ಕಾರ್ಗೋ ಹಡಗಿನ ಮೇಲೆ ದಾಳಿ 
ದೇಶ

ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ದಾಳಿ: 4 ಭಾರತೀಯರು ಸಾವು; ಭಾರತ ತೀವ್ರ ಖಂಡನೆ!

ಜುಲೈ 19ರ ಸಂಜೆ ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದ್ದು ಭಾರತ ಈ ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ನವದೆಹಲಿ: ಜುಲೈ 19ರ ಸಂಜೆ ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದ್ದು ಭಾರತ ಈ ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ದಾಳಿಯ ಸಮಯದಲ್ಲಿ, ಎಂವಿ ಗೋಲ್ಡನ್ ಲಿಯೋ ಐದು ಭಾರತೀಯ ಪ್ರಜೆಗಳು ಸೇರಿದಂತೆ 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು.

ಉಕ್ರೇನ್‌ನಲ್ಲಿರುವ ನಮ್ಮ ತಂಡವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸರ್ಕಾರ ಸಂತಾಪ ಸೂಚಿಸುತ್ತಿದ್ದು ಗಾಯಗೊಂಡ ಸಿಬ್ಬಂದಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.

ಭಾರತ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ವಾಣಿಜ್ಯ ಸಾಗಣೆಯನ್ನು ಗುರಿಯಾಗಿಸುವುದು, ನಾಗರಿಕ ಸಿಬ್ಬಂದಿಗೆ ಅಪಾಯವನ್ನುಂಟುಮಾಡುವುದು ಮತ್ತು ವ್ಯಾಪಾರ ಸ್ವಾತಂತ್ರ್ಯವನ್ನು ಅಡ್ಡಿಪಡಿಸುವುದು ಅತ್ಯಂತ ಶೋಚನೀಯ ಮತ್ತು ಅದನ್ನು ತಪ್ಪಿಸಬೇಕು ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು

ಸಚಿವ ಸತೀಶ್ ಜಾರಕಿಹೊಳಿ ನಿವಾಸ ಮೇಲೆ ದಾಳಿ ಏಕೆ; ED ಹೇಳಿದ್ದೇನು? Video

Kanpur: ಮನೆ ಮುಂದೆ ಮೂತ್ರ ವಿಸರ್ಜನೆ ಪ್ರಶ್ನಿಸಿದ ಅಂಗಡಿ ಮಾಲೀಕನನ್ನೇ ಹೊಡೆದು ಕೊಂದ ಯುವಕರು! Video

ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಕ್ಕೆ ಸಿಎನ್‌ಆರ್ ರಾವ್‌ಗೆ ಯಾವುದೇ ನೋಟಿಸ್ ನೀಡಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ; Video

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಕೆಲಸ ಬಿಡಿ, ಇಲ್ಲವೇ ಸಾಯಲು ಸಿದ್ಧರಾಗಿ; ಹಿಟ್ ಲಿಸ್ಟ್ ಬಿಡುಗಡೆ ಮಾಡಿದ ಉಗ್ರರು, 7,000 ಕಾಶ್ಮೀರಿ ಪಂಡಿತರಿಗೆ ಜೀವ ಬೆದರಿಕೆ..!