ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ತಡರಾತ್ರಿ ದೇಶದ ಯುವಕರನ್ನು ಉದ್ದೇಶಿಸಿ ಮಾತನಾಡಿದ ವೀಡಿಯೊವನ್ನು ಹಂಚಿಕೊಂಡಿದ್ದರು. ಈ ವೀಡಿಯೊದ ಮೂಲಕ ಪ್ರಧಾನಿ ಮೋದಿ ಪತ್ರಿಕೆ ಸೋರಿಕೆ ಸಮಸ್ಯೆಯ ಬಗ್ಗೆ ಅವರೊಂದಿಗೆ ಮಾತನಾಡಿದರು. ಪ್ರಧಾನಿ ಮೋದಿ ಈ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಕೆಲ ಗಂಟೆಗಳಲ್ಲೇ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿತು. ವೀಡಿಯೊ ಅಪ್‌ಲೋಡ್ ಆಗಿ 24 ಗಂಟೆಗಳು ಕಳೆದಿಲ್ಲ, ಇದು ಈಗಾಗಲೇ ಸುಮಾರು 280 ಮಿಲಿಯನ್ ವೀಕ್ಷಣೆ ಕಂಡಿದೆ. ಇದೇ ವೇಳೆ ಪ್ರಧಾನಿ ಮೋದಿಯವರ ಇನ್‌ಸ್ಟಾಗ್ರಾಮ್ ಖಾತೆಯು 11 ಲಕ್ಷ ಹೆಚ್ಚುವರಿ ಫಾಲೋವರ್‌ಗಳನ್ನು ಗಳಿಸಿದೆ.
ಪ್ರಧಾನಿ ಮೋದಿಯವರ ವೀಡಿಯೊ ವೈರಲ್ ಆಗುತ್ತಿದ್ದಂತೆ, ಅವರ ಇನ್‌ಸ್ಟಾಗ್ರಾಮ್ ಫಾಲೋವರ್‌ಗಳು ಸಹ ಹೆಚ್ಚಾಗಲು ಪ್ರಾರಂಭಿಸಿತ್ತು. 12 ಗಂಟೆಗಳಲ್ಲಿ ಪ್ರಧಾನಿ ಮೋದಿಯವರ ಫಾಲೋವರ್‌ಗಳು 11 ಲಕ್ಷ ಹೆಚ್ಚಾಗಿದೆ. ಮೋದಿ ವೀಡಿಯೊವನ್ನು ಅಪ್‌ಲೋಡ್ ಮಾಡಿದಾಗ, ಅವರ ಇನ್‌ಸ್ಟಾಗ್ರಾಮ್ ಖಾತೆಯು 101 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಅದು 102 ಮಿಲಿಯನ್ ಫಾಲೋವರ್‌ಗಳನ್ನು ತಲುಪಿತ್ತು. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಇನ್‌ಸ್ಟಾಗ್ರಾಮ್ ರೀಲ್‌ಗಳು ಮತ್ತು ಸಂವಾದಾತ್ಮಕ ಮಾತುಗಳ ಮೂಲಕ ಯುವಜನರೊಂದಿಗೆ ಸಂಪರ್ಕ ಸಾಧಿಸುವಂತೆ ಸಲಹೆ ನೀಡಿದರು.
ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಇದ್ದಾರೆ. ಇದು ನಾವೆಲ್ಲರೂ ಸಂಪರ್ಕ ಸಾಧಿಸಬೇಕಾದ ನಾಗರಿಕರ ಸಂಭಾವ್ಯ ವಿಭಾಗವಾಗಿದೆ ಎಂದು ಹೇಳಿದರು. ಪ್ರಧಾನಿ ಮೋದಿ ಗುರುವಾರ ರಾತ್ರಿ ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ನಿಭಾಯಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಿರುವುದಾಗಿ ಘೋಷಿಸಿದರು.