ಸಿಜೆಪಿ ಪ್ರತಿಭಟನೆಯಲ್ಲಿ ಉದ್ಧವ್ ಠಾಕ್ರೆ 
ದೇಶ

ಜುಲೈ 26 ರಂದು ಮುಂಬೈಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಅಡ್ಡಿಗೆ ಯತ್ನಿಸಿದರೆ ಒದೆ ಬೀಳುತ್ತೆ- ರಾಜ್ ಠಾಕ್ರೆ ವಾರ್ನಿಂಗ್!

ತಮ್ಮ ಪ್ರತಿಭಟನೆಯ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡಿದ್ದು, ಮಹಾರಾಷ್ಟ್ರ ಕಾಂಗ್ರೆಸ್‌ನ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಉದ್ಧವ್ ತಿಳಿಸಿದರು.

ಮುಂಬೈ: NEET ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ದೌರ್ಜನ್ಯದ ಹಿನ್ನೆಲೆಯಲ್ಲಿ ಜುಲೈ 26 ರಂದು ಬೃಹತ್ ಪ್ರತಿಭಟನಾ Rallyಯನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಗುರುವಾರ ಘೋಷಿಸಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉದ್ಧವ್, ಸರ್ಕಾರ ನಿರ್ದಯವಾಗಿದೆ. ಆದರೆ ವಿದ್ಯಾರ್ಥಿಗಳು ಇನ್ನು ಮುಂದೆ ಯಾರಿಗೂ ಹೆದರುವುದಿಲ್ಲ ಎಂದು ಹೇಳಿದರು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಮತ್ತು ಮಹಿಳಾ ಪ್ರತಿಭಟನಾಕಾರರ ಬಟ್ಟೆಗಳನ್ನು ಹರಿದ ಪೊಲೀಸರ ಕೃತ್ಯಗಳಿಗೆ ಪ್ರಧಾನಿ ಜವಾಬ್ದಾರಿ ವಹಿಸಿಕೊಳ್ಳುತ್ತಾರೆಯೇ?" ಎಂದು ಪ್ರಶ್ನಿಸಿದರು.

ತಮ್ಮ ಪ್ರತಿಭಟನೆಯ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡಿದ್ದು, ಮಹಾರಾಷ್ಟ್ರ ಕಾಂಗ್ರೆಸ್‌ನ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಉದ್ಧವ್ ತಿಳಿಸಿದರು. ಸೇನಾ (ಯುಬಿಟಿ) ಮತ್ತು ಕಾಂಗ್ರೆಸ್ ರಾಜ್ಯದಲ್ಲಿನ 'ಮಹಾ ವಿಕಾಸ್ ಅಘಾಡಿ' ಎಂಬ ವಿರೋಧ ಪಕ್ಷಗಳ ಮೈತ್ರಿಕೂಟದ ಭಾಗವಾಗಿವೆ.

ಪ್ರತಿಭಟನಾ ಮೆರವಣಿಗೆ ಶಿವಾಜಿ ಪಾರ್ಕ್‌ನಿಂದ ಪ್ರಾರಂಭವಾಗಿ ಸಿದ್ಧಿವಿನಾಯಕ ದೇವಾಲಯದವರೆಗೆ ಸಾಗಲಿದೆ. ಪ್ರತಿಭಟನೆ ವೇಳೆ ಯಾವುದೇ ರಾಜಕೀಯ ಪಕ್ಷದ ಧ್ವಜಗಳನ್ನು ಪ್ರದರ್ಶಿಸಲಾಗುವುದಿಲ್ಲ ಎಂದು ಅವರು ತಿಳಿಸಿದರು.

ಜುಲೈ 26 ರಂದು ಮುಂಬೈನಲ್ಲಿ ನಡೆಯಲಿರುವ ನಮ್ಮ ಶಾಂತಿಯುತ ಪ್ರತಿಭಟನೆಗೆ ಅಡ್ಡಿಪಡಿಸಲು ಪ್ರಯತ್ನಿಸುವವರಿಗೆ ಹೊಡೆಯುತ್ತೇವೆ ಎಂದು ರಾಜ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ದೌರ್ಜನ್ಯದ ಆರೋಪಗಳು ಮತ್ತು NEET ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದಲ್ಲಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಆಕ್ರೋಶವನ್ನು ವ್ಯಕ್ತಪಡಿಸಲು ಈ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದೆ ಎಂದು ಇಬ್ಬರೂ ನಾಯಕರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚಂದನವನದ ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ಮಕ್ಕಳೊಂದಿಗೆ ತನ್ನ ಜಾಹೀರಾತು ನೋಡಿದಾಗ ಮುಜುಗರಕ್ಕೊಳಗಾದ ಕರೀನಾ ಕಪೂರ್: ತೈಮೂರ್ ಪ್ರಶ್ನೆಗೆ ಬೆಬೋ ಬೇಸ್ತು!

D Bossಗೆ ಬಿಗ್​ ಶಾಕ್​; ಪ್ರದೋಷ್ ಮಾಫಿ ಸಾಕ್ಷಿಗೆ ಮತ್ತೆ ಕೋರ್ಟ್ ಒಪ್ಪಿಗೆ, ದರ್ಶನ್ ಅರ್ಜಿ ವಜಾ

ಇನ್ಸ್​ಪೆಕ್ಟರ್ ಧನಂಜಯ ಸರಿಯಾಗೇ ಹೇಳಿದ್ದಾರೆ; ಬಿಜೆಪಿಯವರು ರಣಹದ್ದುಗಳು, ಕೋಮುಗಲಭೆ ಆಗುವುದನ್ನೇ ಕಾಯುತ್ತಾರೆ: ಸಚಿವ ಯತೀಂದ್ರ

ಸಚಿನ್ ತೆಂಡುಲ್ಕರ್‌ರ ದೀರ್ಘಕಾಲೀನ ODI ದಾಖಲೆ ಮುರಿದ ಬ್ರೆಂಡನ್ ಟೇಲರ್; ಆದ್ರೆ ಒಂದು ಟ್ವಿಸ್ಟ್ ಇದೆ!