ಡಿ ಕೆ ಶಿವಕುಮಾರ್  
ದೇಶ

'ಕೊನೆಯ ಉಸಿರಿರುವವರೆಗೂ ಹೋರಾಡುತ್ತೇವೆ': ದೆಹಲಿಯಲ್ಲಿ ಪೊಲೀಸ್ ವಶಕ್ಕೆ ಒಳಗಾದ CM ಡಿ ಕೆ ಶಿವಕುಮಾರ್-Video

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಭಾಗದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು ಸೇರಿದಂತೆ ವಿಪಕ್ಷಗಳ ನಾಯಕರು ಭಾಗವಹಿಸಿದ್ದರು.

ನವದೆಹಲಿ: ವಿದ್ಯಾರ್ಥಿಗಳ 'ಸಂಸದ್ ಚಲೋ' ಮೆರವಣಿಗೆಯ ವೇಳೆ ಕಾಂಗ್ರೆಸ್ ನಾಯಕರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಾಗೂ ನೀಟ್-ಯುಜಿ (NEET-UG) ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಪ್ರಸಂಗ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಭಾಗದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಷ್ಟೇ ಅಲ್ಲದೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಹಲವು ಸಂಸದರೂ ಭಾಗವಹಿಸಿದ್ದರು. ಬಳಿಕ ದೆಹಲಿ ಪೊಲೀಸರು ಪ್ರತಿಭಟನಾನಿರತ ನಾಯಕರನ್ನು ವಶಕ್ಕೆ ಪಡೆದು ಛತ್ರಸಾಲ್ ಕ್ರೀಡಾಂಗಣಕ್ಕೆ ಕರೆದೊಯ್ದರು.

ವಶಕ್ಕೆ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ. ಶಿವಕುಮಾರ್, ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಬಗ್ಗೆ ಉತ್ತರದಾಯಿತ್ವವನ್ನು ಒತ್ತಾಯಿಸುತ್ತಿರುವ ವಿದ್ಯಾರ್ಥಿಗಳ ಬೆಂಬಲಕ್ಕಾಗಿ ಈ ಶಾಂತಿಯುತ ಪ್ರತಿಭಟನೆ ನಡೆಸಲಾಗಿದೆ ಎಂದು ಹೇಳಿದರು.

'ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು'

ದೆಹಲಿ ಸರ್ಕಾರದ ಈ ಕ್ರಮ ಸರಿಯಲ್ಲ. ಯಾರೂ ಪ್ರತಿಭಟನೆಯನ್ನು ದುರುಪಯೋಗಪಡಿಸಿಕೊಂಡಿಲ್ಲ. ನಾವು ಪ್ರಧಾನಿಯವರ ನಿವಾಸದ ಹೊರಭಾಗದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಈ ಹೋರಾಟ ದೇಶದ ವಿದ್ಯಾರ್ಥಿಗಳಿಗಾಗಿ ಮತ್ತು ಯುವಜನರಿಗಾಗಿ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೂ ಈ ವಿಚಾರವನ್ನು ಪ್ರತಿಪಕ್ಷ ಪ್ರಸ್ತಾಪಿಸುತ್ತಲೇ ಇರುತ್ತದೆ ಎಂದು ಅವರು ಹೇಳಿದರು. ನಮ್ಮ ಕೊನೆಯ ಉಸಿರಿರುವವರೆಗೂ ಹೋರಾಡುತ್ತೇವೆ. ಅವರನ್ನು ರಕ್ಷಿಸಬೇಕೆಂಬುದೇ ನಮ್ಮ ಉದ್ದೇಶ ಎಂದು ಶಿವಕುಮಾರ್ ಹೇಳಿದರು.

ವಶಕ್ಕೆ ಪಡೆದಿರುವುದನ್ನು ದೃಢಪಡಿಸಿದ ಡಿ.ಕೆ. ಶಿವಕುಮಾರ್

ತಮ್ಮನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, "ಹೌದು, ನನ್ನನ್ನು ವಶಕ್ಕೆ ಪಡೆದಿದ್ದಾರೆ ಎಂದು ದೃಢಪಡಿಸಿದರು.

