ಅಭಿಜೀತ್ ದೀಪ್ಕೆ 
ದೇಶ

ವಾಂಗ್‌ಚುಕ್ ಸ್ಥಳಾಂತರ ಬೆನ್ನಲ್ಲೇ ಅಭಿಜೀತ್ ದೀಪ್ಕೆ ಮುಖಕ್ಕೆ ಇಂಕ್ ಎಸೆದ ಮಹಿಳೆ; ಹೊಸ ಹೈಡ್ರಾಮಕ್ಕೆ ಜಂತರ್ ಮಂತರ್‌ ಸಾಕ್ಷಿ; Video

ವಾಂಗ್‌ಚುಕ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ ಬೆನ್ನಲ್ಲೇ ಇಂದು ಮಧ್ಯಾಹ್ನ ಜಂತರ್ ಮಂತರ್ ಹೊಸ ಹೈಡ್ರಾಮಕ್ಕೆ ಸಾಕ್ಷಿಯಾಯಿತು.

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಿಕ್ಷಣತಜ್ಞ ಮತ್ತು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್‌ ಅವರು ಶನಿವಾರ ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಂಗ್‌ಚುಕ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ ಬೆನ್ನಲ್ಲೇ ಇಂದು ಮಧ್ಯಾಹ್ನ ಜಂತರ್ ಮಂತರ್ ಹೊಸ ಹೈಡ್ರಾಮಕ್ಕೆ ಸಾಕ್ಷಿಯಾಯಿತು. ಕಾಕ್ರೋಚ್ ಜನತಾ ಪಕ್ಷದ(ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ ಮಹಿಳೆಯೊಬ್ಬರು ಅವರ ಮೇಲೆ ಶಾಯಿಯಂತಹ ದ್ರವವನ್ನು ಎಸೆದರು.

ದೆಹಲಿ ಪೊಲೀಸರು ಪ್ರತಿಭಟನಾ ಸ್ಥಳದದಿಂದ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದ ಕೆಲವೇ ಗಂಟೆಗಳ ನಂತರ ಈ ಘಟನೆ ನಡೆದಿದೆ.

ಬೆಂಬಲಿಗರು ದಿಢೀರ್ ವೇದಿಕೆಯತ್ತ ಧಾವಿಸಿದಾಗ ಘಟನೆಯು ಕಾರ್ಯಕ್ರಮಕ್ಕೆ ಸ್ವಲ್ಪ ಸಮಯ ಅಡ್ಡಿಪಡಿಸಿತು. ಇದರಿಂದಾಗಿ ಗದ್ದಲ ಉಂಟಾಯಿತು.

ಮಹಿಳೆಯ ಗುರುತು ಮತ್ತು ಕೃತ್ಯದ ಹಿಂದಿನ ಉದ್ದೇಶ ತಕ್ಷಣವೇ ತಿಳಿದುಬಂದಿಲ್ಲ. ಆದಾಗ್ಯೂ, ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೆಲವರಿಗೆ ಜೀರ್ಣಿಸಿಕೊಳ್ಳಲು ಕಷ್ಟವಾಗಿದೆ: 7.8ರಷ್ಟು GDP ಬೆಳವಣಿಗೆಯ ಟೀಕಾಕಾರರನ್ನು ಖಂಡಿಸಿದ ಪ್ರಧಾನಿ ಮೋದಿ!

ಏಷ್ಯಾಕಪ್ 2026: ಪಾಕಿಸ್ತಾನ ನೀಡಿದ ಅಲ್ಪಮೊತ್ತದ ರನ್ ಬೆನ್ನಟ್ಟಿ ಗೆದ್ದ ಭಾರತ

ತುಂಗಭದ್ರಾ ಜಲಾಶಯದ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ!

ಏಷ್ಯಾಕಪ್ 2026: 3 ಡಕೌಟ್, ಪಾಕಿಸ್ತಾನವನ್ನು 55 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ಕಳಪೆ ದಾಖಲೆ ಸೃಷ್ಟಿ!

'ದುಡ್ಡಿನ ಧಿಮಾಕು.. ಕಾರಿಗೇ ಬೆಂಕಿ ಹಾಕಿ ಬಾ ಅಂತ ಹೇಳಿದ್ದೆ': ನಟ 'ಯಶ್' ತಾಯಿ ಪುಷ್ಪ ಅರುಣ್ ಕುಮಾರ್!