ಕೆ. ಸಿ. ವೇಣುಗೋಪಾಲ್ 
ದೇಶ

ಪರೀಕ್ಷಾ ಅಕ್ರಮಗಳ ವಿರುದ್ಧ ಕಾಂಗ್ರೆಸ್ ನಾಳೆ ದೇಶಾದ್ಯಂತ ಮೊಂಬತ್ತಿ ಮೆರವಣಿಗೆ, ಸತ್ಯಾಗ್ರಹ!

ಬೃಹತ್ ಮೊಂಬತ್ತಿ ಮೆರವಣಿಗೆ ಹಾಗೂ 'ಸತ್ಯಾಗ್ರಹ'ವನ್ನು ಆಯೋಜಿಸಲು ನಿರ್ದೇಶಿಸುವಂತೆ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಕಳುಹಿಸಲಾದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ನವದೆಹಲಿ: NEET ಮತ್ತು CBSE ಪರೀಕ್ಷೆಗಳಲ್ಲಿನ ಅಕ್ರಮಗಳು ಹಾಗೂ ಮೋದಿ ಸರ್ಕಾರದ ದಮನಕಾರಿ ಕ್ರಮದ ವಿರುದ್ಧ ನಾಳೆ ಸಂಜೆ ಮೊಂಬತ್ತಿ ಮೆರವಣಿಗೆ ಹಾಗೂ 'ಸತ್ಯಾಗ್ರಹ'ವನ್ನು ನಡೆಸುವಂತೆ ಕಾಂಗ್ರೆಸ್ ತನ್ನ ರಾಜ್ಯ ಘಟಕಗಳಿಗೆ ಸೂಚಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ತಮ್ಮ ವ್ಯಾಪ್ತಿಯಲ್ಲಿ ಬೃಹತ್ ಮೊಂಬತ್ತಿ ಮೆರವಣಿಗೆ ಹಾಗೂ 'ಸತ್ಯಾಗ್ರಹ'ವನ್ನು ಆಯೋಜಿಸಲು ನಿರ್ದೇಶಿಸುವಂತೆ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಕಳುಹಿಸಲಾದ ಸುತ್ತೋಲೆಯಲ್ಲಿ ಪಕ್ಷದ ಸಂಘಟನಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಷ್ಟ್ರವ್ಯಾಪಿ ಪ್ರತಿಭಟನೆ ಮತ್ತು ನವದೆಹಲಿಯಲ್ಲಿ ನಡೆದ ಅಭೂತಪೂರ್ವ ಘಟನೆಗಳ ಮುಂದುವರಿಕೆಯಾಗಿ NEET ಮತ್ತು CBSE ಪರೀಕ್ಷಾ ಅಕ್ರಮಗಳು ಹಾಗೂ ನರೇಂದ್ರ ಮೋದಿ ಸರ್ಕಾರದಡಿಯ ದಮನಕಾರಿ ಕ್ರಮಗಳಿಗೆ ಪ್ರತಿಕ್ರಿಯೆಯಾಗಿ ಗಂಭೀರ ಮತ್ತು ನಿರ್ಣಾಯಕ ಕಾರ್ಯಕ್ರಮ ಆಯೋಜಿಸುವಂತೆ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಗಳಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪ್ರತಿ ಮೆರವಣಿಗೆಯು ಮಹಾತ್ಮ ಗಾಂಧಿ ಅಥವಾ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯತ್ತ ಸಾಗಿ ಅಲ್ಲಿಯೇ ಕೊನೆಯಾಗಬೇಕು. ವ್ಯವಸ್ಥಿತ ವೈಫಲ್ಯಗಳಿಂದಾಗಿ ತಮ್ಮ ಭವಿಷ್ಯವು ಸಂಕಷ್ಟಕ್ಕೆ ಸಿಲುಕಿರುವ ದೇಶದ ವಿದ್ಯಾರ್ಥಿಗಳು ಮತ್ತು ಯುವಜನರೊಂದಿಗೆ ದೃಢವಾದ ಒಗ್ಗಟ್ಟನ್ನು ಪ್ರದರ್ಶಿಸಲು ಈ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಮತ್ತು ದೇಶದ ಯುವಜನರ ಭವಿಷ್ಯವನ್ನು ರಕ್ಷಿಸುವಲ್ಲಿ ವಿಫಲವಾಗಿರುವುದಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ನಾವು ಸ್ಪಷ್ಟವಾಗಿ ಒತ್ತಾಯಿಸಬೇಕು ಎಂದು ವೇಣುಗೋಪಾಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಪರೀಕ್ಷೆ ನಡೆಸುವ NTA ನಲ್ಲಿ ಮೇಜರ್ ಸರ್ಜರಿ: 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ಪಾಕಿಸ್ತಾನದಲ್ಲಿ ರಕ್ತದೋಕುಳಿ: ಸೇನಾ ಚೆಕ್‌ಪಾಯಿಂಟ್‌ ಧ್ವಂಸ; 15 Pak ಸೈನಿಕರು ಬಲಿ, 12 ಉಗ್ರರು ಸಾವು!

'ಇನ್‌ಸ್ಟಾಗ್ರಾಮ್‌ನಲ್ಲಿ ಯುವಕರೊಂದಿಗೆ ತೊಡಗಿಸಿಕೊಳ್ಳಿ, ರೀಲ್‌ಗಳನ್ನು ಪೋಸ್ಟ್ ಮಾಡಿ': ಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ!

10 ವರ್ಷ ಜೈಲು ಶಿಕ್ಷೆ, 1 ಕೋಟಿ ರೂ ದಂಡ: ಪ್ರಶ್ನೆಪತ್ರಿಕೆ ಸೋರಿಕೆ, ಕಠಿಣ ಶಿಕ್ಷೆ ವಿಧಿಸುವ ಮಸೂದೆ ಜಾರಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ!