ಪ್ರಧಾನಿ ನರೇಂದ್ರ ಮೋದಿ  
ದೇಶ

NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಇಂದು ಸಂಪುಟ ಸಭೆಯಲ್ಲಿ ತೀರ್ಮಾನ: PM ನರೇಂದ್ರ ಮೋದಿ-Video

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ (fast track court) ಸ್ಥಾಪಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, ಅದರ ರಚನೆ ಹಾಗೂ ಇತರೆ ಕಠಿಣ ಕ್ರಮಗಳ ಕುರಿತು ಸಂಬಂಧಿತ ಇಲಾಖೆಗಳು ಕಾರ್ಯಾರಂಭಿಸಿವೆ ಎಂದು ತಿಳಿಸಿದ್ದಾರೆ.

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಗುರುವಾರ ತಡರಾತ್ರಿ ಘೋಷಿಸಿದ್ದಾರೆ. ಇಂದು ಶುಕ್ರವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಿಂದಿಯಲ್ಲಿ ಬಿಡುಗಡೆ ಮಾಡಿದ ವಿಡಿಯೊ ಸಂದೇಶದಲ್ಲಿ ಮಾತನಾಡಿದ ಮೋದಿ, ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ (fast track court) ಸ್ಥಾಪಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, ಅದರ ರಚನೆ ಹಾಗೂ ಇತರೆ ಕಠಿಣ ಕ್ರಮಗಳ ಕುರಿತು ಸಂಬಂಧಿತ ಇಲಾಖೆಗಳು ಕಾರ್ಯಾರಂಭಿಸಿವೆ ಎಂದು ತಿಳಿಸಿದ್ದಾರೆ.

ಕಠಿಣ ಶಿಕ್ಷೆಯ ವಿಧಾನದೊಂದಿಗೆ ಸಂಬಂಧಿಸಿದ ಕರಡು ಪ್ರಸ್ತಾವನೆ ಸಿದ್ಧವಾಗಿದೆ ಎಂದು ಇಲಾಖೆಗಳು ತಡರಾತ್ರಿ ನನಗೆ ಮಾಹಿತಿ ನೀಡಿವೆ. ಅದನ್ನು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುತ್ತದೆ. ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಸೋಮವಾರದಿಂದ ಸಂಸತ್ತಿನ ಅಧಿವೇಶನದ ಎರಡನೇ ವಾರ ಆರಂಭವಾಗಲಿದ್ದು, ಈ ಪ್ರಸ್ತಾವಿತ ಕ್ರಮಗಳನ್ನು ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸುವುದು ನಮ್ಮ ಪ್ರಯತ್ನವಾಗಿರುತ್ತದೆ ಎಂದು ಹೇಳಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆಗೆ ಸರ್ಕಾರದ ಮೊದಲ ಪ್ರತಿಕ್ರಿಯೆ ವಿದ್ಯಾರ್ಥಿಗಳ ಒಂದು ಶೈಕ್ಷಣಿಕ ವರ್ಷ ವ್ಯರ್ಥವಾಗದಂತೆ ನೋಡಿಕೊಳ್ಳುವುದಾಗಿತ್ತು. ಆದ್ದರಿಂದ ಮರುಪರೀಕ್ಷೆಯನ್ನು ಸಮಯಕ್ಕೆ ಸರಿಯಾಗಿ ನಡೆಸಿ, ಫಲಿತಾಂಶವನ್ನೂ ಶೀಘ್ರ ಪ್ರಕಟಿಸುವಂತೆ ನಾವು ನೋಡಿಕೊಂಡೆವು. ಈಗ ಫಲಿತಾಂಶ ಪ್ರಕಟವಾಗಿದ್ದು, ಯಶಸ್ವಿಯಾದ ವಿದ್ಯಾರ್ಥಿಗಳು ಸಂತೋಷದಿಂದ ಪ್ರವೇಶ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ಅತ್ಯಂತ ನೋವುಂಟು ಮಾಡುವ ವಿಷಯವಾಗಿದೆ ಎಂದು ಹೇಳಿದ ಮೋದಿ, ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತ್ವರಿತ ಕ್ರಮ ಕೈಗೊಂಡಿದ್ದು, ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರದ ಭರವಸೆಗೆ ಮಣಿದ Sonam Wangchuk: 26 ದಿನಗಳ ಉಪವಾಸ ಅಂತ್ಯ, Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!

ಸತತ 13ನೇ ದಿನವೂ ಇರಾನ್ ಮೇಲೆ ಅಮೆರಿಕ ಕ್ಷಿಪಣಿಗಳ ಸುರಿಮಳೆ: ಸೇನಾ ನೆಲೆಗಳೇ ಪ್ರಮುಖ ಗುರಿ, 'ಇನ್ನೂ ದೊಡ್ಡ ಹೊಡೆತ ನೀಡುತ್ತೇವೆ'- ಟ್ರಂಪ್ ಎಚ್ಚರಿಕೆ

Iranಗೆ Trump ಬಿಗ್ ಶಾಕ್: ಮುಟ್ಟುಗೋಲು ಆಸ್ತಿಯಿಂದಲೇ ಹಡಗುಗಳ ನಷ್ಟ ಭರಿಸಲು ಆದೇಶ..!

NEET Paper Leak: ವಿದ್ಯಾರ್ಥಿಗಳ ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರದಿಂದ ಮೊದಲ ಕ್ರಮ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿ

INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ.. ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಲೇಬೇಕು': ರಾಹುಲ್ ಗಾಂಧಿ