ಸಿಇಸಿ ಜ್ಞಾನೇಶ್ ಕುಮಾರ್  
ದೇಶ

'ಅಖಿಲ ಭಾರತ ಮಾಧ್ಯಮ ಸಮ್ಮೇಳನ 2026: SIR ಕಾಲಕ್ಕೆ ತಕ್ಕಂತೆ ಬದಲಾಗುವ ಜೀವಂತ ದಾಖಲೆ- CEC ಜ್ಞಾನೇಶ್ ಕುಮಾರ್

ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 380 ಕ್ಕೂ ಹೆಚ್ಚು ಮಾಧ್ಯಮ ವೃತ್ತಿಪರರು ಇದರಲ್ಲಿ ಪಾಲ್ಗೊಂಡಿದ್ದರು.

ನವದೆಹಲಿ: ಭಾರತೀಯ ಚುನಾವಣಾ ಆಯೋಗವು (ECI) ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿಯಲ್ಲಿ 'ಅಖಿಲ ಭಾರತ ಮಾಧ್ಯಮ ಸಮ್ಮೇಳನ 2026' ಅನ್ನು ಶುಕ್ರವಾರ ಆಯೋಜಿಸಿತ್ತು.

ಪಾಲುದಾರರ ಸಂಯೋಜನೆ, ಪ್ರಜಾಪ್ರಭುತ್ವದ ಬಲವರ್ಧನೆ: ಚುನಾವಣೆಗಳಲ್ಲಿ ಮಾಧ್ಯಮಗಳ ಪಾತ್ರ" (Connecting stakeholders, strengthening democracy: Role of media in elections) ಎಂಬ ವಿಷಯದಡಿ ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 380 ಕ್ಕೂ ಹೆಚ್ಚು ಮಾಧ್ಯಮ ವೃತ್ತಿಪರರು ಇದರಲ್ಲಿ ಪಾಲ್ಗೊಂಡಿದ್ದರು.

ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು, ಭಾರತದಲ್ಲಿ ಚುನಾವಣೆಗಳು ಸಂವಿಧಾನ, ಚುನಾವಣಾ ಕಾನೂನುಗಳು ಹಾಗೂ ಆಯೋಗವು ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳಿಗೆ ಅನುಗುಣವಾಗಿ ನಡೆಯುತ್ತವೆ ಎಂಬುದನ್ನು ಒತ್ತಿ ಹೇಳಿದರು. ಅಲ್ಲದೆ, ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ವಿವಿಧ ಪಾಲುದಾರರು ಸಮಕಾಲೀನವಾಗಿ ಪರಿಶೋಧನೆ (Concurrent audit) ಮಾಡುತ್ತಾರೆ ಎಂದು ಅವರು ತಿಳಿಸಿದರು.

ಸುಮಾರು 95 ಕೋಟಿ ಭಾರತೀಯರನ್ನು ಒಳಗೊಂಡಿರುವ ದೇಶದ ಮತದಾರರ ಪಟ್ಟಿಯು ಕಾಲಕ್ಕೆ ತಕ್ಕಂತೆ ಬದಲಾಗುವ ಜೀವಂತ ದಾಖಲೆಯಾಗಿದೆ ಎಂದು ಸಿಇಸಿ (CEC) ಜ್ಞಾನೇಶ್ ಕುಮಾರ್ ಬಣ್ಣಿಸಿದರು. ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿರುವ ಶಾಸನಬದ್ಧ ಸುರಕ್ಷತಾ ಕ್ರಮಗಳನ್ನು ಉಲ್ಲೇಖಿಸಿದ ಅವರು, 12 ಲಕ್ಷಕ್ಕೂ ಹೆಚ್ಚು ಬೂತ್ ಮಟ್ಟದ ಅಧಿಕಾರಿಗಳು (BLOs) ಮತ್ತು 15 ಲಕ್ಷಕ್ಕೂ ಹೆಚ್ಚು ಬೂತ್ ಮಟ್ಟದ ಏಜೆಂಟ್‌ಗಳು (BLAs) 'ಸಮಕಾಲೀನ ಲೆಕ್ಕಪರಿಶೋಧಕ'ರಾಗಿ ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ವಿವರಿಸಿದರು.

ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ದಾಖಲಾದ ಅತಿಹೆಚ್ಚು ಮತದಾನ ಪ್ರಮಾಣವು, ದೇಶದ ಚುನಾವಣಾ ವ್ಯವಸ್ಥೆಯ ಮೇಲೆ ಭಾರತೀಯ ಮತದಾರರಿಗಿರುವ ನಂಬಿಕೆ ಮತ್ತು ಭಾರತೀಯ ಪ್ರಜಾಪ್ರಭುತ್ವದ ಶಕ್ತಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು. ಇದೇ ವೇಳೆ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ಪಾಲ್ಗೊಂಡ ದೇಶದ ಎಲ್ಲಾ ಮತದಾರರಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಚುನಾವಣಾ ಪ್ರಕ್ರಿಯೆಗಳ ವಿವಿಧ ಆಯಾಮಗಳ ಬಗ್ಗೆ ಮತ್ತು ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳನ್ನು ಒಳಗೊಂಡಂತೆ ಅತ್ಯಂತ ಪಾರದರ್ಶಕವಾಗಿ ಚುನಾವಣೆಗಳನ್ನು ಹೇಗೆ ನಡೆಸಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಅರಿವು ಮೂಡಿಸುವುದು ಈ ಸಮ್ಮೇಳನದ ಪ್ರಮುಖ ಉದ್ದೇಶವಾಗಿದೆ.

