ಉಗ್ರರ ಮನೆ ಧ್ವಂಸಗೊಳಿಸಿರುವುದು. 
ದೇಶ

ಅಮರನಾಥ ಯಾತ್ರೆ ಕರ್ತವ್ಯದಲ್ಲಿದ್ದ ಪೊಲೀಸ್ ಹತ್ಯೆ: ಕಾಶ್ಮೀರದಲ್ಲಿ ರಾತ್ರೋರಾತ್ರಿ ಇಬ್ಬರು LET ಉಗ್ರರ ಮನೆಗಳ ಧ್ವಂಸಗೊಳಿಸಿದ ಸೇನಾಪಡೆ..!

ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದ ಕೆಲವೇ ಗಂಟೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸಕ್ರಿಯವಾಗಿದ್ದ ಇಬ್ಬರು ಲಷ್ಕರ್-ಇ-ತೊಯ್ಬಾ (LeT) ಉಗ್ರರ ಮನೆಗಳನ್ನು ಭದ್ರತಾಪಡೆಗಳು ಬುಧವಾರ ಮಧ್ಯರಾತ್ರಿ ಧ್ವಂಸಗೊಳಿಸಿದ್ದಾರೆ.

ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದ ಕೆಲವೇ ಗಂಟೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಆದಿಲ್ ಠೋಕರ್ ಮತ್ತು ಹಾರೂನ್ ರಶೀದ್ ಗನೈ ಎಂಬ ಇಬ್ಬರು ಲಷ್ಕರ್ ಉಗ್ರರ ಮನೆಗಳನ್ನು ತಡರಾತ್ರಿ ಕಾರ್ಯಾಚರಣೆ ನಡೆಸಿ, ನೆಲಸಮಗೊಳಿಸಿದ್ದಾರೆ.

ಬುಧವಾರ ಮಧ್ಯಾಹ್ನ ಅನಂತನಾಗ್‌ನ ಲಾಲ್ ಚೌಕ್ ಪ್ರದೇಶದಲ್ಲಿ ಅಮರನಾಥ ಯಾತ್ರೆಯ ಭದ್ರತೆಯಲ್ಲಿ ನಿಯೋಜಿತರಾಗಿದ್ದ ಹೆಡ್ ಕಾನ್ಸ್‌ಟೇಬಲ್ ಆಶಿಕ್ ಹುಸೇನ್ ಅವರನ್ನು ಏಕಾಂಗಿಯಾಗಿ ಬಂದ ಉಗ್ರನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದ. ಈ ಘಟನೆಯ ಬೆನ್ನಲ್ಲೇ ಭದ್ರತಾ ಪಡೆಗಳು ಮತ್ತು ಆಡಳಿತ ಕಠಿಣ ಕ್ರಮಕ್ಕೆ ಮುಂದಾಗಿವೆ.

ಕಾಶ್ಮೀರದಲ್ಲಿ ಈ ಹಿಂದೆ ಹಲವು ಬಾರಿ ಸಕ್ರಿಯ ಉಗ್ರರ ಮನೆಗಳನ್ನು ಧ್ವಂಸಗೊಳಿಸಲಾಗಿತ್ತು. ಆದರೆ, ಕಳೆದ ಸುಮಾರು ಒಂದು ವರ್ಷದಿಂದ ಹಿಂಸಾಚಾರದ ಘಟನೆಗಳು ಕಡಿಮೆಯಾಗಿದ್ದ ಹಿನ್ನೆಲೆಯಲ್ಲಿ ಇಂತಹ ಕ್ರಮಗಳು ಸ್ಥಗಿತಗೊಂಡಿದ್ದವು. ಇದೀಗ ಪೊಲೀಸ್ ಸಿಬ್ಬಂದಿಯ ಹತ್ಯೆಯ ನಂತರ ಮತ್ತೆ ಉಗ್ರರ ವಿರುದ್ಧ ಕಠಿಣ ಕಾರ್ಯಾಚರಣೆ ಆರಂಭವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!