ನರೇಂದ್ರ ಮೋದಿ, ಅಮಿತ್ ಶಾ (ಸಂಗ್ರಹ ಚಿತ್ರ) 
ದೇಶ

ಯುವಕರ ಭವಿಷ್ಯವೇ ನಮ್ಮ ಮೊದಲ ಆದ್ಯತೆ; ಪ್ರಶ್ನೆಪತ್ರಿಕೆ ಲೀಕ್ ಮಾಡಿದವರ ವಿರುದ್ಧ ಕಠಿಣ ಕ್ರಮ: ಅಮಿತ್ ಶಾ ಭರವಸೆ

ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಯುವಕರ ಭವಿಷ್ಯದೊಂದಿಗೆ ಆಟವಾಡುವವರ ವಿರುದ್ಧ ತ್ವರಿತ ನ್ಯಾಯಾಲಯಗಳನ್ನು (ಫಾಸ್ಟ್‌ಟ್ರ್ಯಾಕ್ ಕೋರ್ಟ್) ಸ್ಥಾಪಿಸಲು ಪ್ರಧಾನಿ ಮೋದಿ ತೆಗೆದುಕೊಂಡಿರುವ ನಿರ್ಧಾರ ಐತಿಹಾಸಿಕ ಹೆಜ್ಜೆಯಾಗಲಿದೆ.

ನವದೆಹಲಿ: ದೇಶದ ಯುವಕರ ಕಲ್ಯಾಣ ಮತ್ತು ಉಜ್ವಲ ಭವಿಷ್ಯವೇ ಮೋದಿ ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದ್ಧತೆಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ ಅವರು, "ದೇಶದ ಯುವಕರ ಕಲ್ಯಾಣ ಮತ್ತು ಅವರ ಉಜ್ವಲ ಭವಿಷ್ಯವೇ ಮೋದಿ ಸರ್ಕಾರದ ಅತ್ಯುನ್ನತ ಆದ್ಯತೆ ಹಾಗೂ ಸಂಕಲ್ಪ" ಎಂದು ಹೇಳಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಯುವಕರ ಭವಿಷ್ಯದೊಂದಿಗೆ ಆಟವಾಡುವವರ ವಿರುದ್ಧ ತ್ವರಿತ ನ್ಯಾಯಾಲಯಗಳನ್ನು (ಫಾಸ್ಟ್‌ಟ್ರ್ಯಾಕ್ ಕೋರ್ಟ್) ಸ್ಥಾಪಿಸಲು ಪ್ರಧಾನಿ ಮೋದಿ ತೆಗೆದುಕೊಂಡಿರುವ ನಿರ್ಧಾರ ಐತಿಹಾಸಿಕ ಹೆಜ್ಜೆಯಾಗಲಿದೆ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ಮೋದಿ ಕೂಡ ದೇಶದ ಯುವಕರ ಹಿತಾಸಕ್ತಿ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಅವರ ಭವಿಷ್ಯಕ್ಕೆ ಧಕ್ಕೆ ತರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಯಾವುದೂ ಇಲ್ಲ. ಇದು ನಮ್ಮ ಸರ್ಕಾರದ ಮೊದಲ ಆದ್ಯತೆ. ಯುವಕರ ಭವಿಷ್ಯ ಹಾಳು ಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗುವವರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆ ವಿಧಿಸಲು ದೇಶದಾದ್ಯಂತ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದರು.

ಇದರ ಜೊತೆಗೆ, ಪೇಪರ್ ಲೀಕ್ ಪ್ರಕರಣಗಳ ಕುರಿತು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಹೇಳಿದ್ದರು.

ಇತ್ತೀಚೆಗೆ ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು 'ಸಂಸದ್ ಚಲೋ' ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯ ವೇಳೆ ಪೊಲೀಸರು ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗ ನಡೆಸಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಈ ಬೆಳವಣಿಗೆಗಳ ನಡುವೆಯೇ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಯುವಕರ ಭವಿಷ್ಯ ರಕ್ಷಣೆ ಕುರಿತು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್