ಸಂವಿಧಾನದಲ್ಲಿರುವ ಪಾರದರ್ಶಕತೆಯ ಕ್ರಮಗಳು, 1950 ಮತ್ತು 1951ರ ಪ್ರಜಾಪ್ರತಿನಿಧಿ ಕಾಯ್ದೆಗಳು, ಇಸಿಐನೆಟ್ (ECINET) ವೇದಿಕೆ, ತಂತ್ರಜ್ಞಾನದ ಪಾತ್ರ ಹಾಗೂ ಮಾಧ್ಯಮಗಳಿಗೆ ಸಂಬಂಧಿಸಿದ ಪ್ರಮುಖ ಕಾನೂನುಗಳ ಬಗ್ಗೆ ಸಮ್ಮೇಳನದಲ್ಲಿ ಸಮಗ್ರ ಮಾಹಿತಿ ನೀಡಲಾಯಿತು.

ಅಲ್ಲದೆ, ಚುನಾವಣಾ ಪಾರದರ್ಶಕತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಬೂತ್ ಮಟ್ಟದ ಏಜೆಂಟ್‌ಗಳು, ಪೋಲಿಂಗ್ ಏಜೆಂಟ್‌ಗಳು ಮತ್ತು ಕೌಂಟಿಂಗ್ ಏಜೆಂಟ್‌ಗಳ ಪಾತ್ರ ಹಾಗೂ ಜವಾಬ್ದಾರಿಗಳ ಕುರಿತು ಪ್ರತಿನಿಧಿಗಳಿಗೆ ವಿವರಿಸಲಾಯಿತು.

ಕಾರ್ಯಕ್ರಮದ ಭಾಗವಾಗಿ, ಮತದಾರರ ಪಟ್ಟಿ ಸಿದ್ಧತೆ, ಮತದಾನ ಹಾಗೂ ಮತ ಎಣಿಕೆ ಪ್ರಕ್ರಿಯೆಗಳ ಪ್ರಾತ್ಯಕ್ಷಿಕೆಯನ್ನು ಪ್ರತಿನಿಧಿಗಳಿಗೆ ನೀಡಲಾಯಿತು. ಇದು ಮಾಧ್ಯಮ ವೃತ್ತಿಪರರಿಗೆ ವಿವಿಧ ಶಾಸನಬದ್ಧ ನಮೂನೆಗಳ ಕುರಿತು ಪ್ರಾಯೋಗಿಕ ಅನುಭವವನ್ನು ಒದಗಿಸಿತು. ಕಾರ್ಯಕ್ರಮದ ಅಂತ್ಯದಲ್ಲಿ ಮುಖ್ಯ ಚುನಾವಣಾ ಆಯುಕ್ತರೊಂದಿಗೆ ಮಾಧ್ಯಮ ಪ್ರತಿನಿಧಿಗಳ ಸಂವಾದ ಕಾರ್ಯಕ್ರಮ ನಡೆಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವದೆಹಲಿ: ಜಂತರ್ ಮಂತರ್ ನಲ್ಲಿ ಭಾರಿ ಹೈಡ್ರಾಮ, ಬಲವಂತದಿಂದ ಸೋನಮ್ ವಾಂಗ್‌ಚುಕ್ ಆಸ್ಪತ್ರೆಗೆ ಸ್ಥಳಾಂತರ!

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ಶಿಫ್ಟ್: ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಉಪವಾಸ ಸತ್ಯಾಗ್ರಹ ಮುಂದುವರಿಕೆ!

'ಬಿಡದಿ ಟೌನ್ ಶಿಪ್' ಯೋಜನೆ ವಿರೋಧಿಸಿ ಬಿಜೆಪಿ ಪಾದಯಾತ್ರೆ!

2028ಕ್ಕೆ'ನನ್ನ ತಂದೆಯೇ ಮುಖ್ಯಮಂತ್ರಿ'- ಪ್ರಿಯಾಂಕಾ ಜಾರಕಿಹೊಳಿ

ಕೇರಳ: ಹೋಟೆಲ್ ನಲ್ಲಿ ಲಿಫ್ಟ್ ನಲ್ಲಿ ಸಿಲುಕಿಕೊಂಡ ಕಾಂಗ್ರೆಸ್ ನಾಯಕ ಶಶಿ ತರೂರ್! ಮುಂದೇನಾಯ್ತು? Video