ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವ ರಾಹುಲ್ ಗಾಂಧಿ. 
ದೇಶ

ವಿದ್ಯಾರ್ಥಿಗಳ ಥಳಿಸುವುದು ಭಾರತೀಯ ಸಂಸ್ಕೃತಿಯಲ್ಲ: ಮೋದಿ, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಕಿಡಿ; ಕ್ಷಮೆಯಾಚಿಸುವಂತೆ ಆಗ್ರಹ..!

ಈ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರದ ಅನುಮತಿ ಪಡೆಯಬೇಕಿದೆ ಎಂದು ಸ್ಪೀಕರ್ ಹೇಳಿದರು. ಅಂದರೆ ಸಂಸತ್ತಿನಲ್ಲಿ ಚರ್ಚೆ ನಡೆಸಲೂ ಸರ್ಕಾರದ ಅನುಮತಿ ಬೇಕೇ?

ನವದೆಹಲಿ: ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪೇಪರ್ ಲೀಕ್ ಖಂಡಿಸಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸಂಸತ್ ಚಲೋ' ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ಅವರು, ಪ್ರಧಾನಿ ಮೋದಿ ಅವರು ದೇಶದ ವಿದ್ಯಾರ್ಥಿಗಳಲ್ಲಿ ತಕ್ಷಣ ಕ್ಷಮೆಯಾಚಿಸಬೇಕು ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು "ಸಂಪೂರ್ಣವಾಗಿ ಭಾರತೀಯ ಮೌಲ್ಯಗಳಿಗೆ ವಿರುದ್ಧವಾದದ್ದು" ಎಂದು ಟೀಕಿಸಿದರು.

ಇದೇ ವೇಳೆ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುವಂತೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ್ದಾಗಿ ತಿಳಿಸಿದ ರಾಹುಲ್, "ಈ ವಿಷಯದ ಬಗ್ಗೆ ಚರ್ಚೆ ನಡೆಸಲು ಸರ್ಕಾರದ ಅನುಮತಿ ಪಡೆಯಬೇಕಿದೆ ಎಂದು ಸ್ಪೀಕರ್ ಹೇಳಿದರು. ಅಂದರೆ ಸಂಸತ್ತಿನಲ್ಲಿ ಚರ್ಚೆ ನಡೆಸಲೂ ಸರ್ಕಾರದ ಅನುಮತಿ ಬೇಕೇ?" ಎಂದು ಪ್ರಶ್ನಿಸಿದರು.

ದೇಶದ ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆ ಮತ್ತು ಪರೀಕ್ಷಾ ವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಪರೀಕ್ಷಾ ವ್ಯವಸ್ಥೆಯನ್ನು ಗೆದ್ದಲುಗಳು ತಿಂದಂತಾಗಿದೆ. ವಿದ್ಯಾರ್ಥಿಗಳು ಇದೇ ವಿಷಯವನ್ನು ಹೇಳುತ್ತಿದ್ದಾರೆ. ಅದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನಿಸಿದರು.

ಈ ವಿಚಾರದ ಬಗ್ಗೆ ನಾವು ಹಲವು ಬಾರಿ ವಿವರಿಸಿದ್ದೇವೆ. ಆದರೆ, ಪ್ರಧಾನಿ ಮೋದಿ ಏಕೆ ಮೌನವಾಗಿದ್ದಾರೆ? ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಬೇಕು. ವಿದ್ಯಾರ್ಥಿಗಳನ್ನು ಪೊಲೀಸರು ಥಳಿಸುವಂತಹ ಪರಿಸ್ಥಿತಿ ತಕ್ಷಣ ನಿಲ್ಲಬೇಕು" ಎಂದು ಒತ್ತಾಯಿಸಿದರು. ಇದೇ ವೇಳೆ, ಗಾಯಗೊಂಡ ವಿದ್ಯಾರ್ಥಿಗಳನ್ನು ಭೇಟಿ ಮಾಡುವುದಾಗಿಯೂ ರಾಹುಲ್ ತಿಳಿಸಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಆಗ್ರಹ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, "ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಆದರೆ, ವಿದ್ಯಾರ್ಥಿಗಳನ್ನು ಥಳಿಸಿದ್ದು ಅವರು ಅಲ್ಲ, ಗೃಹ ಸಚಿವ ಅಮಿತ್ ಶಾ. ಆದ್ದರಿಂದ ಅವರೂ ರಾಜೀನಾಮೆ ನೀಡಬೇಕು. ಗೃಹ ಸಚಿವರು ಪ್ರಧಾನಿಗೆ ವರದಿ ಮಾಡುತ್ತಾರೆ. ಹೀಗಾಗಿ ಪ್ರಧಾನಿ ಮೋದಿಯೂ ರಾಜೀನಾಮೆ ನೀಡಬೇಕು" ಎಂದು ಹೇಳಿದರು.

ಸೋಮವಾರ ಮುಂಗಾರು ಅಧಿವೇಶನದ ಮೊದಲ ದಿನ ಸಾವಿರಾರು ಪ್ರತಿಭಟನಾಕಾರರು ಸಂಸತ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದರು.

ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಪ್ರಯೋಗಿಸಿ ಗುಂಪನ್ನು ಚದುರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅನಂತ್ ನಾಗ್​ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ; ಸ್ಟ್ಯಾಂಡಿಂಗ್ ಒವೇಶನ್; ರಕ್ಷಿತ್​ ಶೆಟ್ಟಿ ನಿರ್ಮಾಣದ 'ಮಿಥ್ಯ'ಗೆ 3 ರಾಷ್ಟ್ರ ಪ್ರಶಸ್ತಿ! Video

ಗಣೇಶೋತ್ಸವ ಸಂಭ್ರಮಾಚರಣೆಗೆ ಬಾಂಬೆ ಹೈಕೋರ್ಟ್ ಬ್ರೇಕ್​! ರಸ್ತೆಗಳಲ್ಲಿ ಪಟಾಕಿ ಹಚ್ಚುವಂತಿಲ್ಲ; ಸಂಪೂರ್ಣ ನಿಷೇಧ!

'ಶಾರುಖ್ ಖಾನ್‌ಗೆ ಏನಾಯಿತು?' ನಡೆಯಲು ಕಷ್ಟಪಡುತ್ತಿರುವ ಖ್ಯಾತ ನಟ, Video ವೈರಲ್, ಅಭಿಮಾನಿಗಳಲ್ಲಿ ಆತಂಕ!

ದೆಹಲಿ ಗಲಭೆ ಆರೋಪಿ ಶಾರ್ಜೀಲ್ ಇಮಾಮ್‌ಗೆ 7 ದಿನ ಮಧ್ಯಂತರ ಜಾಮೀನು!

ಜನರ ಎದುರೇ ರೈಲಿನಲ್ಲಿ ದಂಪತಿಯ ಅಸಭ್ಯ ವರ್ತನೆ: ಇದರಿಂದ ಕೆರಳಿದ ಮಹಿಳೆ ಮಾಡಿದ್ದೇನು? ವಿಡಿಯೋ ನೋಡಿ!