ಬಳಿಕ ಅವರನ್ನು ಇತರ ನಾಯಕರೊಂದಿಗೆ ಪೊಲೀಸ್ ಬಸ್‌ನಲ್ಲಿ ಕೂರಿಸಿ ಉತ್ತರ ದೆಹಲಿಯ ಛತ್ರಸಾಲ್ ಕ್ರೀಡಾಂಗಣಕ್ಕೆ ಕರೆದೊಯ್ಯಲಾಯಿತು.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರನ್ನು, ಭದ್ರತಾ ವ್ಯವಸ್ಥೆಯ ಕಾರಣವನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ವಶಕ್ಕೆ ಪಡೆದರು. ನಂತರ ಎಲ್ಲರನ್ನೂ ಛತ್ರಸಾಲ್ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಯಿತು.

ಪ್ರತಿಭಟನೆಯ ಹಿನ್ನೆಲೆ

ಜುಲೈ 20ರಂದು ನಡೆದ ಸಿಜೆಪಿ (Cockroach Janata Party)ಯ 'ಸಂಸದ್ ಚಲೋ' ಮೆರವಣಿಗೆಯ ವೇಳೆ ಸಂಸತ್ ಭವನದತ್ತ ತೆರಳದಂತೆ ತಡೆಯಲು ಪೊಲೀಸರು ಅಶ್ರುವಾಯು ಸಿಡಿಸುವುದು ಮತ್ತು ಲಾಠಿ ಪ್ರಹಾರ ನಡೆಸುವುದು ಸೇರಿದಂತೆ ಬಲಪ್ರಯೋಗ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ನಡೆದಿದೆ.

ನೀಟ್-ಯುಜಿ ಪ್ರತಿಭಟನೆ ತೀವ್ರ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಒಗ್ಗೂಡಿಸಿರುವ ಕಾಕ್‌ರೋಚ್ ಜನತಾ ಪಾರ್ಟಿ (CJP) ಆರಂಭಿಸಿದ ನೀಟ್-ಯುಜಿ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಧಾನ ಬಯಸುತ್ತಿದ್ದಾರೆ ಆದರೆ, ನಮಗೆ ಆಸಕ್ತಿಯೇ ಇಲ್ಲ: ಇರಾನ್ ಇನ್ನೂ ಬೆಲೆ ತೆರಬೇಕಿದೆ; ಡೊನಾಲ್ಡ್ ಟ್ರಂಪ್

US-Iran ಸಮರ ತೀವ್ರ: 11ನೇ ದಿನವೂ ಅಮೆರಿಕದಿಂದ ಭೀಕರ ವಾಯುದಾಳಿ; ವಿಫಲವಾದ ಕದನ ವಿರಾಮ ಒಪ್ಪಂದ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನೆಡೆ

ವಿದ್ಯಾರ್ಥಿಗಳಿಗೆ ಗೊಂದಲವಲ್ಲ, ಭರವಸೆ ಬೇಕು; ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು 'ರಾಜಕೀಯ ದಾಳ'ವಾಗಿ ಬಳಸುತ್ತಿದ್ದಾರೆ: ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಅಮೆರಿಕಕ್ಕೆ ದುಬಾರಿಯಾದ Iran ಕದನ: ಬಿಲಿಯನ್ ಗಟ್ಟಲೆ ಡಾಲರ್ ನಷ್ಟ, ಹೆಚ್ಚುವರಿ ಅನುದಾನಕ್ಕೆ Trump ಮೊರೆ..!

ಪಾಕಿಸ್ತಾನಕ್ಕೆ Iran ರಹಸ್ಯ ಸಂದೇಶ: Asim Munir ಜೊತೆ ಮಹತ್ವದ ಮಾತುಕತೆ, Khamenei ಕಳುಹಿಸಿದ ಆ ರಹಸ್ಯ ಪತ್ರದಲ್ಲೇನಿದೆ?