ಮಲ್ಲಿಕಾರ್ಜುನ ಖರ್ಗೆ 
ದೇಶ

'ಪ್ರಜಾಪ್ರಭುತ್ವದ ತಾಯಿ' ತನ್ನ ಯುವ ಮಕ್ಕಳನ್ನು ನಡೆಸಿಕೊಳ್ಳುವ ರೀತಿ ಇದಲ್ಲ: ಲಾಠಿ ಚಾರ್ಜ್ ಖಂಡಿಸಿ ಹುಟ್ಟುಹಬ್ಬ ಆಚರಿಸದಿರಲು ಖರ್ಗೆ ನಿರ್ಧಾರ

ಆದರೆ ಇಂದು ಆಚರಣೆಯ ದಿನವಲ್ಲ. ಬದಲಾಗಿ, ಇದು ಹೊಣೆಗಾರಿಕೆಯನ್ನು ಕೇಳುವ ದಿನವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ಮಾಡಿದ್ದೇಕೆ?

ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮವನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದೆಹಲಿಯ ಜಂತರ್ ಮಂತರ್ ನಿಂದ ಸಂಸತ್ ಚಲೋ ಪ್ರತಿಭಟನೆಯ ವೇಳೆ ನಡೆದ ಲಾಠಿ ಚಾರ್ಜ್ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ 84ನೇ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇಂದು ಆಚರಣೆಯ ದಿನವಲ್ಲ, ಆದರೆ ಹೊಣೆಗಾರಿಕೆಯನ್ನು ಬಯಸುವ ಮತ್ತು ಪ್ರಜಾಪ್ರಭುತ್ವವನ್ನು ಪುನಃಸ್ಥಾಪಿಸುವ ದಿನವಾಗಿದೆ ಎಂದು ಬರೆದುಕೊಂಡಿದ್ದಾರೆ.

ಸೋಮವಾರ ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ ಮತ್ತು ಸರ್ಕಾರದ ನಿರ್ದಯತೆಯದ್ದಾಗಿದೆ. ಶಾಂತಿಯುತ ಪ್ರಜಾಪ್ರಭುತ್ವ ಪ್ರತಿಭಟನೆಗೆ ದೇಶ ಸಾಕ್ಷಿಯಾಗಿದೆ. ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದ ವಿದ್ಯಾರ್ಥಿಗಳ ಧ್ವನಿಗೆ ಉತ್ತರ ನೀಡುವ ಬದಲು ಬಲಪ್ರಯೋಗ ಮಾಡಲಾಗಿದೆ. 'ಪ್ರಜಾಪ್ರಭುತ್ವದ ತಾಯಿ' ತನ್ನ ಯುವ ಮಕ್ಕಳನ್ನು ನಡೆಸಿಕೊಳ್ಳುವ ರೀತಿ ಇದಲ್ಲ ಎಂದಿದ್ದಾರೆ.

ಹೀಗಾಗಿ ಈ ನೋವಿನ ಸಂದರ್ಭಗಳಲ್ಲಿ, ನಾನು ನನ್ನ ಹುಟ್ಟುಹಬ್ಬವನ್ನು ಆಚರಿಸದಿರಲು ತೀರ್ಮಾನಿಸಿದ್ದೇನೆ. ನನಗೆ ಶುಭಾಶಯಗಳನ್ನು ಕೋರಿದ ಎಲ್ಲಾ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳು ಮತ್ತು ಪ್ರತಿಯೊಬ್ಬ ನಾಗರಿಕರಿಗೂ ನಾನು ಆಳವಾದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಅಭಿಮಾನ ನನಗೆ ಅತ್ಯಂತ ಮೌಲ್ಯಯುತವಾದದ್ದು, ನನ್ನ ಹೃದಯದ ಆಳದಿಂದ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

ಆದರೆ ಇಂದು ಆಚರಣೆಯ ದಿನವಲ್ಲ. ಬದಲಾಗಿ, ಇದು ಹೊಣೆಗಾರಿಕೆಯನ್ನು ಕೇಳುವ ದಿನವಾಗಿದೆ. ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ಮಾಡಿದ್ದೇಕೆ? ಸಂಸತ್ತನ್ನು ಸಂಪೂರ್ಣವಾಗಿ ಬಂದ್ ಮಾಡಿ, ಇಂಟರ್ನೆಟ್ ಸೇವೆಗಳನ್ನು ರದ್ದುಗೊಳಿಸಿದ್ದು ಏಕೆ? ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಲಕ್ಷಾಂತರ ಯುವಕರ ಸಂಕಷ್ಟಕ್ಕೆ ಯಾರು ಜವಾಬ್ದಾರಿ ವಹಿಸಿಕೊಳ್ಳುತ್ತಾರೆ? ಎಂದು ಅವರು ಪ್ರಶ್ನಿಸಿದ್ದಾರೆ.

ಸರ್ಕಾರವು ತಕ್ಷಣವೇ ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಪೂರ್ಣ ಚರ್ಚೆಗೆ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ವಿಷಯದ ನೈತಿಕ ಮತ್ತು ರಾಜಕೀಯ ಜವಾಬ್ದಾರಿಯನ್ನು ವಹಿಸಿಕೊಂಡು ರಾಜೀನಾಮೆ ನೀಡಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೆಲವರಿಗೆ ಜೀರ್ಣಿಸಿಕೊಳ್ಳಲು ಕಷ್ಟವಾಗಿದೆ: 7.8ರಷ್ಟು GDP ಬೆಳವಣಿಗೆಯ ಟೀಕಾಕಾರರನ್ನು ಖಂಡಿಸಿದ ಪ್ರಧಾನಿ ಮೋದಿ!

ಏಷ್ಯಾಕಪ್ 2026: ಪಾಕಿಸ್ತಾನ ನೀಡಿದ ಅಲ್ಪಮೊತ್ತದ ರನ್ ಬೆನ್ನಟ್ಟಿ ಗೆದ್ದ ಭಾರತ

ತುಂಗಭದ್ರಾ ಜಲಾಶಯದ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ!

ಏಷ್ಯಾಕಪ್ 2026: 3 ಡಕೌಟ್, ಪಾಕಿಸ್ತಾನವನ್ನು 55 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ಕಳಪೆ ದಾಖಲೆ ಸೃಷ್ಟಿ!

'ದುಡ್ಡಿನ ಧಿಮಾಕು.. ಕಾರಿಗೇ ಬೆಂಕಿ ಹಾಕಿ ಬಾ ಅಂತ ಹೇಳಿದ್ದೆ': ನಟ 'ಯಶ್' ತಾಯಿ ಪುಷ್ಪ ಅರುಣ್ ಕುಮಾರ್!