಂಬರ್ 31ರೊಳಗೆ ಎಲೆಕ್ಷನ್ ನಡೆಸಲು ಸುಪ್ರೀಂ ಗ್ರೀನ್ ಸಿಗ್ನಲ್

Hormuz ಸಂಘರ್ಷ ತೀವ್ರ: Iran ಮೇಲೆ ಅಮೆರಿಕಾ ಭೀಕರ ವಾಯುದಾಳಿ; ಪ್ರತೀಕಾರವಾಗಿ ಕತಾರ್ ಮೇಲೆ Tehran ಕ್ಷಿಪಣಿ ದಾಳಿ

Delimitation ಪರಿಷ್ಕೃತ ಮಸೂದೆ ವಿವಾದ: ಸರ್ವಪಕ್ಷ ಸಭೆ ಕರೆಯುವಂತೆ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ..!

ನೌಕಾ ದಿಗ್ಬಂಧನ ಉಲ್ಲಂಘನೆ: ಇರಾನ್‌ಗೆ ತೆರಳುತ್ತಿದ್ದ 3 ಹಡಗುಗಳಿಗೆ ಅಮೆರಿಕಾ ತಡೆ, 1 ಹಡಗು ವಶಕ್ಕೆ..!

'ಟೈ ಧರಿಸಿಲ್ಲ' ಎಂದು 'ಕಾಲು ಮುಟ್ಟಿ ಕ್ಷಮೆ ಕೇಳಿ ಅಂದ್ರು': ಕಂಪನಿ ಘನತೆಗೆ ಮಸಿ ಬಳಿಯುವ ಪ್ರಯತ್ನ; ಮಾಜಿ ಉದ್ಯೋಗಿ ಆರೋಪ ತಳ್ಳಿ ಹಾಕಿದ IndiGo