ಖಾಸಗಿ ಸ್ಲೀಪರ್ ಬಸ್ ಗೆ ಬೆಂಕಿ 
ದೇಶ

ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ; ಚಾಲಕನ ಸಮಯ ಪ್ರಜ್ಞೆಯಿಂದ 23 ಪ್ರಯಾಣಿಕರು ಪಾರು, Video

ಚೆನ್ನೈನಿಂದ ಮಧುರೈಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಶನಿವಾರ ಮುಂಜಾನೆ ತಮಿಳುನಾಡಿನ ಪೆರಂಬಲೂರು ಜಿಲ್ಲೆಯ ಮಂಗಳಮೇಡು ಸಮೀಪದ ಚೆನ್ನೈ–ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಚೆನ್ನೈ: ತಮಿಳುನಾಡಿನಲ್ಲಿ ಖಾಸಗಿ ಸ್ಲೀಪರ್ ಬಸ್ ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತುಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿದ್ದ 23 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚೆನ್ನೈನಿಂದ ಮಧುರೈಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಶನಿವಾರ ಮುಂಜಾನೆ ತಮಿಳುನಾಡಿನ ಪೆರಂಬಲೂರು ಜಿಲ್ಲೆಯ ಮಂಗಳಮೇಡು ಸಮೀಪದ ಚೆನ್ನೈ–ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ 23 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಯಾಣದ ವೇಳೆ ಬಸ್‌ನಿಂದ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣವೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಕ್ಷಣಾರ್ಧದಲ್ಲೇ ಬಸ್‌ನಲ್ಲಿದ್ದ ಎಲ್ಲಾ 23 ಪ್ರಯಾಣಿಕರನ್ನು ಎಬ್ಬಿಸಿ ಸುರಕ್ಷಿತವಾಗಿ ಹೊರಗೆ ಇಳಿಸಿದರು. ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ಬಸ್ ಅನ್ನು ಆವರಿಸಿ, ವಾಹನ ಸಂಪೂರ್ಣ ಹೊತ್ತಿ ಉರಿದಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಆದರೆ ಅದಾಗಲೇ ಬಸ್ ಬಹುತೇಕ ಸುಟ್ಟು ಕರಕಲಾಗಿತ್ತು.

ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಚೆನ್ನೈ–ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರವನ್ನು ಬೇರೆ ಮಾರ್ಗಕ್ಕೆ ತಿರುಗಿಸಿದರು. ಬಳಿಕ ರಸ್ತೆ ಸಂಚಾರವನ್ನು ಪುನಃ ಸಹಜ ಸ್ಥಿತಿಗೆ ತರಲಾಯಿತು.

ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಯಾಂತ್ರಿಕ ದೋಷ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಚಾಲಕನ ಸಮಯ ಪ್ರಜ್ಞೆಗೆ ಮೆಚ್ಚುಗೆ ಮಹಾಪೂರ

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಆದರೆ ಚಾಲಕನ ಸಮಯೋಚಿತ ನಿರ್ಧಾರ ಮತ್ತು ತುರ್ತು ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಪ್ರಯಾಣಿಕರು ಚಾಲಕನನ್ನು ಪ್ರಶಂಸಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Hormuz ಜಲಸಂಧಿಯಲ್ಲಿ ಮಹಾ ಸಂಘರ್ಷ: Iran 3 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ; 'ಕಠಿಣ ಪ್ರತೀಕಾರ'ದ ಶಪಥ ಮಾಡಿದ ಟೆಹ್ರಾನ್!

100 ದಿನಗಳ ಹೊಸ್ತಿಲಲ್ಲಿ ಡಿಕೆಶಿ ಸರ್ಕಾರ: ಸಾಧನೆಗಳ ಪಟ್ಟಿ ಹಿಡಿದು ಕಾಂಗ್ರೆಸ್ ಅಖಾಡಕ್ಕೆ, ‘ಯು-ಟರ್ನ್’ ಅಸ್ತ್ರದೊಂದಿಗೆ ವಿಪಕ್ಷಗಳ ಕೌಂಟರ್‌..!

ಡಿಕೆಶಿಗೆ ಟಕ್ಕರ್ ಕೊಡಲು ಹೊಸ ತಂತ್ರ: AHINDA ಮುರಿದು ‘HINDA’ ಕಟ್ಟಲು ಸಿದ್ದು ಮಾಸ್ಟರ್ ಪ್ಲ್ಯಾನ್, ಮಗನ ಭವಿಷ್ಯಕ್ಕಾಗಿ ಹಳೆಯ ಮಿತ್ರರಿಗೆ ಗೇಟ್‌ಪಾಸ್?

Miss World 2026: ವಿಶ್ವಸುಂದರಿ ಪಟ್ಟ ಮುಡಿಗೇರಿಸಿಕೊಂಡ ಡೊಮಿನಿಕನ್ ರಿಪಬ್ಲಿಕ್‌ನ ಬ್ಯೂಟಿ! ಭಾರತದ ನಿಕಿತಾ ಪೂರ್ವಾಲ್ ಗೆ ನಿರಾಸೆ

ಏಷ್ಯಾಕಪ್ 2026: ಪಾಕ್‌ ಆಟಗಾರ್ತಿ ವಿಕೆಟ್‌ ಪಡೆದು 'ಗೇಟ್‌ ಔಟ್‌' ಎಂದ ಶಫಾಲಿ ವರ್ಮಾ! 3 ವಿಶ್ವ ದಾಖಲೆ ಉಡೀಸ್ -Video