ಕಾಂಗ್ರೆಸ್ ನಾಯಕರ ಜೊತೆಗೆ ಸಿಎಂ ಡಿಕೆ ಶಿವಕುಮಾರ್ 
ದೇಶ

ಯುವಜನತೆಯ ಪ್ರತಿಭಟನೆ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ: ಬಂಧನಕ್ಕೆ ಹೆದರಲ್ಲ, ನ್ಯಾಯ ಸಿಗುವವರೆಗೂ ಹೋರಾಟ- CM ಡಿಕೆ ಶಿವಕುಮಾರ್! Video

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗಡೆ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.

ನವದೆಹಲಿ: ಕೇಂದ್ರ ಸರ್ಕಾರ ಯುವಜನತೆಯ ಹೋರಾಟವನ್ನು ಹತ್ತಿಕ್ಕುತ್ತಿದ್ದು, ಬಂಧನಕ್ಕೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗಡೆ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.

ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ಈ ದೇಶದ ಯುವ ಜನತೆಯ ಭವಿಷ್ಯಕ್ಕಾಗಿ ಹೋರಾಟ ಮಾಡಲಾಗುತ್ತಿದೆ‌. ಕೇಂದ್ರ ಸರ್ಕಾರ ಯುವಜನತೆಯ ಹೋರಾಟ ಹತ್ತಿಕ್ಕುತ್ತಿರುವುದು ದುರಾದೃಷ್ಟಕರ. ನಮಗೆ ನ್ಯಾಯ ಬೇಕು. ಸಂಸತ್ತಿನಲ್ಲಿ ಇದರ ಬಗ್ಗೆ ಚರ್ಚೆ ನಡೆಸಬೇಕು ಎಂದು ಆಗ್ರಹಿಸುತ್ತೇವೆ ಎಂದು ಹೇಳಿದರು.

ಯುವ ಸಮೂಹ ಈ ದೇಶದ ಭವಿಷ್ಯ. ಹೋರಾಟ ಅವರ ಹಕ್ಕು. ಅವರಿಗೆ ರಕ್ಷಣೆ ನೀಡುವುದು ನಮ್ಮ ಸಂವಿಧಾನದ ಹಕ್ಕು. ನಾವೂ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದೇವೆ. ಈಗ ಬಲವಂತವಾಗಿ ಅವರು ನಮ್ಮನ್ನು ತಡೆಯಲು, ಬಂಧಿಸಲು ಪ್ರಯತ್ನಿಸುತ್ತಿದ್ದಾರೆ" ಎಂದರು.

ಬಂಧನಕ್ಕೆ ಹೆದರುವುದಿಲ್ಲ: ಸುಮಾರು ನೂರಕ್ಕೂ ಹೆಚ್ಚು ಸಂಸತ್ ಸದಸ್ಯರು ಸೇರಿ ಪ್ರತಿಭಟಿಸುತ್ತಿದ್ದಾರೆ. ಈ ಬಂಧನಕ್ಕೆಲ್ಲಾ ಯಾರೂ ಹೆದರುವುದಿಲ್ಲ. ನಾವು ಅದನ್ನು ಎದುರಿಸುತ್ತೇವೆ. ನಮಗೆ ನ್ಯಾಯ ಬೇಕು. ಈ ದೇಶದ ಯುವಕರು ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ದೊರೆಯಬೇಕು ಎಂದು ಒತ್ತಾಯಿಸಿದರು

ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ. ನಾವು ವಿದ್ಯಾರ್ಥಿಗಳಿಗೆ ಸಹಾಯ ಮಾಡಬೇಕು. ವಿದ್ಯಾರ್ಥಿಗಳು ಎಷ್ಟು ನೋವನ್ನು ಅನುಭವಿಸಿದ್ದಾರೆಂದು ಮಾಧ್ಯಮಗಳು ನೋಡಿವೆ. ಈ ದೇಶದ ಭವಿಷ್ಯ ಅವರಲ್ಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!