ಸುಪ್ರೀಂ ಕೋರ್ಟ್  
ದೇಶ

'ಕಾಕ್ರೋಚ್​'ಗಳ ಮೇಲೆ ಲಾಠಿ ಚಾರ್ಜ್: ವಿಡಿಯೋ ನೋಡಲು ಟೈಮ್ ಇಲ್ಲ- ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಯಿತು.

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ​ ಪಾರ್ಟಿ(ಸಿಜೆಪಿ) ದೆಹಲಿಯಲ್ಲಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಯಿತು.

"ಪೊಲೀಸ್ ದೌರ್ಜನ್ಯಕ್ಕೆ ಸಂಬಂಧಿಸಿದ ವಿಡಿಯೋಗಳು ನನ್ನ ಬಳಿ ಇವೆ ಎಂದು ಅರ್ಜಿದಾರರ ಪರ ವಕೀಲರು ಪೊಲೀಸರ ಕೃತ್ಯವನ್ನು ಸಾಬೀತುಪಡಿಸಲು ವಿಡಿಯೋ ಸಾಕ್ಷ್ಯಗಳನ್ನು ಸಲ್ಲಿಸಲು ಮುಂದಾದಾಗ, ನಮ್ಮ ಸಮಯ ವ್ಯರ್ಥ ಮಾಡಬೇಡಿ, ನಿಮ್ಮ ಸಮಯವನ್ನೂ ಹಾಳು ಮಾಡಿಕೊಳ್ಳಬೇಡಿ ಎಂದು ಸಿಜೆಐ ಎಚ್ಚರಿಸಿದರು.

ವಿದ್ಯಾರ್ಥಿಗಳನ್ನು ಥಳಿಸಲಾಗಿದೆ ಎಂದು ವಕೀಲರು ಪುನರುಚ್ಚರಿಸಿದಾಗ ಮತ್ತು ವಿಡಿಯೋ ಪುರಾವೆಗಳನ್ನು ಪರಿಶೀಲಿಸುವಂತೆ ವಕೀಲರು ಮತ್ತೆ ಉಲ್ಲೇಖಿಸಿದಾಗ, ಸಿಜೆಐ, "ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. ನಾವು ಯಾವುದೇ ವಿಡಿಯೊಗಳನ್ನು ವೀಕ್ಷಿಸುವುದಿಲ್ಲ ಮತ್ತು ನಮ್ಮ ಬಳಿ ಸಮಯವೂ ಇಲ್ಲ" ಎಂದು ಹೇಳಿದರು.

ಮುಂಗಾರು ಅಧಿವೇಶನದ ಆರಂಭಿಕ ದಿನವಾದ ಸೋಮವಾರ ಸಿಜೆಪಿ ನಡೆಸಿದ ಸಂಸತ್ ಚಲೋ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಪೊಲೀಸರ ಕ್ರಮಕ್ಕೆ ಸಂಬಂಧಿಸಿದಂತೆ ಈ ಅರ್ಜಿ ಸಲ್ಲಿಸಲಾಗಿದೆ.

ದೆಹಲಿಯ ಹೃದಯ ಭಾಗದಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವ ಪ್ರತಿಭಟನಾಕಾರರು, ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿದ್ದು, ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೆಲವರಿಗೆ ಜೀರ್ಣಿಸಿಕೊಳ್ಳಲು ಕಷ್ಟವಾಗಿದೆ: 7.8ರಷ್ಟು GDP ಬೆಳವಣಿಗೆಯ ಟೀಕಾಕಾರರನ್ನು ಖಂಡಿಸಿದ ಪ್ರಧಾನಿ ಮೋದಿ!

ಏಷ್ಯಾಕಪ್ 2026: ಪಾಕಿಸ್ತಾನ ನೀಡಿದ ಅಲ್ಪಮೊತ್ತದ ರನ್ ಬೆನ್ನಟ್ಟಿ ಗೆದ್ದ ಭಾರತ

ತುಂಗಭದ್ರಾ ಜಲಾಶಯದ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ!

ಏಷ್ಯಾಕಪ್ 2026: 3 ಡಕೌಟ್, ಪಾಕಿಸ್ತಾನವನ್ನು 55 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ಕಳಪೆ ದಾಖಲೆ ಸೃಷ್ಟಿ!

'ದುಡ್ಡಿನ ಧಿಮಾಕು.. ಕಾರಿಗೇ ಬೆಂಕಿ ಹಾಕಿ ಬಾ ಅಂತ ಹೇಳಿದ್ದೆ': ನಟ 'ಯಶ್' ತಾಯಿ ಪುಷ್ಪ ಅರುಣ್ ಕುಮಾರ್!