ರಾಹುಲ್ ಗಾಂಧಿ 
ದೇಶ

'ಮಧ್ಯರಾತ್ರಿಯ ಈ ಕಳಪೆ ವಿಡಿಯೋದಿಂದ ವಿದ್ಯಾರ್ಥಿಗಳ ಅವಮಾನಿಸಬೇಡಿ': Modi ವಿರುದ್ಧ Rahul gandhi ವಾಗ್ದಾಳಿ

ಮೋದಿ ಅವರೆ, ನಮ್ಮ ವಿದ್ಯಾರ್ಥಿಗಳು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಆಗ್ರಹಿಸುತ್ತಿದ್ದಾರೆ. ಈ ಕಳಪೆ ಮಧ್ಯರಾತ್ರಿ ವಿಡಿಯೊ ಮೂಲಕ ಅವರ ಬುದ್ಧಿವಂತಿಕೆಗೆ ಅವಮಾನ ಮಾಡಬೇಡಿ.

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೀಡಿದ ಪ್ರತಿಕ್ರಿಯೆ ಕುರಿತು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಪ್ರಮುಖ ಬೇಡಿಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯಾಗಿದೆ ಎಂದು ಹೇಳಿರುವ ಅವರು, ಪ್ರಧಾನಿ ಬಿಡುಗಡೆ ಮಾಡಿದ ಮಧ್ಯರಾತ್ರಿಯ ವಿಡಿಯೊವನ್ನು ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (X)ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, "ಮೋದಿ ಅವರೆ, ನಮ್ಮ ವಿದ್ಯಾರ್ಥಿಗಳು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಆಗ್ರಹಿಸುತ್ತಿದ್ದಾರೆ. ಈ ಕಳಪೆ ಮಧ್ಯರಾತ್ರಿ ವಿಡಿಯೊ ಮೂಲಕ ಅವರ ಬುದ್ಧಿವಂತಿಕೆಗೆ ಅವಮಾನ ಮಾಡಬೇಡಿ" ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಕ್ಷಣ ಮೂರು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ರಾಹುಲ್ ಗಾಂಧಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದೇಶದ ವಿದ್ಯಾರ್ಥಿಗಳಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ, ಪರೀಕ್ಷಾ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದ ಬೆಳವಣಿಗೆಗಳ ನಡುವೆಯೇ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ತನ್ನ ವಾಗ್ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಈ ಬೆಳವಣಿಗೆ ನೀಟ್ ವಿವಾದ ಹೊಸ ರಾಜಕೀಯ ತಿರುವು ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?

ನಟ ಕಿರಣ್ ರಾಜ್ ಮೇಲೆ ಏಕಾಏಕಿ ಸಿಂಹ ದಾಳಿ, ಸ್ಪಷ್ಟನೆ ಕೊಟ್ಟ 'ಕರ್ಣ' ಹೇಳಿದ್ದೇನು? Video

Explainer: ಸೌದಿ ಅರೇಬಿಯಾ ಮೇಲೆ ಹೌತಿ ದಾಳಿ; ಪಾಕ್, ಟರ್ಕಿ ಮೌನ; ಹಳ್ಳ ಹಿಡಿದ ಇಸ್ಲಾಮಿಕ್ NATO?

ಇರಾನ್-ಅಮೆರಿಕ ಸಂಘರ್ಷ: ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು